ಯೆರೆಮೀಯ 49:30 - ಪರಿಶುದ್ದ ಬೈಬಲ್30 ಹಾಚೋರಿನ ನಿವಾಸಿಗಳೇ, ಬೇಗನೆ ಓಡಿಹೋಗಿರಿ, ಅಡಗಿಕೊಳ್ಳುವದಕ್ಕೆ ಒಂದು ಒಳ್ಳೆಯ ಸ್ಥಳವನ್ನು ಹುಡುಕಿಕೊಳ್ಳಿರಿ.” ಇದು ಯೆಹೋವನ ಸಂದೇಶ. “ನೆಬೂಕದ್ನೆಚ್ಚರನು ನಿಮ್ಮ ವಿರುದ್ಧ ಯೋಜನೆ ಮಾಡಿದ್ದಾನೆ. ನಿಮ್ಮನ್ನು ಸೋಲಿಸಲು ಒಳ್ಳೆಯ ಸಂಚನ್ನು ಮಾಡಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯೆಹೋವನು ಇಂತೆನ್ನುತ್ತಾನೆ, “ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕೆಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಬಗೆದು ನಿಮ್ಮ ನಾಶಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಸರ್ವೇಶ್ವರ ಹೀಗೆನ್ನುತ್ತಾರೆ: “ಹಾಜೋರಿನವರೇ, ಓಡಿಹೋಗಿ. ದೂರ ಹೋಗಿ, ಒಳಪ್ರಾಂತ್ಯಗಳಲ್ಲಿ ಅವಿತುಕೊಳ್ಳಿ. ಏಕೆಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಮಾಡಬೇಕೆಂದಿದ್ದಾನೆ. ನಿಮ್ಮ ವಿನಾಶಕ್ಕೆ ಉಪಾಯವನ್ನು ಹೂಡಿದ್ದಾನೆ. ‘ಬಾಬಿಲೋನಿನವರೇ, ಏಳೀ! ನೆಮ್ಮದಿಯಿಂದ, ನಿರ್ಭಯವಾಗಿ ಪ್ರತ್ಯೇಕ ವಾಸಿಸುವ ಆ ರಾಷ್ಟ್ರದ ಮೇಲೆ ದಾಳಿಮಾಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯೆಹೋವನು ಇಂತೆನ್ನುತ್ತಾನೆ - ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಬಗೆದು ನಿಮ್ಮ ನಾಶನಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, ದೂರಕ್ಕೆ ಹೋಗಿ ಬಿಡಿರಿ, ಆಳವಾದ ಗುಹೆಯಲ್ಲಿ ವಾಸವಾಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ; ನಿಮಗೆ ವಿರೋಧವಾಗಿ ಯೋಜನೆಯನ್ನು ಮಾಡಿದ್ದಾನೆ. ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.