Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:37 - ಪರಿಶುದ್ದ ಬೈಬಲ್‌

37 ಅವರ ಶತ್ರುಗಳ ಕಣ್ಣೆದುರಿನಲ್ಲಿಯೇ ನಾನು ಏಲಾಮನ್ನು ಚೂರುಚೂರು ಮಾಡುವೆನು. ಏಲಾಮ್ಯರನ್ನು ಕೊಲ್ಲಬೇಕೆಂದಿರುವ ಜನರೆದುರಿಗೆ ನಾನು ಎಲಾಮ್ಯರನ್ನು ಮುರಿದುಬಿಡುವೆನು. ನಾನು ಅವರ ಮೇಲೆ ಭಯಂಕರವಾದ ವಿಪತ್ತುಗಳನ್ನು ತರುವೆನು. ನನಗೆ ಎಷ್ಟು ಕೋಪ ಬಂದಿದೆ ಎಂಬುದನ್ನು ನಾನು ಅವರಿಗೆ ತೋರಿಸುವೆನು.” ಇದು ಯೆಹೋವನ ನುಡಿ. “ಏಲಾಮನ್ನು ಬೆನ್ನಟ್ಟಲು ನಾನೊಂದು ಖಡ್ಗವನ್ನು ಕಳುಹಿಸುವೆನು. ನಾನು ಏಲಾಮ್ಯರನ್ನೆಲ್ಲ ಕೊಂದುಹಾಕುವವರೆಗೆ ಆ ಖಡ್ಗವು ಅವರನ್ನು ಬೆನ್ನಟ್ಟುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಏಲಾಮ್ಯರು ತಮ್ಮ ಪ್ರಾಣಹುಡುಕುವ ಶತ್ರುಗಳಿಂದ ಕಂಗೆಡುವಂತೆ ಮಾಡುವೆನು; ನನ್ನ ರೋಷಾಗ್ನಿಯ ವಿಪತ್ತನ್ನು ಅವರ ಮೇಲೆ ಬರಮಾಡುವೆನು; ಇದು ಯೆಹೋವನ ನುಡಿ; ಅವರು ನಿರ್ಮೂಲವಾಗುವ ತನಕ ಅವರ ಹಿಂದೆ ಖಡ್ಗವನ್ನು ಅಟ್ಟುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ತಮ್ಮ ಪ್ರಾಣ ಹುಡುಕುವ ಶತ್ರುಗಳ ಮುಂದೆ ಆ ಏಲಾಮ್ಯರು ನಡುಗುವಂತೆ ಮಾಡುವೆನು. ನನ್ನ ಕೋಪಾಗ್ನಿಯ ಬಿಸಿ ಅವರಿಗೆ ತಟ್ಟುವಂತೆ ಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ. ಅವರು ನಿರ್ಮೂಲವಾಗುವ ತನಕ ಅವರ ಹಿಂದೆಯೇ ಖಡ್ಗವನ್ನು ಕಳುಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಏಲಾಮ್ಯರು ತಮ್ಮ ಪ್ರಾಣ ಹುಡುಕುವ ಶತ್ರುಗಳಿಂದ ಕಂಗೆಡುವಂತೆ ಮಾಡುವೆನು; ನನ್ನ ರೋಷಾಗ್ನಿಯ ವಿಪತ್ತನ್ನು ಅವರ ಮೇಲೆ ಬರಮಾಡುವೆನು; ಇದು ಯೆಹೋವನ ನುಡಿ; ಅವರು ನಿರ್ಮೂಲವಾಗುವ ತನಕ ಅವರ ಹಿಂದೆ ಖಡ್ಗವನ್ನು ಅಟ್ಟುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಏಕೆಂದರೆ ಏಲಾಮನ್ನು ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರುವಂತೆ ಮಾಡುವೆನು; ಅವರ ಮೇಲೆ ಕೇಡನ್ನೂ, ನನ್ನ ಕೋಪದ ಉಗ್ರವನ್ನೂ ಬರಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವನನ್ನು ಮುಗಿಸಿಬಿಡುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:37
19 ತಿಳಿವುಗಳ ಹೋಲಿಕೆ  

ನಾನು ಯೆಹೂದದ ಜನರನ್ನು ಬೇರೆ ಜನಾಂಗಗಳಲ್ಲಿ ಚದರಿಸಿಬಿಡುತ್ತೇನೆ. ಅವರು ಮತ್ತು ಅವರ ತಂದೆಗಳು ಎಂದೂ ಅರಿಯದ ಅಪರಿಚಿತ ದೇಶಗಳಲ್ಲಿ ಅವರು ವಾಸಿಸುವರು. ನಾನು ಖಡ್ಗಧಾರಿಗಳಾದ ಜನರನ್ನು ಕಳುಹಿಸುತ್ತೇನೆ. ಅವರು ಯೆಹೂದದ ಜನರನ್ನು ನಿರ್ಮೂಲವಾಗುವವರೆಗೆ ಕೊಲ್ಲುವರು.”


ಇನ್ನು ಮುಂದೆ ಮೋವಾಬ್ ಪಟ್ಟಣವು ಹೊಗಳಿಕೆಗೆ ಪಾತ್ರವಾಗುವುದಿಲ್ಲ. ಹೆಷ್ಬೋನ್ ಪಟ್ಟಣದ ಜನರು ಮೋವಾಬನ್ನು ಸೋಲಿಸುವ ಯುಕ್ತಿ ಮಾಡುವರು. ಅವರು ಆ ಜನಾಂಗವನ್ನು ನಾಶಮಾಡುವ ಆಲೋಚನೆ ಮಾಡುವರು. ಮದ್ಮೆನೆ ಪಟ್ಟಣವೇ, ನೀನೂ ಸಹ ಸುಮ್ಮನಾಗುವೆ. ಖಡ್ಗವು ನಿನ್ನನ್ನು ಬೆನ್ನಟ್ಟುವದು.


ಅವನ ಸುತ್ತಲೂ ಇರುವವರನ್ನೆಲ್ಲ ನಾನು ಸುತ್ತಮುತ್ತಲಿನ ದೇಶಗಳಿಗೆ ಓಡಿಸಿಬಿಡುವೆನು. ಅವನ ಕೆಲಸಗಾರರನ್ನು ಮತ್ತು ಅವನ ಸೈನ್ಯವನ್ನು ಗಾಳಿಗೆ ತೂರಿಬಿಡುವೆನು. ಮತ್ತು ಅವರನ್ನು ಖಡ್ಗದೊಡನೆ ಬೆನ್ನಟ್ಟುವೆನು.


ನಿನ್ನ ಜನರಲ್ಲಿ ಮೂರನೆ ಒಂದು ಭಾಗ ಪಟ್ಟಣದೊಳಗೆ ರೋಗದಿಂದಲೂ ಹಸಿವಿನಿಂದಲೂ ಸಾಯುವರು. ಮೂರರಲ್ಲಿ ಇನ್ನೊಂದು ಭಾಗ ಪಟ್ಟಣದ ಹೊರಗೆ ರಣರಂಗದಲ್ಲಿ ಸಾಯುವರು. ಅನಂತರ ನಾನು ನನ್ನ ಖಡ್ಗವನ್ನು ಇರಿದು ಉಳಿದವರನ್ನು ಬಹುದೂರದ ದೇಶಕ್ಕೆ ಅಟ್ಟಿಬಿಡುವೆನು.


ಖಡ್ಗವೇ, ಬಾಬಿಲೋನಿನ ಯಾಜಕರನ್ನೂ ಸುಳ್ಳುಪ್ರವಾದಿಗಳನ್ನೂ ಕೊಲ್ಲು! ಅವರು ಮೂರ್ಖರಂತಾಗುವರು. ಖಡ್ಗವೇ, ಬಾಬಿಲೋನಿನ ಸೈನಿಕರನ್ನು ಕೊಲ್ಲು, ಆ ಸೈನಿಕರು ಭಯಭೀತರಾಗಿರುವರು.


ಅವರ ಗುಡಾರಗಳನ್ನು ಮತ್ತು ಹಿಂಡುಗಳನ್ನು ತೆಗೆದುಕೊಂಡು ಹೋಗಲಾಗುವುದು. ಅವರ ಗುಡಾರಗಳನ್ನು, ಅವರ ಎಲ್ಲಾ ವಸ್ತುಗಳನ್ನು ಎತ್ತಿಕೊಂಡು ಹೋಗಲಾಗುವುದು. ಅವರ ಶತ್ರುಗಳು ಒಂಟೆಗಳನ್ನು ತೆಗೆದುಕೊಂಡು ಹೋಗುವರು. ‘ನಮ್ಮ ಸುತ್ತಲೂ ಭಯಂಕರ ಘಟನೆಗಳು ನಡೆಯುತ್ತಿವೆ’ ಎಂದು ತಮ್ಮತಮ್ಮಲ್ಲಿಯೇ ಕೂಗಿಕೊಳ್ಳುವರು.


ದಮಸ್ಕ ನಗರವು ನಿಬರ್ಲವಾಗಿದೆ. ಜನರು ಓಡಿಹೋಗಬಯಸುತ್ತಾರೆ, ಜನರು ಗಾಬರಿಗೊಂಡಿದ್ದಾರೆ. ಪ್ರಸವವೇದನೆಪಡುವ ಸ್ತ್ರೀಯಂತೆ ಸಂಕಟಪಡುತ್ತಿದ್ದಾರೆ.


ಯೆಹೋವನು ತಾನು ಎರಗಬೇಕಾದ ಪ್ರಾಣಿಯ ಮೇಲೆ ಹಾರಾಡುವ ರಣಹದ್ದಿನಂತೆ ಇರುವನು. ಆತನು ಬೊಚ್ರ ನಗರದ ಮೇಲೆ ತನ್ನ ರೆಕ್ಕೆಗಳನ್ನು ಹರಡುವ ರಣಹದ್ದಿನಂತಿದ್ದಾನೆ. ಆ ಸಮಯದಲ್ಲಿ ಎದೋಮಿನ ಸೈನಿಕರು ಭಯಪಡುವರು. ಪ್ರಸವವೇದನೆಪಡುವ ಹೆಂಗಸಿನಂತೆ ಅವರು ಭಯದಿಂದ ಗೋಳಾಡುವರು.


ಆದರೆ ಸರ್ವಶಕ್ತನಾದ ಯೆಹೋವನು ಹೀಗೆನ್ನುವನು, “ನಾನು ಎಲ್ಲೆಡೆಗಳಿಂದಲೂ ನಿಮಗೆ ಆಪತ್ತುಗಳನ್ನು ತರುವೆನು. ನೀವೆಲ್ಲರೂ ಭಯದಿಂದ ಓಡಿಹೋಗುವಿರಿ. ಯಾರೂ ನಿಮ್ಮನ್ನು ಪುನಃ ಒಂದಡೆ ಸೇರಿಸಲಾರರು.”


“ಮೋವಾಬ್ ನುಚ್ಚುನೂರಾಯಿತು. ಜನರು ಕಿರುಚುತ್ತಿದ್ದಾರೆ. ಮೋವಾಬ್ ಶರಣಾಗತವಾಯಿತು. ಮೋವಾಬ್ ಈಗ ನಾಚಿಕೆಪಡುತ್ತಿದೆ. ಜನರು ಮೋವಾಬನ್ನು ತಮಾಷೆ ಮಾಡುತ್ತಾರೆ. ಆದರೆ ಇಲ್ಲಿ ನಡೆದ ಘಟನೆಗಳು ಅವರನ್ನು ಭೀತರನ್ನಾಗಿ ಮಾಡಿವೆ.”


ಜನರನ್ನು ಸಂಪೂರ್ಣವಾಗಿ ಶಿಕ್ಷಿಸುವವರೆಗೆ ಯೆಹೋವನು ಕೋಪಿಷ್ಟನಾಗಿಯೇ ಇರುವನು. ಯೆಹೂದದ ಜನರಾದ ನೀವು ಅದನ್ನು ಕೊನೆಯ ದಿನಗಳಲ್ಲಿ ತಿಳಿದುಕೊಳ್ಳುವಿರಿ.


ನಾನು ನಿಮ್ಮನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಡುವೆನು. ಕತ್ತಿಯನ್ನು ಇರಿದು ನಿಮ್ಮನ್ನು ನಾಶಮಾಡುವೆ. ನಿಮ್ಮ ಭೂಮಿ ಬರಿದಾಗುವುದು ಮತ್ತು ನಿಮ್ಮ ಪಟ್ಟಣಗಳು ನಾಶವಾಗುವವು.


ಭೂಲೋಕದ ಜನರೇ, ಕೇಳಿರಿ, ಆ ಜನರು ಮಾಡಿದ ಎಲ್ಲಾ ಕುಯುಕ್ತಿಗಳಿಗಾಗಿ ನಾನು ಯೆಹೂದ ಜನರಿಗೆ ವಿನಾಶವನ್ನು ತರುವೆನು. ಅವರು ನನ್ನ ಸಂದೇಶಗಳಿಗೆ ಗಮನ ಕೊಡದೆ ಇದ್ದುದರಿಂದ, ಅವರು ನನ್ನ ಧರ್ಮಶಾಸ್ತ್ರವನ್ನು ಅಸಡ್ಡೆ ಮಾಡಿದ್ದರಿಂದ ಇದೆಲ್ಲ ನಡೆಯುವುದು.”


ಏಲಾಮಿನ ಅಧಿಪತ್ಯ ನನಗೆ ಸೇರಿದ್ದು ಎಂಬುದನ್ನು ನಾನು ಏಲಾಮ್ಯರಿಗೆ ತೋರಿಸಿಕೊಡುವೆನು. ನಾನು ಅಲ್ಲಿಯ ರಾಜನನ್ನು ಮತ್ತು ರಾಜನ ಅಧಿಕಾರಿಗಳನ್ನು ನಾಶಮಾಡುವೆನು.” ಇದು ಯೆಹೋವನ ನುಡಿ.


ಇಸ್ರೇಲಿನ ದೇವರಾದ ಸರ್ವಶಕ್ತನಾದ ಯೆಹೋವನ ಸಂದೇಶವಿದು: “ಯೆಹೂದದ ಜನರು ಕಹಿಯಾದ ಆಹಾರವನ್ನು ತಿನ್ನುವಂತೆ ನಾನು ಬೇಗನೆ ಮಾಡುವೆನು; ಅವರು ವಿಷಮಿಶ್ರಿತ ನೀರನ್ನು ಕುಡಿಯುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು