ನಿನ್ನನ್ನು ನೋಡುತ್ತಿದ್ದ ಆ ಯೆಹೂದ್ಯರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಇಲ್ಲಿಗೆ ಕರೆಸುತ್ತೇನೆ. ಅವನು ನನ್ನ ಸೇವಕನಾಗಿದ್ದಾನೆ. ನಾನು ಈ ಸ್ಥಳದಲ್ಲಿ ಹೂಳಿದ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಸ್ಥಾಪಿಸುತ್ತೇನೆ. ನೆಬೂಕದ್ನೆಚ್ಚರನು ಈ ಕಲ್ಲುಗಳ ಮೇಲೆ ತನ್ನ ಗುಡಾರವನ್ನು ಹಾಕುವನು.
ಅವರ ಶತ್ರುಗಳ ಕಣ್ಣೆದುರಿನಲ್ಲಿಯೇ ನಾನು ಏಲಾಮನ್ನು ಚೂರುಚೂರು ಮಾಡುವೆನು. ಏಲಾಮ್ಯರನ್ನು ಕೊಲ್ಲಬೇಕೆಂದಿರುವ ಜನರೆದುರಿಗೆ ನಾನು ಎಲಾಮ್ಯರನ್ನು ಮುರಿದುಬಿಡುವೆನು. ನಾನು ಅವರ ಮೇಲೆ ಭಯಂಕರವಾದ ವಿಪತ್ತುಗಳನ್ನು ತರುವೆನು. ನನಗೆ ಎಷ್ಟು ಕೋಪ ಬಂದಿದೆ ಎಂಬುದನ್ನು ನಾನು ಅವರಿಗೆ ತೋರಿಸುವೆನು.” ಇದು ಯೆಹೋವನ ನುಡಿ. “ಏಲಾಮನ್ನು ಬೆನ್ನಟ್ಟಲು ನಾನೊಂದು ಖಡ್ಗವನ್ನು ಕಳುಹಿಸುವೆನು. ನಾನು ಏಲಾಮ್ಯರನ್ನೆಲ್ಲ ಕೊಂದುಹಾಕುವವರೆಗೆ ಆ ಖಡ್ಗವು ಅವರನ್ನು ಬೆನ್ನಟ್ಟುವುದು.