Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:6 - ಪರಿಶುದ್ದ ಬೈಬಲ್‌

6 “ಅಮ್ಮೋನ್ಯರನ್ನು ಸೆರೆಯಾಳುಗಳನ್ನಾಗಿ ಕೊಂಡೊಯ್ಯಲಾಗುವುದು. ಆದರೆ ಅಮ್ಮೋನ್ಯರನ್ನು ನಾನು ಪುನಃ ಹಿಂದಕ್ಕೆ ಕರೆತರುವ ಕಾಲ ಬರುವದು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ನೀಗಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ. ಎದೋಮ್ಯರನ್ನು ಕುರಿತದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:6
8 ತಿಳಿವುಗಳ ಹೋಲಿಕೆ  

“ಆದರೆ ಭವಿಷ್ಯದಲ್ಲಿ ನಾನು ಏಲಾಮಿಗೆ ಒಳ್ಳೆಯದನ್ನು ಮಾಡುವೆನು.” ಇದು ಯೆಹೋವನ ನುಡಿ.


“ಮೋವಾಬಿನ ಜನರನ್ನು ಸೆರೆಹಿಡಿದುಕೊಂಡು ಹೋಗಲಾಗುವುದು. ಆದರೆ ಭವಿಷ್ಯದಲ್ಲಿ ನಾನು ಮೋವಾಬ್ಯರನ್ನು ಪುನಃ ಕರೆದು ತರುವೆನು” ಇದು ಯೆಹೋವನಿಂದ ಬಂದ ಸಂದೇಶ. ಮೋವಾಬಿನ ಕುರಿತಾದ ನ್ಯಾಯತೀರ್ಪು ಇದೇ.


ದೇವರು ಹೇಳಿದ್ದೇನೆಂದರೆ: “ಸೊದೋಮ್ ಮತ್ತು ಅದರ ಸುತ್ತಲೂ ಇದ್ದ ನಗರಗಳನ್ನು ನಾನು ನಾಶಮಾಡಿದೆನು. ನಾನು ಸಮಾರ್ಯವನ್ನು ನಾಶಮಾಡಿದೆನು. ಮತ್ತು ಜೆರುಸಲೇಮೇ, ನಾನು ನಿನ್ನನ್ನು ನಾಶಮಾಡುವೆ. ಆದರೆ ನಾನು ತಿರುಗಿ ಆ ಪಟ್ಟಣಗಳನ್ನು ಕಟ್ಟುವೆನು. ಜೆರುಸಲೇಮೇ, ನಾನು ನಿನ್ನನ್ನೂ ಕಟ್ಟುವೆನು.


ಆ ಜನರನ್ನೆಲ್ಲ ಅವರ ಶತ್ರುಗಳು ಸೋಲಿಸುವಂತೆ ಮಾಡುವೆನು. ಅವರ ಶತ್ರುಗಳು ಅವರನ್ನು ಕೊಲ್ಲಬಯಸುವರು. ನಾನು ಆ ಜನರನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಒಪ್ಪಿಸುವೆನು.” “ಬಹಳ ಹಿಂದೆ, ಈಜಿಪ್ಟ್ ದೇಶದಲ್ಲಿ ಶಾಂತಿ ನೆಲೆಸಿತ್ತು. ತೊಂದರೆಗಳ ಈ ದಿನಗಳ ತರುವಾಯ ಈಜಿಪ್ಟ್ ಪುನಃ ಶಾಂತಿಯ ಬೀಡಾಗುವುದು” ಇದು ಯೆಹೋವನ ನುಡಿ.


ಆದರೆ ಆಕೆ ತಾನು ಗಳಿಸಿದ ಹಣವನ್ನು ತನ್ನಲ್ಲಿ ಇಟ್ಟುಕೊಳ್ಳುವದಿಲ್ಲ. ತೂರ್ ತನ್ನ ವ್ಯಾಪಾರದಲ್ಲಿ ಗಳಿಸಿದ ಲಾಭವನ್ನು ಯೆಹೋವನಿಗಾಗಿ ಶೇಖರಿಸಿಟ್ಟಿದ್ದಾಳೆ. ಯೆಹೋವನನ್ನು ಸೇವಿಸುವವರಿಗೆ ಆ ಲಾಭವನ್ನು ಮೀಸಲಾಗಿಟ್ಟಿದ್ದಾಳೆ. ಹೀಗೆ ಯೆಹೋವನ ಸೇವಕರು ಹೊಟ್ಟೆತುಂಬ ಊಟಮಾಡುವರು, ಒಳ್ಳೆಯ ಬಟ್ಟೆ ಧರಿಸಿಕೊಳ್ಳುವರು.


ಬಳಿಕ ನಾನು ಅವರಿಗಾಗಿ ಪರಿತಪಿಸುವೆನು. ನಾನು ಪ್ರತಿಯೊಂದು ಕುಟುಂಬವನ್ನು ಅದರ ಸ್ವಾಸ್ತ್ಯಕ್ಕೂ ಅದರ ದೇಶಕ್ಕೂ ಕರೆತರುವೆನು.


ಉತ್ತರದ ರಾಜನು ಸುಂದರವಾದ ನಾಡಿನ ಮೇಲೆ ಧಾಳಿ ಮಾಡುವನು. ಉತ್ತರದ ರಾಜನು ಹಲವಾರು ದೇಶಗಳನ್ನು ಗೆದ್ದುಕೊಳ್ಳುವನು. ಆದರೆ ಎದೋಮ್ಯರು, ಮೋವಾಬ್ಯರು ಮತ್ತು ಅಮ್ಮೋನಿನ ನಾಯಕರು ಅವನ ಕೈಯಿಂದ ತಪ್ಪಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು