Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:7 - ಪರಿಶುದ್ದ ಬೈಬಲ್‌

7 ಈ ಸಂದೇಶ ಎದೋಮನ್ನು ಕುರಿತದ್ದು. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ತೇಮಾನ್ ಪಟ್ಟಣನಿವಾಸಿಗಳಲ್ಲಿ ಈಗ ಬುದ್ಧಿ ಉಳಿದಿಲ್ಲವೇ? ಎದೋಮಿನ ವಿವೇಕಿಗಳು ಒಳ್ಳೆಯ ಸಲಹೆಗಳನ್ನು ಕೊಡಲು ಸಮರ್ಥರಾಗಿಲ್ಲವೇ? ಅವರು ತಮ್ಮ ಜ್ಞಾನವನ್ನು ಕಳೆದುಕೊಂಡರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಎದೋಮನ್ನು ಕುರಿತು ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ತೇಮಾನ್ ನಾಡಿಗಿದ್ದ ಬುದ್ಧಿ ಏನಾಯಿತು? ವಿವೇಕಿಗಳಿಗಿದ್ದ ಆಲೋಚನಾಶಕ್ತಿ ಅಳಿದುಹೋಯಿತೋ? ಅವರ ಜ್ಞಾನ ಮಾಯವಾಯಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ತೇಮಾನ್ ಸೀಮೆಗಿದ್ದ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಎದೋಮ್ಯರನ್ನು ಕುರಿತದ್ದು: ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ. “ತೇಮಾನ್‌ನಲ್ಲಿ ಇನ್ನು ಮೇಲೆ ಜ್ಞಾನವಿರುವುದಿಲ್ಲವೋ? ವಿವೇಕಿಗಳಿಂದ ಆಲೋಚನೆಯು ನಾಶವಾಯಿತೋ? ಅವರ ಜ್ಞಾನವು ಕ್ಷೀಣಿಸಿದೆಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:7
39 ತಿಳಿವುಗಳ ಹೋಲಿಕೆ  

ಎದೋಮ್ಯರಿಗೆ ಯೆಹೋವನು ಮಾಡಬೇಕೆಂದಿರುವುದನ್ನು ಕೇಳಿರಿ. ತೇಮಾನ್ಯರ ಬಗ್ಗೆ ಯೆಹೋವನು ಏನು ನಿರ್ಧರಿಸಿದ್ದಾನೆಂಬುದನ್ನು ಕೇಳಿರಿ. ಎದೋಮಿನ ಕುರಿಮರಿಗಳನ್ನು (ಜನರನ್ನು) ಶತ್ರು ಎಳೆದುಕೊಂಡು ಹೋಗುವನು. ಸಂಭವಿಸಿದ ಸಂಗತಿಯನ್ನು ನೋಡಿ ಎದೋಮಿನ ಹುಲ್ಲುಗಾವಲುಗಳು ಬೆದರುವವು.


ಆಮೇಲೆ ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆನು.


ಏಸಾವನ ವಂಶಸ್ಥರ ಕುಲಪತಿಗಳು: ಏಸಾವನ ಮೊದಲನೆ ಮಗನಾದ ಎಲೀಫಜ. ಎಲೀಫಜನಿಂದ ಬಂದವರು: ತೇಮಾನ್, ಓಮಾರ್, ಚೆಫೋ, ಕೆನೆಜ್,


ಆಗ ಏಸಾವನು ಯಾಕೋಬನಿಗೆ, “ಹಸಿವೆಯಿಂದ ನನಗೆ ಆಯಾಸವಾಗಿದೆ. ನನಗೆ ಕೆಂಪಾದ ಸ್ವಲ್ಪ ಅಲಸಂದಿ ಗುಗ್ಗರಿಯನ್ನು ಕೊಡು” ಎಂದು ಕೇಳಿದನು. (ಈ ಕಾರಣದಿಂದ ಜನರು ಅವನಿಗೆ “ಏದೋಮ್” ಎಂದು ಕರೆಯುತ್ತಾರೆ.)


ಯೋಬನ ಮೂವರು ಗೆಳೆಯರು ಯಾರೆಂದರೆ: ತೇಮಾನಿನ ಎಲೀಫಜನು, ಶೂಹದ ಬಿಲ್ದದನು ಮತ್ತು ನಾಮಾಥದ ಚೋಫರನು. ಯೋಬನಿಗೆ ಸಂಭವಿಸಿದ ಆಪತ್ತುಗಳ ಬಗ್ಗೆ ಈ ಮೂವರು ಗೆಳೆಯರು ಕೇಳಿದಾಗ ತಮ್ಮ ಮನೆಯಿಂದ ಹೊರಟು ಒಟ್ಟಾಗಿ ಭೇಟಿಯಾದರು. ಯೋಬನ ಬಳಿಗೆ ಹೋಗಿ ಅನುತಾಪ ಸೂಚಿಸಿ ಸಂತೈಸಲು ಒಪ್ಪಿಕೊಂಡರು.


ಎಲೀಫಜನಿಗೆ ಐದು ಮಂದಿ ಗಂಡುಮಕ್ಕಳಿದ್ದರು: ತೇಮಾನ್, ಓಮಾರ್, ಚೆಪೋ, ಗತಾಮ್ ಮತ್ತು ಕೆನಜ್.


ತೇಮಾನಿನಿಂದ ಯೆಹೋವನು ಬರುತ್ತಿದ್ದಾನೆ. ಪರಿಶುದ್ಧನಾದವನು ಪಾರಾನ್ ಪರ್ವತದಿಂದ ಬರುತ್ತಿದ್ದಾನೆ. ಯೆಹೋವನ ಮಹಿಮೆಯು ಆಕಾಶಮಂಡಲವನ್ನು ಮುಚ್ಚುತ್ತದೆ. ಅವನ ಸ್ತೋತ್ರವು ಭೂಲೋಕವನ್ನು ತುಂಬುತ್ತದೆ.


ಈಜಿಪ್ಟ್ ಬರಿದಾಗುವದು. ಎದೋಮು ಬೆಂಗಾಡಾಗುವದು. ಯಾಕೆಂದರೆ ಅವರು ಯೆಹೂದದ ಜನರೊಂದಿಗೆ ಕ್ರೂರ ರೀತಿಯಲ್ಲಿ ವರ್ತಿಸಿದರು. ಅವರ ದೇಶಗಳಲ್ಲಿ ನಿರಪರಾಧಿಗಳನ್ನು ಕೊಂದರು.


ಉತ್ತರದ ರಾಜನು ಸುಂದರವಾದ ನಾಡಿನ ಮೇಲೆ ಧಾಳಿ ಮಾಡುವನು. ಉತ್ತರದ ರಾಜನು ಹಲವಾರು ದೇಶಗಳನ್ನು ಗೆದ್ದುಕೊಳ್ಳುವನು. ಆದರೆ ಎದೋಮ್ಯರು, ಮೋವಾಬ್ಯರು ಮತ್ತು ಅಮ್ಮೋನಿನ ನಾಯಕರು ಅವನ ಕೈಯಿಂದ ತಪ್ಪಿಸಿಕೊಳ್ಳುವರು.


ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ಆಗ ಯೆರೆಮೀಯನ ವೈರಿಗಳು ಹೀಗೆಂದರು: “ಬನ್ನಿ, ನಾವು ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಯಾಜಕನಿಂದ ಧರ್ಮೋಪದೇಶವು ತಪ್ಪುವದಿಲ್ಲ, ಇದು ಖಂಡಿತ. ಜ್ಞಾನಿಗಳಿಂದ ಮಂತ್ರಾಲೋಚನೆಯು ಇದ್ದೇ ಇರುತ್ತದೆ. ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದು. ಆದ್ದರಿಂದ ಅವನ ಬಗ್ಗೆ ಸುಳ್ಳು ಹೇಳಿ ನಾಶಮಾಡೋಣ. ಅವನು ಹೇಳುವ ಯಾವುದಕ್ಕೂ ನಾವು ಗಮನಕೊಡಬೇಕಾಗಿಲ್ಲ.”


ನಾನು ಅದ್ಭುತಕಾರ್ಯಗಳಿಂದ ಅವರನ್ನು ಆಶ್ಚರ್ಯಗೊಳಿಸುತ್ತಾ ಇರುವೆನು. ಅವರ ಜ್ಞಾನಿಗಳು ತಮ್ಮ ಜ್ಞಾನವನ್ನು ಕಳೆದುಕೊಳ್ಳುವರು. ಅವರು ಅರ್ಥಮಾಡಿಕೊಳ್ಳಲಾರರು.”


ಯೆಹೋವನೇ ನಿಶ್ಚಯವಾಗಿ ಎದೋಮ್ಯರನ್ನು ದಂಡಿಸು. ಯಾಕೆಂದರೆ ಜೆರುಸಲೇಮ್ ಸೆರೆಹಿಡಿಯಲ್ಪಟ್ಟಾಗ ಅವರು, “ಅದರ ಕಟ್ಟಡಗಳನ್ನು ಕೆಡವಿಹಾಕಿ. ಅವುಗಳನ್ನು ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಆರ್ಭಟಿಸಿದರು.


ಆಗ ತೇಮಾನ್ಯನಾದ ಎಲೀಫಜನು ಹೀಗೆ ಉತ್ತರಿಸಿದನು:


“ಎದೋಮ್ಯರನ್ನು ನೀವು ದ್ವೇಷಿಸಬಾರದು, ಅವರು ನಿಮ್ಮ ಸಂಬಂಧಿಕರಾಗಿದ್ದಾರೆ. ಈಜಿಪ್ಟಿನವರನ್ನು ನೀವು ದ್ವೇಷಿಸಬಾರದು, ಅವರ ದೇಶದಲ್ಲಿ ನೀವು ಪರದೇಶಿಗಳಾಗಿದ್ದಿರಲ್ಲಾ.


ಯೋಬಾಬನು ಸತ್ತಮೇಲೆ ಹುಷಾಮನು ಆಳಿದನು. ಹುಷಾಮನು ತೇಮಾನೀಯರ ದೇಶದವನು.


ಅಂದಿನಿಂದ ಏಸಾವನು ಯಾಕೋಬನನ್ನು ದ್ವೇಷಿಸಿದನು. ಏಸಾವನು ತನ್ನೊಳಗೆ, “ನನ್ನ ತಂದೆ ಬಹುಬೇಗನೆ ಸತ್ತುಹೋಗುವನು. ಆಗ ನಾನು ಅವನಿಗಾಗಿ ದುಃಖಿಸಿ ಆ ಬಳಿಕ ಯಾಕೋಬನನ್ನು ಕೊಲ್ಲುವೆನು” ಅಂದುಕೊಂಡನು.


ಯಾಕೋಬನ ಅಣ್ಣನಾದ ಏಸಾವನು ಸೇಯೀರ್ ಎಂಬ ಸ್ಥಳದಲ್ಲಿ ವಾಸವಾಗಿದ್ದನು. ಈ ಸ್ಥಳವು ಎದೋಮಿನ ಗುಡ್ಡಗಾಡು ಪ್ರದೇಶವಾಗಿತ್ತು. ಯಾಕೋಬನು ತನ್ನ ಸಂದೇಶಕರ ಮೂಲಕ


ಆ “ಜ್ಞಾನಿಗಳು” ಯೆಹೋವನ ಉಪದೇಶವನ್ನು ಕೇಳಲು ಒಪ್ಪಲಿಲ್ಲ. ಆದ್ದರಿಂದ ಅವರು ನಿಜವಾದ ಜ್ಞಾನಿಗಳಲ್ಲವೇ ಅಲ್ಲ. ಆ “ಜ್ಞಾನಿಗಳು” ಸಿಕ್ಕಿಹಾಕಿಕೊಂಡಿದ್ದಾರೆ. ಅವರು ಗಾಬರಿಪಟ್ಟಿದ್ದಾರೆ ಮತ್ತು ನಾಚಿಕೆಪಟ್ಟಿದ್ದಾರೆ. ಅವರ ಜ್ಞಾನವು ಅಪ್ರಯೋಜಕವಾಗಿದೆ.


ಯೆಹೋವನು ಹೀಗೆ ಹೇಳುತ್ತಾನೆ: “ಇಸ್ರೇಲ್ ಪ್ರದೇಶದ ಸುತ್ತಮುತ್ತ ವಾಸಮಾಡುವ ಜನರಿಗಾಗಿ ನಾನು ಏನು ಮಾಡುವೆನೆಂಬುದನ್ನು ನಿಮಗೆ ಹೇಳುವೆನು. ಆ ಜನರು ತುಂಬ ದುಷ್ಟರಾಗಿದ್ದಾರೆ. ನಾನು ಇಸ್ರೇಲಿನ ಜನರಿಗೆ ಕೊಟ್ಟ ಪ್ರದೇಶವನ್ನು ಅವರು ಹಾಳು ಮಾಡಿದರು. ನಾನು ಆ ಜನರನ್ನು ಅವರ ಪ್ರದೇಶದಿಂದ ಹೊರಗೆ ಎಸೆಯುವೆನು. ನಾನು ಅವರೊಂದಿಗೆ ಯೆಹೂದದ ಜನರನ್ನೂ ಎಸೆಯುವೆನು.


ದೆದಾನ್ಯರು, ತೇಮಾದೇಶದವರು, ಬೂಜ್ ದೇಶದವರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ತಮ್ಮ ತಲೆಕೂದಲನ್ನು ಕತ್ತರಿಸಿಕೊಳ್ಳುವ ಎಲ್ಲಾ ಜನರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.


“ಎದೋಮನೂ ಅಲ್ಲಿರುವನು. ಅವನ ರಾಜರೂ ಹಿರಿಯರೂ ಅಲ್ಲಿರುವರು. ಅವರೆಲ್ಲಾ ವೀರರಾಗಿದ್ದರೂ ಈ ಬೇರೆ ಜನರೊಂದಿಗೆ ಮಲಗಿದ್ದಾರೆ; ಆ ಪರದೇಶದವರೊಂದಿಗೆ ಪಾತಾಳದಲ್ಲಿ ಬಿದ್ದುಕೊಂಡಿದ್ದಾರೆ.


ದೂಮದ ಕುರಿತು ದುಃಖದ ದೈವೋಕ್ತಿ: ಸೇಯಿರ್‌ನಿಂದ ಎದೋಮನ್ನು ಯಾರೋ ಒಬ್ಬನು, “ಕಾವಲುಗಾರನೇ, ರಾತ್ರಿ ಮುಗಿಯಲು ಎಷ್ಟು ಸಮಯ ಉಂಟು? ರಾತ್ರಿಗೆ ಇನ್ನು ಎಷ್ಟು ಕಾಲ ಉಂಟು?” ಎಂದು ಕೇಳಿದನು.


ಎದೋಮಿನ ಜನರೇ, ಸಂತೋಷವಾಗಿರಿ. ಊಚ್ ದೇಶದಲ್ಲಿ ವಾಸವಾಗಿರುವ ಜನರೇ, ಸಂತೋಷವಾಗಿರಿ. ಆದರೆ ಜ್ಞಾಪಕದಲ್ಲಿಟ್ಟುಕೊಂಡಿರಿ, ಯೆಹೋವನ ಕೋಪದ ಪಾತ್ರೆಯು ನಿಮ್ಮ ಬಳಿಗೂ ಬರುವುದು. ನೀವು ಆ ಪಾತ್ರೆಯಿಂದ ಕುಡಿಯುವಾಗ ಮತ್ತೇರಿದವರಾಗಿ ನಿಮ್ಮನ್ನು ನೀವೇ ಬೆತ್ತಲು ಮಾಡಿಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು