Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:8 - ಪರಿಶುದ್ದ ಬೈಬಲ್‌

8 ದೆದಾನಿನ ನಿವಾಸಿಗಳೇ, ಓಡಿಹೋಗಿರಿ, ಅಡಗಿಕೊಳ್ಳಿರಿ; ಏಕೆಂದರೆ ಏಸಾವನು ಮಾಡಿದ ತಪ್ಪಿಗಾಗಿ ನಾನು ಅವನನ್ನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕೆಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದೇದಾನಿನವರೇ, ಹಿಂದಿರುಗಿ ಓಡಿಹೋಗಿರಿ. ಒಳ ಪ್ರಾಂತ್ಯವನ್ನು ಸೇರಿ ವಾಸಿಸಿರಿ. ಏಕೆಂದರೆ ನಾನು ಎದೋಮನ್ನು ದಂಡಿಸುವೆನು. ಏಸಾವನಿಗೆ ವಿಧಿಸಿದ್ದ ಆಪತ್ತನ್ನು ಅದರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇದಾನಿನ ನಿವಾಸಿಗಳೇ, ಓಡಿಹೋಗಿರಿ; ತಿರುಗಿಕೊಳ್ಳಿರಿ; ಆಳವಾದ ಗುಹೆಯಲ್ಲಿ ವಾಸಮಾಡಿರಿ; ಏಕೆಂದರೆ ಏಸಾವನ ಆಪತ್ತನ್ನೂ, ನಾನು ಅವನನ್ನು ಶಿಕ್ಷಿಸುವ ಕಾಲವನ್ನೂ ಅವನ ಮೇಲೆ ಬರಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:8
22 ತಿಳಿವುಗಳ ಹೋಲಿಕೆ  

ದೆದಾನ್ಯರು, ತೇಮಾದೇಶದವರು, ಬೂಜ್ ದೇಶದವರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ತಮ್ಮ ತಲೆಕೂದಲನ್ನು ಕತ್ತರಿಸಿಕೊಳ್ಳುವ ಎಲ್ಲಾ ಜನರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.


ಸಂಬಳಕ್ಕಾಗಿ ದುಡಿಯುವ ಈಜಿಪ್ಟಿನ ಸೈನಿಕರು ಕೊಬ್ಬಿದ ಕರುಗಳಂತಿದ್ದಾರೆ. ಅವರೆಲ್ಲರು ಹಿಂತಿರುಗಿ ಓಡಿಹೋಗುವರು. ಅವರು ಧೈರ್ಯದಿಂದ ಧಾಳಿಯನ್ನು ಎದುರಿಸಲಾರರು. ಅವರ ವಿನಾಶದ ಕಾಲ ಬರುತ್ತಿದೆ. ಬೇಗ ಅವರನ್ನು ದಂಡಿಸಲಾಗುವುದು.


ಹಾಚೋರಿನ ನಿವಾಸಿಗಳೇ, ಬೇಗನೆ ಓಡಿಹೋಗಿರಿ, ಅಡಗಿಕೊಳ್ಳುವದಕ್ಕೆ ಒಂದು ಒಳ್ಳೆಯ ಸ್ಥಳವನ್ನು ಹುಡುಕಿಕೊಳ್ಳಿರಿ.” ಇದು ಯೆಹೋವನ ಸಂದೇಶ. “ನೆಬೂಕದ್ನೆಚ್ಚರನು ನಿಮ್ಮ ವಿರುದ್ಧ ಯೋಜನೆ ಮಾಡಿದ್ದಾನೆ. ನಿಮ್ಮನ್ನು ಸೋಲಿಸಲು ಒಳ್ಳೆಯ ಸಂಚನ್ನು ಮಾಡಿದ್ದಾನೆ.


ಅರೇಬಿಯದ ಬಗ್ಗೆ ದುಃಖಕರವಾದ ಸಂದೇಶ: ದೇದಾನಿನಿಂದ ಬಂದ ಪ್ರಯಾಣಿಕರು ಅರೇಬಿಯ ಮರುಭೂಮಿಯಲ್ಲಿನ ಪೊದೆಗಳಲ್ಲಿ ರಾತ್ರಿ ತಂಗಿದರು.


ಆಗ ಲೋಕದ ರಾಜರುಗಳೂ ಅಧಿಪತಿಗಳೂ ಸೇನಾಧಿಪತಿಗಳೂ ಶ್ರೀಮಂತರೂ ಬಲಿಷ್ಠರೂ ಪ್ರತಿಯೊಬ್ಬ ಗುಲಾಮನೂ ಸ್ವತಂತ್ರ ಪ್ರಜೆಯೂ ಗವಿಗಳಲ್ಲಿ ಮತ್ತು ಬೆಟ್ಟಗಳ ಮೇಲಿನ ಬಂಡೆಗಳ ಮರೆಯಲ್ಲಿ ಅಡಗಿಕೊಂಡರು.


ಬಾಬಿಲೋನಿನ ಎಲ್ಲಾ ತರುಣರನ್ನು ಕೊಂದುಹಾಕಿರಿ. ಅವರನ್ನು ಕತ್ತರಿಸಿಬಿಡಿ. ಅವರನ್ನು ಸೋಲಿಸುವ ಸಮಯ ಬಂದಿದೆ. ಇದು ಅವರಿಗೆ ಕೇಡಿನ ಕಾಲ. ಇದು ಅವರನ್ನು ದಂಡಿಸುವ ಸಮಯ.


“ವೈರಿಯು ಅವರ ಒಂಟೆಗಳನ್ನು ಮತ್ತು ಅವರ ದನಗಳ ಮಂದೆಗಳನ್ನು ಅಪಹರಿಸುವನು. ವೈರಿಯು ಅವರ ದೊಡ್ಡದೊಡ್ಡ ಮಂದೆಗಳನ್ನು ಅಪಹರಿಸುವನು. ತಮ್ಮ ಗಡ್ಡದ ಕೂದಲಿನ ಮೂಲೆಗಳನ್ನು ಕತ್ತರಿಸಿಕೊಂಡ ಜನರನ್ನು ನಾನು ಭೂಮಂಡಲದ ಎಲ್ಲೆಡೆಗಳಲ್ಲಿ ಚದರಿಸುವೆನು. ಎಲ್ಲಾ ಕಡೆಯಿಂದಲೂ ಅವರ ಮೇಲೆ ವಿಪತ್ತುಗಳನ್ನು ಬರಮಾಡುವೆನು.” ಇದು ಯೆಹೋವನ ನುಡಿ.


ಜನರು ಅಂಜಿ ಓಡಿಹೋಗುವರು; ಆಳವಾದ ಗುಂಡಿಗಳಲ್ಲಿ ಬೀಳುವರು. ಯಾರಾದರೂ ಆ ಆಳವಾದ ಗುಂಡಿಗಳಿಂದ ಮೇಲಕ್ಕೆ ಹತ್ತಿ ಬಂದರೆ ಅವರನ್ನು ಬಲೆಯಲ್ಲಿ ಹಿಡಿಯಲಾಗುವುದು. ನಾನು ಮೋವಾಬಿಗೆ ದಂಡನೆಯ ವರ್ಷವನ್ನು ತರುವೆನು” ಎಂದು ಯೆಹೋವನು ನುಡಿದನು.


ಮೋವಾಬ್ಯರೇ, ನಿಮ್ಮ ಪಟ್ಟಣಗಳನ್ನು ಬಿಟ್ಟುಬಿಡಿ. ಹೋಗಿ, ಬೆಟ್ಟಗಳಲ್ಲಿ ವಾಸಿಸಿರಿ. ಗುಹೆಯ ಬಾಗಿಲಿನಲ್ಲಿ ತನ್ನ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತೆ ಆಗಿರಿ.”


ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವದಕ್ಕಾಗಿ ಓಡಿಹೋಗಿರಿ. ಮರುಭೂಮಿಯಲ್ಲಿರುವ ಕಾಡುಕತ್ತೆಯಂತೆ ಓಡಿರಿ.


ಬೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನ್ನು ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಿರಿ. ಉತ್ತರದಿಕ್ಕಿನಿಂದ ವಿಪತ್ತು ಬರುತ್ತಿರುವುದರಿಂದ ಇವೆಲ್ಲವನ್ನು ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಬರುತ್ತಿದೆ.


ಜನರು ಬಿಸಾಡಿ, ಸಂದುಗೊಂದುಗಳಲ್ಲಿ ಅಡಗಿಕೊಳ್ಳುವರು. ಯೆಹೋವನಿಗೂ ಆತನ ಮಹಾಶಕ್ತಿಗೂ ಹೆದರಿ ಅವರು ಹಾಗೆ ಮಾಡುವರು. ಯೆಹೋವನು ಎದ್ದು ಭೂಮಿಯನ್ನು ಅಲುಗಾಡಿಸುವ ಸಮಯದಲ್ಲಿ ಇವೆಲ್ಲಾ ಸಂಭವಿಸುವವು.


ಇಸ್ರೇಲರು ತಾವು ತೊಂದರೆಗೆ ಒಳಗಾಗಿರುವುದನ್ನೂ ಇಕ್ಕಟ್ಟಿನಲ್ಲಿ ಸಿಕ್ಕಿಬಿದ್ದಿರುವುದನ್ನೂ ತಿಳಿದುಕೊಂಡರು. ಅವರು ಗವಿಗಳಲ್ಲಿ ಮತ್ತು ಬಂಡೆಗಲ್ಲುಗಳ ಸಂಧಿಗಳಲ್ಲಿ ಅಡಗಿಕೊಳ್ಳಲು ಓಡಿಹೋದರು. ಅವರು ಬಂಡೆಗಳ ಮಧ್ಯದಲ್ಲಿಯೂ ಬಾವಿಗಳಲ್ಲಿಯೂ ಮತ್ತು ನೆಲದ ಕುಳಿಗಳಲ್ಲಿಯೂ ಅಡಗಿಕೊಂಡರು.


ಮಿದ್ಯಾನ್ಯರು ಬಹಳ ಬಲಶಾಲಿಗಳಾಗಿದ್ದು ಇಸ್ರೇಲರಿಗೆ ಕ್ರೂರಿಗಳಾಗಿದ್ದರು. ಆದ್ದರಿಂದ ಇಸ್ರೇಲರು ಅಡಗಿಕೊಳ್ಳುವುದಕ್ಕಾಗಿ ಬೆಟ್ಟಗಳಲ್ಲಿ ಸ್ಥಳಗಳನ್ನು ಮಾಡಿಕೊಂಡರು. ಕಂಡುಹಿಡಿಯಲಾಗದ ಸ್ಥಳಗಳಲ್ಲಿ ಅವರು ತಮ್ಮ ಆಹಾರವನ್ನು ಬಚ್ಚಿಡುತ್ತಿದ್ದರು.


“ಆಕಾಶದಲ್ಲಿರುವ ನನ್ನ ಖಡ್ಗವು ರಕ್ತದಲ್ಲಿ ಮುಳುಗಿದಾಗ ಇವೆಲ್ಲಾ ಸಂಭವಿಸುವದು” ಎಂದು ಯೆಹೋವನು ಅನ್ನುತ್ತಾನೆ. ಯೆಹೋವನ ಖಡ್ಗವು ಎದೋಮನ್ನು ತುಂಡರಿಸುವುದು. ಆತನು ಆ ಜನರನ್ನು ದೋಷಿಗಳೆಂದು ನ್ಯಾಯತೀರಿಸಿದ್ದಾನೆ. ಆದ್ದರಿಂದ ಅವರು ಸಾಯಬೇಕು.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನಾನು ಎದೋಮನ್ನು ಶಿಕ್ಷಿಸುವೆನು. ಎದೋಮಿನ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆನು. ತೇಮಾನಿನಿಂದ ಹಿಡಿದು ದೆದಾನ್‌ತನಕ ಆ ದೇಶವನ್ನೆಲ್ಲಾ ನಾಶಮಾಡುವೆನು. ಎದೋಮ್ಯರು ರಣರಂಗದಲ್ಲಿ ಸಾಯುವರು.


ಏಸಾವನನ್ನು ನಾನು ಸ್ವೀಕರಿಸಲಿಲ್ಲ. ಏಸಾವನಿರುವ ಬೆಟ್ಟಪ್ರದೇಶವನ್ನು ನಾನು ಹಾಳುಮಾಡಿದೆನು. ಈಗ ಕಾಡುನಾಯಿಗಳು ಮಾತ್ರ ಅಲ್ಲಿ ವಾಸಿಸುತ್ತವೆ.” ಎಂದು ಹೇಳಿದನು.


ಎದೋಮ್ಯರು ಒಂದುವೇಳೆ ಹೀಗೆ ಹೇಳಿಯಾರು: “ನಾವು ನಾಶವಾಗಿದ್ದೇವೆ. ಹೌದು, ಆದರೆ ನಾವು ಹಿಂದೆ ಹೋಗಿ ತಿರುಗಿ ನಮ್ಮ ಪಟ್ಟಣಗಳನ್ನು ಕಟ್ಟುವೆವು.” ಸರ್ವಶಕ್ತನಾದ ಯೆಹೋವನು, “ಅವರು ಪಟ್ಟಣಗಳನ್ನು ತಿರುಗಿ ಕಟ್ಟಿದರೆ ನಾನು ತಿರುಗಿ ನಾಶಮಾಡುವೆನು” ಎಂದು ಹೇಳುತ್ತಾನೆ. ಇದಕ್ಕಾಗಿಯೇ ಜನರು, “ಎದೋಮ್ ದುಷ್ಟ ಪ್ರಾಂತ್ಯವಾಗಿದೆ, ಯೆಹೋವನು ನಿರಂತರವಾಗಿ ಅದನ್ನು ದ್ವೇಷಿಸುತ್ತಾನೆ” ಎಂದು ಅನ್ನುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು