Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:1 - ಪರಿಶುದ್ದ ಬೈಬಲ್‌

1 ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮಿನ ಬೀದಿಗಳಲ್ಲಿ ಅತ್ತಿತ್ತ ತಿರುಗಾಡಿ ನೋಡಿರಿ; ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ. ನಗರದ ಸಾರ್ವಜನಿಕ ಸ್ಥಳಗಳಲ್ಲಿ ಹುಡುಕಿ ನೋಡಿರಿ. ಸತ್ಯಶೋಧಕನೂ ಪ್ರಾಮಾಣಿಕನೂ ಒಳ್ಳೆಯವನೂ ಆಗಿರುವ ಮನುಷ್ಯನು ಎಲ್ಲಿ ಸಿಕ್ಕುವನೋ ನೋಡಿ. ಕೇವಲ ಒಬ್ಬ ಒಳ್ಳೆಯವನಿದ್ದರೂ ನಾನು ಇಡೀ ಜೆರುಸಲೇಮನ್ನು ಕ್ಷಮಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ? ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜೆರುಸಲೇಮಿನ ಜನರೇ, ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನೋಡಿ ಅಲ್ಲಿನ ಚೌಕಗಳಲ್ಲಿ ಹುಡುಕಾಡಿ ನೋಡಿ. ನೀತಿಯನ್ನು ಕೈಗೊಂಡು ಸತ್ಯವನ್ನರಸುವವನು ಒಬ್ಬನಾದರೂ ಇದ್ದಾನೆಯೇ? ಅಂಥ ಸತ್ಪುರುಷ ಸಿಕ್ಕುತ್ತಾನೆಯೆ ಎಂಬುದನ್ನು ನೀವೇ ನಿಶ್ಚಯಿಸಿರಿ; ಸಿಕ್ಕಿದ್ದೇ ಆದರೆ ಸರ್ವೇಶ್ವರ ಸ್ವಾಮಿ ಆ ನಗರವನ್ನು ಕ್ಷಮಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆರೂಸಲೇವಿುನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನನುಸರಿಸುವ ಒಬ್ಬನಾದರೂ ಇದ್ದಾನೋ, ಇಂಥ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷವಿುಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ, ನ್ಯಾಯವನ್ನು ಮಾಡುವವನೂ, ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ, ತಿಳಿದು ಹುಡುಕಿರಿ; ಸಿಕ್ಕಿದರೆ ಅವಳಿಗೆ ಮನ್ನಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:1
29 ತಿಳಿವುಗಳ ಹೋಲಿಕೆ  

“ನನ್ನ ಕೋಪದಿಂದ ದೇಶವು ನಾಶವಾಗದಂತೆ ಅದನ್ನು ರಕ್ಷಿಸಲು ಗೋಡೆಯನ್ನು ಸರಿಪಡಿಸುವುದಕ್ಕಾಗಿಯೂ ಗೋಡೆಯು ಒಡೆದುಹೋಗಿದ್ದ ಸ್ಥಳದಲ್ಲಿ ನಿಂತುಕೊಳ್ಳುವುದಕ್ಕಾಗಿ ಅವರಲ್ಲಿ ನಾನು ಒಬ್ಬನನ್ನು ಎದುರುನೋಡಿದೆ. ಆದರೆ ಯಾರೂ ನನಗೆ ಸಿಗಲಿಲ್ಲ.


ದೇವರು ಲೋಕವನ್ನೆಲ್ಲಾ ದೃಷ್ಟಿಸಿ ನೋಡಿ ತನ್ನ ನಂಬಿಗಸ್ತರನ್ನು ಕಂಡುಕೊಂಡು ಅವರನ್ನು ಬಲಿಷ್ಠರನ್ನಾಗಿ ಮಾಡುವನು. ಆಸನೇ, ನೀನು ಮೂರ್ಖ ಕೆಲಸ ಮಾಡಿದೆ. ಇಂದಿನಿಂದ ಯಾವಾಗಲೂ ನಿನಗೆ ಯುದ್ಧಗಳಿರುತ್ತವೆ.”


ನೆರೆಯವನ ಬಗ್ಗೆ ಯಾರೂ ಸತ್ಯವನ್ನಾಡುವದಿಲ್ಲ. ಜನರು ನ್ಯಾಯಾಲಯಗಳಲ್ಲಿ ಪರಸ್ಪರ ವ್ಯಾಜ್ಯ ಮಾಡುವರು. ತಾವು ಗೆಲ್ಲಬೇಕೆಂಬ ಉದ್ದೇಶದಿಂದ ಸುಳ್ಳುಸಾಕ್ಷಿಯ ಮೇಲೆ ಅವಲಂಬಿಸುವರು. ಅವರು ಒಬ್ಬರ ಮೇಲೊಬ್ಬರು ಸುಳ್ಳು ಹೇಳುತ್ತಾರೆ; ಅವರು ಕೇಡಿನಿಂದ ತುಂಬಿದವರಾಗಿದ್ದು ಕೇಡನ್ನೇ ಹೆರುತ್ತಾರೆ.


ಆದರೆ ಪ್ರತಿಯೊಬ್ಬನೂ ದೇವರಿಗೆ ವಿಮುಖನಾಗಿದ್ದಾನೆ. ಎಲ್ಲರೂ ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.


ಅನೇಕರು ತಾವು ನಂಬಿಗಸ್ತರೆಂದು ಹೇಳಿಕೊಳ್ಳುತ್ತಾರೆ. ಆದರೆ ನಿಜವಾಗಿಯೂ ನಂಬಿಗಸ್ತನಾಗಿರುವ ಒಬ್ಬನನ್ನು ಕಂಡುಕೊಳ್ಳುವುದು ಬಹುಕಷ್ಟ.


ಯೆಹೋವನೇ, ನನ್ನನ್ನು ರಕ್ಷಿಸು! ಒಳ್ಳೆಯವರೆಲ್ಲಾ ಕೊನೆಗೊಂಡರು. ಭೂನಿವಾಸಿಗಳಲ್ಲಿ ನಿಜವಾದ ವಿಶ್ವಾಸಿಗಳು ಉಳಿದೇ ಇಲ್ಲ.


ಸತ್ಯವನ್ನು ಪ್ರೀತಿಸದೆ ತಪ್ಪಿಹೋಗಿರುವ ಜನರನ್ನು ಮೋಸಗೊಳಿಸಲು, ಅವನು ಎಲ್ಲಾ ವಿಧವಾದ ತಂತ್ರಗಳನ್ನು ಮಾಡುವನು. (ಅವರು ಸತ್ಯವನ್ನು ಪ್ರೀತಿಸಿದ್ದರೆ, ರಕ್ಷಣೆ ಹೊಂದುತ್ತಿದ್ದರು.)


“ಆದ್ದರಿಂದ ಆ ಸೇವಕನು ಹಿಂತಿರುಗಿ ಹೋಗಿ ಅವರು ಹೇಳಿದ್ದನ್ನೆಲ್ಲ ತನ್ನ ಯಜಮಾನನಿಗೆ ತಿಳಿಸಿದನು. ಆಗ ಯಜಮಾನನು ಬಹಳ ಕೋಪಗೊಂಡು ಆ ಸೇವಕನಿಗೆ, ‘ಈ ಊರಿನ ಬೀದಿಗಳಿಗೂ ಸಂದಿಗಳಿಗೂ ಬೇಗನೆ ಹೋಗಿ ಬಡವರನ್ನೂ ಅಂಗವಿಕಲರನ್ನೂ ಕುರುಡರನ್ನೂ ಕುಂಟರನ್ನೂ ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು.


ಅವನು, “ಓಡಿಹೋಗಿ ಆ ಯೌವನಸ್ಥನಿಗೆ ಜೆರುಸಲೇಮು ಅಳತೆ ಮಾಡಲು ಸಾಧ್ಯವಾಗದಷ್ಟು ದೊಡ್ಡದಾಗಿದೆ ಎಂದು ಹೇಳು. ಅಲ್ಲದೆ ಅವನಿಗೆ ಈ ವಿಷಯವನ್ನೂ ತಿಳಿಸು: ‘ಜೆರುಸಲೇಮ್ ಗೋಡೆಗಳಿಲ್ಲದ ಪಟ್ಟಣವಾಗುವದು. ಯಾಕೆಂದರೆ ಅಷ್ಟೊಂದು ಜನರೂ ಪಶುಗಳೂ ಅಲ್ಲಿ ವಾಸಿಸುವವು.’


ಮೃತ್ಯುಸಮುದ್ರದಿಂದ ಮೆಡಿಟರೇನಿಯನ್ ಸಮುದ್ರದ ತನಕ, ಉತ್ತರದಿಂದ ಪೂರ್ವದಿಕ್ಕಿನ ತನಕ ಜನರು ಯೆಹೋವನ ಸಂದೇಶಕ್ಕಾಗಿ ಹಾತೊರೆಯುತ್ತಾ ಅಲೆದಾಡುವರು. ಆದರೆ ಅವರು ಕಂಡುಕೊಳ್ಳುವುದಿಲ್ಲ.


ಅವರು ಪಟ್ಟಣದ ಕಡೆಗೆ ಓಡಿ ತ್ವರೆಯಾಗಿ ಗೋಡೆ ಹತ್ತುವರು. ಮನೆಯೊಳಗೆ ನುಗ್ಗುವರು; ಕಳ್ಳರಂತೆ ಕಿಟಕಿಯಿಂದ ನುಸುಳುವರು.


“ದಾನಿಯೇಲನೇ, ನೀನು ಈ ಸಂದೇಶವನ್ನು ರಹಸ್ಯವಾಗಿಡು. ಇದನ್ನು ಬರೆದ ಪುಸ್ತಕಕ್ಕೆ ಮುದ್ರೆಹಾಕು. ಅಂತ್ಯಕಾಲದವರೆಗೆ ನೀನು ಇದನ್ನು ರಹಸ್ಯವಾಗಿ ಇಡಬೇಕು. ನಿಜವಾದ ಜ್ಞಾನಕ್ಕಾಗಿ ಬಹುಜನರು ಅತ್ತಿತ್ತ ಸಂಚರಿಸುವರು. ನಿಜವಾದ ಜ್ಞಾನ ಬೆಳೆಯುವದು.”


ಈಗ ನಾನು ಎದ್ದು ನಗರದಲ್ಲೆಲ್ಲಾ ಸುತ್ತಾಡುವೆನು. ನನ್ನ ಪ್ರಿಯನಿಗಾಗಿ ಬೀದಿಗಳಲ್ಲಿಯೂ ಚೌಕಗಳಲ್ಲಿಯೂ ಹುಡುಕುವೆನು. ನಾನು ಅವನಿಗಾಗಿ ಹುಡುಕಿದೆ, ಆದರೆ ಅವನು ಸಿಕ್ಕಲಿಲ್ಲ.


ಸತ್ಯವನ್ನು ಕೊಂಡುಕೊ; ಅದನ್ನು ಮಾರಬೇಡ. ಜ್ಞಾನ, ಸುಶಿಕ್ಷೆ ಮತ್ತು ವಿವೇಕವನ್ನು ಕೊಂಡುಕೊ. ಇವು ಖರೀದಿಗೆ ಯೋಗ್ಯವಾದವುಗಳೂ ಮಾರಲಾಗದಷ್ಟು ಅಮೂಲ್ಯವಾದವುಗಳೂ ಆಗಿವೆ.


ಪಟ್ಟಣದ ಹೆಬ್ಬಾಗಿಲುಗಳ ಬಳಿಯಿಂದಲೂ ತೆರೆದ ಬಾಗಿಲುಗಳ ಬಳಿಯಿಂದಲೂ ಕರೆಯುತ್ತಿದ್ದಾಳೆ.


ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.


“ನೀವು ನನ್ನೊಂದಿಗೆ ಏಕೆ ಚರ್ಚೆಮಾಡುವಿರಿ, ನೀವೆಲ್ಲರೂ ನನ್ನ ವಿರುದ್ಧ ದಂಗೆ ಎದ್ದಿದ್ದೀರಿ” ಎನ್ನುತ್ತಾನೆ ಯೆಹೋವನು.


ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಅನೇಕ ಯೆಹೂದಿ ಸ್ತ್ರೀಯರು ಬೇರೆ ದೇವರುಗಳಿಗೆ ನೈವೇದ್ಯಗಳನ್ನು ಅರ್ಪಿಸುತ್ತಿದ್ದರು. ಅವರ ಗಂಡಂದಿರಿಗೆ ಅದು ಗೊತ್ತಿತ್ತು. ಆದರೆ ಅವರು ಅದನ್ನು ತಡೆಯಲಿಲ್ಲ. ಯೆಹೂದದ ಜನರ ಒಂದು ದೊಡ್ಡ ಗುಂಪು ಸೇರಿತ್ತು. ಅವರು ಈಜಿಪ್ಟಿನ ದಕ್ಷಿಣಭಾಗದಲ್ಲಿ ವಾಸಿಸುವ ಯೆಹೂದಿಗಳಾಗಿದ್ದರು. ಅನ್ಯದೇವರುಗಳಿಗೆ ನೈವೇದ್ಯವನ್ನು ಅರ್ಪಿಸುತ್ತಿದ್ದ ಸ್ತ್ರೀಯರ ಗಂಡಂದಿರು ಯೆರೆಮೀಯನಿಗೆ ಹೀಗೆಂದರು:


ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ ಎಂದು ಯೆಹೋವನು ಪರಲೋಕದಿಂದ ಮನುಷ್ಯರನ್ನು ನೋಡುವನು.


ದುಷ್ಟರಿಗೆ ವಿರೋಧವಾಗಿ ಯಾರೂ ನನಗೆ ಸಹಾಯಮಾಡಲಿಲ್ಲ. ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯಾರೂ ನನ್ನೊಂದಿಗೆ ನಿಂತುಕೊಳ್ಳಲಿಲ್ಲ.


ನಾನು ಎಚ್ಚರವಹಿಸಿ ಅವರು ಹೇಳುವದನ್ನು ಕೇಳಿದ್ದೇನೆ. ಆದರೆ ಅವರು ಸರಿಯಾದುದನ್ನು ಹೇಳುವದಿಲ್ಲ. ತಾವು ಮಾಡಿದ ಪಾಪಕ್ಕಾಗಿ ಅವರು ಪಶ್ಚಾತ್ತಾಪಪಡುವದಿಲ್ಲ. ಅವರು ಮಾಡಿದ ದುಷ್ಕೃತ್ಯದ ಬಗ್ಗೆ ಅವರು ಯೋಚಿಸುವದಿಲ್ಲ. ಜನರು ವಿಚಾರ ಮಾಡದೆ ಕೆಲಸಮಾಡುತ್ತಾರೆ. ಅವರು ಯುದ್ಧದಲ್ಲಿ ಓಡುವ ಕುದುರೆಯಂತಿದ್ದಾರೆ.


ಮರಳುಗಾಡಿನಲ್ಲಿ ನನಗೊಂದು ಸ್ಥಳವಿದ್ದಿದ್ದರೆ, ಪ್ರಯಾಣಿಕರು ರಾತ್ರಿಯಲ್ಲಿ ತಂಗುವ ಮನೆ ಇದ್ದಿದ್ದರೆ, ನಾನು ನನ್ನ ಜನರನ್ನು ಅಲ್ಲಿ ಬಿಟ್ಟು, ಅವರಿಂದ ದೂರ ಹೋಗಬಹುದಾಗಿತ್ತು. ಏಕೆಂದರೆ ಅವರೆಲ್ಲರೂ ದೇವರಿಗೆ ದ್ರೋಹ ಮಾಡುತ್ತಿದ್ದಾರೆ, ಅವರೆಲ್ಲರೂ ಆತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಜನರು ಲೋಹವನ್ನು ಪುಟಕ್ಕಿಟ್ಟು ಪರೀಕ್ಷಿಸುವಂತೆ ನಾನು ಯೆಹೂದದ ಜನರನ್ನು ಪರೀಕ್ಷಿಸುತ್ತೇನೆ. ನನಗೆ ಬೇರೆ ಮಾರ್ಗವೇ ಇಲ್ಲ. ನನ್ನ ಜನರು ಪಾಪವನ್ನು ಮಾಡಿದ್ದಾರೆ.


ಅದಕ್ಕೆ ದೇವರು, “ಇಸ್ರೇಲ್ ಮತ್ತು ಯೆಹೂದ ಜನರ ದೋಷವು ಬಹಳ ಹೆಚ್ಚಾಗಿದೆ. ಈ ದೇಶದಲ್ಲಿ ಎಲ್ಲೆಲ್ಲಿಯೂ ಕೊಲೆಗಳು ನಡೆಯುತ್ತಿವೆ. ಈ ನಗರವು ಅಪರಾಧಗಳಿಂದ ತುಂಬಿಹೋಗಿದೆ. ಯಾಕೆಂದರೆ ಜನರು ಹೀಗೆಂದುಕೊಳ್ಳುತ್ತಿದ್ದಾರೆ, ‘ಯೆಹೋವನು ಈ ದೇಶವನ್ನು ಬಿಟ್ಟುಹೋಗಿದ್ದಾನೆ. ನಾವು ಮಾಡುತ್ತಿರುವಂಥದ್ದನ್ನು ಅವನು ನೋಡುವುದಿಲ್ಲ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು