ಯೆರೆಮೀಯ 5:10 - ಪರಿಶುದ್ದ ಬೈಬಲ್10 “ಯೆಹೂದದ ದ್ರಾಕ್ಷಿಯ ಸಾಲುಬಳ್ಳಿಗಳ ಬಳಿಗೆ ಹೋಗಿರಿ, ಆ ಬಳ್ಳಿಗಳನ್ನು ಕತ್ತರಿಸಿರಿ. ಆದರೆ ಅವುಗಳನ್ನು ಸಂಪೂರ್ಣವಾಗಿ ನಾಶಮಾಡಬೇಡಿರಿ. ಅವುಗಳ ಎಲ್ಲಾ ಕೊಂಬೆಗಳನ್ನು ಕತ್ತರಿಸಿಬಿಡಿ. ಏಕೆಂದರೆ, ಈ ಕೊಂಬೆಗಳು ಯೆಹೋವನಿಗೆ ಸಂಬಂಧಿಸಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ಚೀಯೋನೆಂಬ ದ್ರಾಕ್ಷಿ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಕ್ರಮಣಕಾರರಿಗೆ ಕರೆ; ಸಿಯೋನೆಂಬ ದ್ರಾಕ್ಷಾತೋಟದ ಸಾಲುಗಿಡಗಳನ್ನು ಹಾಳುಮಾಡಿ. ಆದರೆ ಅದನ್ನು ನಿರ್ಮೂಲಮಾಡಬೇಡಿ. ಅದರ ರೆಂಬೆಗಳನ್ನು ಕಿತ್ತುಹಾಕಿ. ಅವು ಸರ್ವೇಶ್ವರನಾದ ನನಗೆ ಸೇರಿದವುಗಳಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಚೀಯೋನೆಂಬ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ; ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವಳ ದ್ರಾಕ್ಷಿತೋಟಗಳ ಮೂಲಕ ಹೋಗಿ ಅವುಗಳನ್ನು ಹಾಳುಮಾಡಿರಿ. ಆದರೆ ಸಂಪೂರ್ಣವಾಗಿ ನಾಶಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ ಏಕೆಂದರೆ ಅವು ಯೆಹೋವ ದೇವರಿಗೆ ಸೇರಿದವುಗಳಲ್ಲ. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”
“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.