ನನ್ನ ಹೆಸರಿನಲ್ಲಿ ಬೋಧನೆ ಮಾಡುತ್ತಿರುವ ಈ ಪ್ರವಾದಿಗಳ ಬಗ್ಗೆ ನಾನು ಹೇಳುವದು ಇಷ್ಟೇ. ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಆ ಪ್ರವಾದಿಗಳು ‘ಶತ್ರುಗಳು ಖಡ್ಗಧಾರಿಗಳಾಗಿ ಎಂದಿಗೂ ಈ ದೇಶದ ಮೇಲೆ ಧಾಳಿ ಮಾಡುವದಿಲ್ಲ. ಈ ದೇಶದಲ್ಲಿ ಎಂದೂ ಕ್ಷಾಮ ಕಾಣಿಸಿಕೊಳ್ಳುವದಿಲ್ಲ’ ಎಂದು ಹೇಳಿದ್ದಾರೆ. ಆದರೆ ಆ ಪ್ರವಾದಿಗಳು ಹಸಿವಿನ ತಾಪದಿಂದ ಸಾಯುತ್ತಾರೆ ಮತ್ತು ಶತ್ರುವಿನ ಖಡ್ಗ ಅವರನ್ನು ಕೊಲ್ಲುತ್ತದೆ.
ಆಗ ನಾನು ಯೆಹೋವನಿಗೆ, “ನನ್ನ ಒಡೆಯನಾದ ಯೆಹೋವನೇ, ಪ್ರವಾದಿಗಳು ಜನರಿಗೆ ಬೇರೆಯದನ್ನೇ ಹೇಳಿದರು. ಅವರು ಯೆಹೂದದ ಜನರಿಗೆ, ‘ನೀವು ಶತ್ರುವಿನ ಖಡ್ಗಕ್ಕೆ ತುತ್ತಾಗುವದಿಲ್ಲ. ನೀವೆಂದಿಗೂ ಹಸಿವಿನಿಂದ ಬಳಲುವದಿಲ್ಲ, ಯೆಹೋವನು ಈ ದೇಶದಲ್ಲಿ ನಿಮಗೆ ನೆಮ್ಮದಿಯನ್ನು ದಯಪಾಲಿಸುವನು’ ಎಂದು ಹೇಳುತ್ತಿದ್ದರು” ಎಂದೆನು.
ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”
ಎರಡು ವರ್ಷಗಳೊಳಗಾಗಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೋವನ ಆಲಯದಿಂದ ತೆಗೆದುಕೊಂಡು ಹೋದ ಎಲ್ಲಾ ವಸ್ತುಗಳನ್ನು ಹಿಂದಕ್ಕೆ ತರುವೆನು. ನೆಬೂಕದ್ನೆಚ್ಚರನು ಆ ವಸ್ತುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗಿದ್ದಾನೆ. ಆದರೆ ನಾನು ಆ ವಸ್ತುಗಳನ್ನು ಜೆರುಸಲೇಮಿಗೆ ತರುತ್ತೇನೆ.
ಆಗ ಯೆರೆಮೀಯನ ವೈರಿಗಳು ಹೀಗೆಂದರು: “ಬನ್ನಿ, ನಾವು ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಯಾಜಕನಿಂದ ಧರ್ಮೋಪದೇಶವು ತಪ್ಪುವದಿಲ್ಲ, ಇದು ಖಂಡಿತ. ಜ್ಞಾನಿಗಳಿಂದ ಮಂತ್ರಾಲೋಚನೆಯು ಇದ್ದೇ ಇರುತ್ತದೆ. ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದು. ಆದ್ದರಿಂದ ಅವನ ಬಗ್ಗೆ ಸುಳ್ಳು ಹೇಳಿ ನಾಶಮಾಡೋಣ. ಅವನು ಹೇಳುವ ಯಾವುದಕ್ಕೂ ನಾವು ಗಮನಕೊಡಬೇಕಾಗಿಲ್ಲ.”
ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.
ಯೆಹೂದವೇ, ನನ್ನ ದಂಡನೆಯು ಒಂದು ಬಿರುಗಾಳಿಯಂತೆ ಬರುವುದು. ಅದು ನಿನ್ನ ಎಲ್ಲಾ ಕುರುಬರನ್ನು (ನಾಯಕರನ್ನು) ಹಾರಿಸಿಕೊಂಡು ಹೋಗುವುದು. ಯಾವುದಾದರೂ ಬೇರೆ ಜನಾಂಗ ನಿನಗೆ ಸಹಾಯಮಾಡಬಹುದೆಂದು ನೀನು ಭಾವಿಸಿಕೊಂಡಿರುವೆ. ಆದರೆ ಆ ಜನಾಂಗಗಳನ್ನೂ ಸೋಲಿಸಲಾಗುವುದು. ಆಗ ನಿನಗೆ ನಿಜವಾಗಿಯೂ ಆಶಾಭಂಗವಾಗುವುದು. ನೀನು ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವೆ.
ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಮತ್ತು ಇನ್ನೂ ಕೆಲವರು ದುರಹಂಕಾರಿಗಳಾಗಿದ್ದರು ಮತ್ತು ಹಟಮಾರಿಗಳಾಗಿದ್ದರು. ಈ ಜನರು ಯೆರೆಮೀಯನ ಮೇಲೆ ಕೋಪಗೊಂಡು, “ಯೆರೆಮೀಯನೇ, ನೀನು ಸುಳ್ಳು ಹೇಳುತ್ತಿರುವೆ. ನಮ್ಮ ದೇವರಾದ ಯೆಹೋವನು ನಮಗೆ, ‘ನೀವು ಈಜಿಪ್ಟಿಗೆ ವಾಸಮಾಡಲು ಹೋಗಬಾರದು’ ಎಂದು ಹೇಳುವದಕ್ಕಾಗಿ ನಿನ್ನನ್ನು ಕಳುಹಿಸಿಲ್ಲ.