ಯೆರೆಮೀಯ 5:14 - ಪರಿಶುದ್ದ ಬೈಬಲ್14 ಯೆಹೋವನೇ, ಸರ್ವಶಕ್ತನಾದ ದೇವರು. ಆತನು ಹೀಗೆನ್ನುತ್ತಾನೆ: “ನಾನು ಶಿಕ್ಷಿಸುವದಿಲ್ಲವೆಂದು ಆ ಜನರು ಹೇಳಿದರು. ಆದ್ದರಿಂದ ಯೆರೆಮೀಯನೇ, ನಾನು ನಿನಗೆ ಹೇಳುವ ಮಾತುಗಳು ಬೆಂಕಿಯಂತೆ ಇರುವವು. ಅವರು ಸೌದೆಯಂತೆ ಆಗುವರು. ಬೆಂಕಿಯು ಎಲ್ಲಾ ಸೌದೆಯನ್ನು ಸುಟ್ಟುಬಿಡುವದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು, “ನೀವು ಹೀಗೆ ಅಂದುಕೊಂಡಿದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ, ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ದಹಿಸಿಬಿಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆದುದರಿಂದ ಸೇನಾಧೀಶ್ವರ ಸರ್ವೇಶ್ವರ ಆದ ದೇವರು ಯೆರೆಮೀಯನಿಗೆ ಹೀಗೆಂದರು : “ಇಗೋ, ಅವರು ಹೀಗೆ ಮಾತಾಡಿದ್ದರಿಂದ ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು; ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು; ಆ ಬೆಂಕಿ ಅವರನ್ನು ಸುಟ್ಟುಹಾಕುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಂತೆನ್ನುತ್ತಾನೆ - ನೀವು ಹೀಗೆ ಅಂದುಕೊಂಡದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ತಿಂದುಬಿಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಯೆರೆಮೀಯನಿಗೆ ಹೀಗೆನ್ನುತ್ತಾರೆ: “ಇಗೋ, ಅವರು ಹೀಗೆ ಮಾತಾಡಿದ್ದರಿಂದ ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು, ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು. ಆ ಬೆಂಕಿ ಅವರನ್ನು ಸುಟ್ಟುಹಾಕುವುದು.” ಅಧ್ಯಾಯವನ್ನು ನೋಡಿ |