ಯೆರೆಮೀಯ 5:15 - ಪರಿಶುದ್ದ ಬೈಬಲ್15 ಇದು ಯೆಹೋವನ ಮಾತು: “ಇಸ್ರೇಲ್ ಮನೆತನವೇ, ನಿನ್ನ ಮೇಲೆ ಧಾಳಿ ಮಾಡುವುದಕ್ಕೆ ನಾನು ಬಹಳ ದೂರದಿಂದ ಒಂದು ಜನಾಂಗವನ್ನು ತರುತ್ತೇನೆ. ಅದು ಒಂದು ಬಲಿಷ್ಠ ಜನಾಂಗ; ಅದೊಂದು ಪುರಾತನ ಕಾಲದಿಂದ ಬಂದ ಜನಾಂಗ. ಆ ಜನಾಂಗದವರು ಮಾತನಾಡುವ ಭಾಷೆ ನಿನಗೆ ತಿಳಿಯುವದಿಲ್ಲ. ಅವರು ಹೇಳುವುದು ನಿನಗೆ ಅರ್ಥವಾಗುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು. ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇಸ್ರಯೇಲ್ ವಂಶವೇ, ಸರ್ವೇಶ್ವರ ಸ್ವಾಮಿಯ ಮಾತನ್ನು ಗಮನದಿಂದ ಕೇಳು : “ನಾನು ಒಂದು ರಾಷ್ಟ್ರವನ್ನು ದೂರದಿಂದ ನಿನ್ನ ವಿರುದ್ಧ ಬರಮಾಡುವೆನು. ಅದು ಪ್ರಾಚೀನ ಹಾಗೂ ಪ್ರಬಲ ರಾಷ್ಟ್ರ. ಅದರ ಭಾಷೆ ನಿನಗೆ ತಿಳಿಯದು. ಅದು ಆಡುವ ಮಾತು ನಿನಗೆ ಅರ್ಥವಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು; ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೆಹೋವ ದೇವರು ಹೀಗೆ ಹೇಳುತ್ತಾರೆ, “ಓ ಇಸ್ರಾಯೇಲ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆ. ಅದು ಬಲವಾದ ಜನಾಂಗವು. ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು. ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
“ನನಗಾದ ರಾತ್ರಿಯ ದರ್ಶನದಲ್ಲಿ ನಾಲ್ಕನೆ ಮೃಗವನ್ನು ಕಂಡೆ. ಅದು ಅತ್ಯಂತ ಬಲಿಷ್ಠವಾಗಿತ್ತು ಮತ್ತು ಭಯಂಕರವಾಗಿತ್ತು. ಅದು ಅತಿ ಶಕ್ತಿಶಾಲಿಯಾಗಿತ್ತು. ಅದಕ್ಕೆ ದೊಡ್ಡದೊಡ್ಡ ಕಬ್ಬಿಣದ ಹಲ್ಲುಗಳಿದ್ದವು. ಈ ಪ್ರಾಣಿಯು ತಾನು ಬೇಟೆಯಾಡಿದ ಪಶುವನ್ನು ತಂಡುತುಂಡು ಮಾಡುತ್ತಾ ತಿನ್ನುತ್ತಿತ್ತು; ಮಿಕ್ಕಿದ್ದನ್ನು ಅದು ತುಳಿಯುತ್ತಿತ್ತು. ಈ ನಾಲ್ಕನೆಯ ಪ್ರಾಣಿಯು ನಾನು ಅದಕ್ಕೂ ಮುಂಚೆ ನೋಡಿದ ಮೃಗಗಳಿಗಿಂತ ಭಿನ್ನವಾಗಿತ್ತು. ಈ ಮೃಗಕ್ಕೆ ಹತ್ತು ಕೊಂಬುಗಳಿದ್ದವು.