ಯೆರೆಮೀಯ 5:18 - ಪರಿಶುದ್ದ ಬೈಬಲ್18 “ಯೆಹೂದವೇ, ಆ ಭಯಂಕರ ದಿನಗಳು ಬಂದಾಗ ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುವದಿಲ್ಲ, ಎಂದು ಯೆಹೋವನು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದರೆ ಆ ದಿನಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲಮಾಡೆನು, ಇದು ಯೆಹೋವನೆಂಬ ನನ್ನ ನುಡಿ” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಆದರೂ ಆ ದಿನಗಳಲ್ಲಿ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲ ಮಾಡುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆದರೆ ಆ ದಿನಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲಮಾಡೆನು; ಇದು ಯೆಹೋವನೆಂಬ ನನ್ನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಆದರೂ ಆ ದಿವಸಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ಅಳಿಸಿಬಿಡುವುದಿಲ್ಲ,” ಎಂದು ಯೆಹೋವ ದೇವರು ಅನ್ನುತ್ತಾರೆ. ಅಧ್ಯಾಯವನ್ನು ನೋಡಿ |
ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ತಿಂದುಬಿಡುವರು (ನಾಶಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳುಮಾಡುತ್ತಾರೆ.”
“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”