ಯೆರೆಮೀಯ 5:2 - ಪರಿಶುದ್ದ ಬೈಬಲ್2 ಜನರು ಆಣೆ ಮಾಡುವಾಗ ‘ಯೆಹೋವನಾಣೆ’ ಎಂದು ಹೇಳುವರು. ಆದರೆ ಅದು ಕೇವಲ ಬಾಯಿ ಮಾತಷ್ಟೇ ಹೊರತು ಯಥಾರ್ಥವಾದದ್ದಲ್ಲ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಜನರು, “ಯೆಹೋವನ ಜೀವದಾಣೆ” ಎಂದರೂ ಆ ಆಣೆಯು ಸುಳ್ಳೇ ಸುಳ್ಳು ಎಂದು ಯೆಹೋವನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನೀವು ‘ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳೇ ಸುಳ್ಳು ಎನ್ನುತ್ತಾರೆ ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಜನರು ಯೆಹೋವನ ಜೀವದಾಣೆ ಎಂದರೂ ಆ ಆಣೆಯು ಸುಳ್ಳೇ ಸುಳ್ಳು [ಎಂದು ಯೆಹೋವನು ಅನ್ನುತ್ತಾನೆ]. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರು, ‘ಯೆಹೋವ ದೇವರು ಜೀವದಾಣೆ,’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳಾಗಿಯೇ ಇರುತ್ತದೆ.” ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಆದರೆ, ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಎಲ್ಲಾ ಯೆಹೂದ್ಯರೇ, ಯೆಹೋವನ ಸಂದೇಶವನ್ನು ಕೇಳಿರಿ. ‘ನಾನು ಆಣೆಮಾಡಿ ಹೀಗೆ ಹೇಳುತ್ತೇನೆ. ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದಿಯರಲ್ಲಿ ಯಾರೊಬ್ಬರೂ ಇನ್ನು ಮುಂದೆ ನನ್ನ ಹೆಸರಿನ ಮೇಲೆ ಆಣೆಯಿಟ್ಟು ಹೇಳಲಾರರು ಎಂದು ನಾನು ನನ್ನ ಮಹತ್ತಾದ ನಾಮದ ಮೇಲೆ ಆಣೆಯಿಟ್ಟುಕೊಂಡು ಹೇಳುತ್ತೇನೆ. ಇನ್ನು ಮುಂದೆ ಎಂದೂ ಅವರು “ದೇವರ ಆಣೆಯಾಗಿ” ಎಂದು ಹೇಳಲಾರರು.