Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:30 - ಪರಿಶುದ್ದ ಬೈಬಲ್‌

30 ಯೆಹೋವನು, “ಯೆಹೂದ ಪ್ರದೇಶದಲ್ಲಿ ಭಯಂಕರವಾದ ಮತ್ತು ಅಸಹ್ಯವಾದ ಸಂಗತಿಗಳು ನಡೆದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಭೀಕರವೂ, ಅಸಹ್ಯವೂ ಆದ ಸಂಗತಿಯು ದೇಶದಲ್ಲಿ ನಡೆದುಬಂದಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಭೀಕರವಾದ ಹಾಗೂ ಅಸಹ್ಯವಾದ ಘಟನೆಗಳು ನಾಡಿನಲ್ಲಿ ನಡೆದುಬಂದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಭೀಕರವೂ ಅಸಹ್ಯವೂ ಆದ ಸಂಗತಿಯು ದೇಶದಲ್ಲಿ ನಡೆದುಬಂದಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ಭಯಂಕರವಾದ ಮತ್ತು ಆಶ್ಚರ್ಯವಾದ ಕಾರ್ಯವು ದೇಶದಲ್ಲಿ ನಡೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:30
5 ತಿಳಿವುಗಳ ಹೋಲಿಕೆ  

ಇಸ್ರೇಲ್ ಜನಾಂಗದಲ್ಲಿ ಅತೀ ಭಯಂಕರ ಸಂಗತಿಗಳನ್ನು ನಾನು ನೋಡಿರುತ್ತೇನೆ. ಎಫ್ರಾಯೀಮು ದೇವರಿಗೆ ದ್ರೋಹಿಯಾದನು. ಇಸ್ರೇಲು ಪಾಪದಿಂದ ಹೊಲಸಾಗಿದೆ.


ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”


“ಆಕಾಶಮಂಡಲವೇ, ನಡೆದ ಸಂಗತಿಗಳಿಗಾಗಿ ಬೆಚ್ಚಿಬೆರಗಾಗು! ಭಯದಿಂದ ನಡುಗು!” ಎಂದು ಯೆಹೋವನು ನುಡಿಯುತ್ತಾನೆ.


ಭೂಮ್ಯಾಕಾಶಗಳೇ, ಯೆಹೋವನ ಮಾತನ್ನು ಆಲಿಸಿರಿ! ಯೆಹೋವನು ಹೇಳುತ್ತಿದ್ದಾನೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.


ಯೆಹೋವನು ಹೇಳುವದನ್ನು ಆಲಿಸಿರಿ: “ಬೇರೆ ಜನಾಂಗದ ಜನರಿಗೆ ಈ ಪ್ರಶ್ನೆಯನ್ನು ಕೇಳಿರಿ, ‘ಇಸ್ರೇಲ್ ಮಾಡಿದಂಥ ದುಷ್ಕೃತ್ಯಗಳನ್ನು ಬೇರೆ ಯಾರಾದರೂ ಮಾಡಿದ್ದನ್ನು ನೀವು ಎಂದಾದರೂ ಕೇಳಿದ್ದೀರಾ?’ ಇಸ್ರೇಲ್ ದೇಶವು ದೇವರ ವಧುವಿನಂತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು