Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:9 - ಪರಿಶುದ್ದ ಬೈಬಲ್‌

9 ಹೀಗೆ ಮಾಡಿದ್ದಕ್ಕಾಗಿ ಯೆಹೂದದ ಜನರನ್ನು ನಾನು ಶಿಕ್ಷಿಸಬೇಕಲ್ಲವೇ?” ಯೆಹೋವನು ಹೇಳುತ್ತಾನೆ. “ಹೌದು, ನಾನು ಇಂಥಾ ಜನಾಂಗವನ್ನು ಶಿಕ್ಷಿಸಬೇಕು. ಅವರಿಗೆ ತಕ್ಕ ಶಿಕ್ಷೆಯನ್ನು ನಾನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಇವುಗಳಿಗಾಗಿ ದಂಡಿಸಬಾರದೋ? ಇಂತಹ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ” ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇವುಗಳ ನಿಮಿತ್ತ ನಾನು ದಂಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪವನ್ನು ತೀರಿಸದಿರುವೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇವುಗಳ ನಿಮಿತ್ತ ನಾನು ಶಿಕ್ಷಿಸಬಾರದೇ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ? ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:9
23 ತಿಳಿವುಗಳ ಹೋಲಿಕೆ  

ಹೀಗಿರಲು ನಾನು ಯೆಹೂದದ ಜನರನ್ನು ಶಿಕ್ಷಿಸಬಾರದೇ?” ಇದು ದೇವರಿಂದ ಬಂದ ಮಾತು. “ಅಂಥಾ ಜನರನ್ನು ನಾನು ಶಿಕ್ಷಿಸಬೇಕೆಂಬುದು ನಿನಗೆ ಗೊತ್ತು. ಅವರಿಗೆ ತಕ್ಕ ಶಿಕ್ಷೆಯನ್ನು ನಾನು ಕೊಡಬೇಕು.”


ಇವುಗಳ ನಿಮಿತ್ತ ಯೆಹೂದದ ಜನರನ್ನು ನಾನು ಶಿಕ್ಷಿಸಬೇಕಲ್ಲವೆ?” ಯೆಹೋವನು ಹೀಗೆನ್ನುತ್ತಾನೆ: “ಇಂಥ ಜನಾಂಗವನ್ನು ನಾನು ದಂಡಿಸಬೇಕೆಂಬುದು ನಿಮಗೆ ಗೊತ್ತು. ನಾನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡಬೇಕು.”


ಯೆಹೋವನು ಸ್ವಾಭಿಮಾನವುಳ್ಳ ದೇವರಾಗಿದ್ದಾನೆ. ಆತನು ಪಾಪಿಗಳ ಮೇಲೆ ಸೇಡನ್ನು ತೀರಿಸುವ ದೇವರು. ಆತನು ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ಪಾಪಿಗಳನ್ನು ಶಿಕ್ಷಿಸುವ ದೇವರು. ಆತನು ವೈರಿಗಳನ್ನು ಶಿಕ್ಷಿಸುವನು. ಆತನ ವೈರಿಗಳ ಮೇಲೆ ಕೋಪವು ಸದಾಕಾಲವಿರುವುದು.


ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ. ಅವರು ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ. ಯೆಹೋವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ. ಅವರ ಪಾಪಗಳನ್ನು ತನ್ನ ನೆನಪಿಗೆ ತಂದು ಅವರನ್ನು ಶಿಕ್ಷಿಸುವನು. ಅವರು ಈಜಿಪ್ಟಿಗೆ ಸೆರೆಯಾಳುಗಳಾಗಿ ಒಯ್ಯಲ್ಪಡುವರು.


“ಆಕೆಯು ಬಾಳನ ಸೇವೆಮಾಡಿದ್ದುದರಿಂದ ನಾನು ಆಕೆಯನ್ನು ಶಿಕ್ಷಿಸುವೆನು. ಬಾಳನಿಗೆ ಆಕೆ ಧೂಪ ಹಾಕಿದಳು. ಆಕೆ ವಸ್ತ್ರಾಭರಣಗಳಿಂದ ಭೂಷಿತಳಾಗಿ ಮೂಗುತಿಯನ್ನು ಧರಿಸಿಕೊಂಡು ತನ್ನ ಪ್ರೇಮಿಗಳ ಬಳಿಗೆ ಹೋದಳು. ನನ್ನನ್ನು ಮರೆತುಬಿಟ್ಟಳು.” ಇದು ಯೆಹೋವನು ಹೇಳಿದ ಮಾತು.


ನಾನು ನಿಮಗೆ ಕರುಣೆ ತೋರಿಸೆನು. ನಿಮಗಾಗಿ ನಾನು ದುಃಖಿಸುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ನಿಮ್ಮನ್ನು ಶಿಕ್ಷಿಸುವೆನು. ಅಂಥಾ ಭಯಂಕರವಾದ ಕೃತ್ಯಗಳನ್ನು ನೀವು ಮಾಡಿದ್ದೀರಿ. ನಿಮ್ಮನ್ನು ದಂಡಿಸಿದಾತನು ಯೆಹೋವನಾದ ನಾನೇ ಎಂಬುದು ಆಗ ನಿಮಗೆ ತಿಳಿಯುವುದು.


ಚೀಯೋನೇ, ನಿನಗಾಗಬೇಕಿದ್ದ ದಂಡನೆಯು ಸಂಪೂರ್ಣವಾಯಿತು. ಮತ್ತೆ ನೀನು ಸೆರೆವಾಸಕ್ಕೆ ಹೋಗುವುದಿಲ್ಲ. ಆದರೆ ಎದೋಮಿನ ಜನರೇ, ನಿಮ್ಮ ಪಾಪಗಳಿಗಾಗಿ ಯೆಹೋವನು ನಿಮ್ಮನ್ನು ದಂಡಿಸುವನು. ಆತನು ನಿಮ್ಮ ಪಾಪಗಳನ್ನು ಬಹಿರಂಗಪಡಿಸುವನು.


ಯೆಹೋವನು ಇನ್ನು ಮುಂದೆ ತಾಳ್ಮೆಯಿಂದ ಇರಲಾರನು. ನೀವು ಮಾಡಿದ ಅಸಹ್ಯಕೃತ್ಯಗಳನ್ನು ಯೆಹೋವನು ದ್ವೇಷಿಸುತ್ತಾನೆ. ಆದ್ದರಿಂದ ಆತನು ನಿಮ್ಮ ದೇಶವನ್ನು ಬರಿದಾದ ಮರುಭೂಮಿಯನ್ನಾಗಿ ಮಾಡಿದ್ದಾನೆ, ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಬೇರೆಯವರು ಆ ದೇಶದ ಬಗ್ಗೆ ಕೆಟ್ಟ ಮಾತುಗಳನ್ನಾಡುತ್ತಾರೆ.


ಆ ಕುರುಬರು ನನ್ನ ಜನರಿಗೆ ಹೊಣೆಗಾರರಾಗಿದ್ದಾರೆ. ಇಸ್ರೇಲಿನ ದೇವರಾದ ಯೆಹೋವನು ಆ ಕುರುಬರಿಗೆ ಹೀಗೆ ಹೇಳುತ್ತಾನೆ, “ನನ್ನ ಕುರಿಗಳು ಎಲ್ಲಾ ದಿಕ್ಕುಗಳಿಗೂ ಚದರುವಂತೆ ನೀವು ಮಾಡಿರುವಿರಿ. ನೀವು ಅವುಗಳನ್ನು ಓಡಿಸಿಬಿಟ್ಟಿದ್ದೀರಿ. ನೀವು ಅವುಗಳ ಯೋಗಕ್ಷೇಮವನ್ನು ನೋಡಿಕೊಳ್ಳಲಿಲ್ಲ. ಈಗ ನಾನು ನಿಮ್ಮನ್ನು ವಿಚಾರಿಸಿಕೊಳ್ಳುತ್ತೇನೆ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮ್ಮನ್ನು ದಂಡಿಸುತ್ತೇನೆ.” ಯೆಹೋವನು ಹೀಗೆ ಹೇಳಿದನು.


ಇವೆಲ್ಲವುಗಳ ಕುರಿತಾಗಿ ಒಡೆಯನೂ ಇಸ್ರೇಲಿನ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುವುದೇನೆಂದರೆ: “ನನ್ನ ಶತ್ರುಗಳೇ, ನಾನು ನಿಮ್ಮನ್ನು ಶಿಕ್ಷಿಸುವೆನು. ಇನ್ನು ಮುಂದೆ ನೀವು ನನಗೆ ಯಾವ ಕೇಡನ್ನೂ ಮಾಡುವುದಿಲ್ಲ.


“ಭೂಲೋಕವೆಲ್ಲಾ ದೇವಜನರಿಗಾಗಿ ಸಂತೋಷಿಸುವದು; ಯಾಕೆಂದರೆ ಆತನು ಅವರನ್ನು ಸಾಯಿಸುವನು; ತನ್ನ ಸೇವಕರನ್ನು ಸಂಹರಿಸುವವರನ್ನು ಶಿಕ್ಷಿಸುವನು; ತನ್ನ ವೈರಿಗಳಿಗೆ ತಕ್ಕ ದಂಡನೆ ಕೊಡುವನು. ತನ್ನ ದೇಶವನ್ನೂ ತನ್ನ ಜನರನ್ನೂ ಶುದ್ಧಿ ಮಾಡುವನು.”


ಅವರ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರು ಜಾರಿ ಕೆಟ್ಟಕಾರ್ಯಗಳನ್ನು ಮಾಡಿದಾಗ ನಾನು ಅವರನ್ನು ಶಿಕ್ಷಿಸುವೆನು. ಅವರ ಮಹಾಸಂಕಟ ಕಾಲವು ಹತ್ತಿರವೇ ಇದೆ. ಅವರಿಗೋಸ್ಕರ ಸಿದ್ಧವಾಗಿರುವ ಶಿಕ್ಷೆಯು ಬೇಗನೆ ಬರುತ್ತದೆ.’


ನೀವು ನನ್ನ ಒಡಂಬಡಿಕೆಯನ್ನು ಮೀರಿದ್ದರಿಂದ ನಾನು ನಿಮ್ಮನ್ನು ದಂಡಿಸುವೆನು. ನಿಮಗೆ ವಿರೋಧವಾಗಿ ಸೈನ್ಯಗಳನ್ನು ಬರಮಾಡುವೆ. ನೀವು ಭದ್ರತೆಗಾಗಿ ನಿಮ್ಮ ಪಟ್ಟಣಗಳೊಳಗೆ ಹೋಗುವಿರಿ. ಆದರೆ ವ್ಯಾಧಿಯು ನಿಮ್ಮಲ್ಲಿ ಹಬ್ಬುವಂತೆ ಮಾಡುವೆ. ನಿಮ್ಮ ವೈರಿಗಳು ನಿಮ್ಮನ್ನು ಸೋಲಿಸುವರು.


ನದಿ ದಡದಲ್ಲಿರುವ ನುಣುಪಾದ ಕಲ್ಲುಗಳನ್ನು ಪೂಜಿಸಲು ಆಶಿಸುತ್ತೀರಿ. ಅದರ ಮೇಲೆ ದ್ರಾಕ್ಷಾರಸ ಸುರಿದು ಪೂಜೆ ಮಾಡುತ್ತೀರಿ. ಅವುಗಳಿಗೆ ಬಲಿಯರ್ಪಿಸುತ್ತೀರಿ. ಆದರೆ ಅದರಿಂದ ನಿಮಗೆ ದೊರಕುವುದು ಕಲ್ಲೇ. ಈ ವಿಷಯ ನನ್ನನ್ನು ಸಂತೋಷಗೊಳಿಸುತ್ತದೆಂದು ನೆನಸುತ್ತೀರೋ? ಇಲ್ಲ. ಅವು ನನ್ನನ್ನು ಸಂತೋಷಪಡಿಸುವದಿಲ್ಲ.


“ಯೆಹೂದದ ದ್ರಾಕ್ಷಿಯ ಸಾಲುಬಳ್ಳಿಗಳ ಬಳಿಗೆ ಹೋಗಿರಿ, ಆ ಬಳ್ಳಿಗಳನ್ನು ಕತ್ತರಿಸಿರಿ. ಆದರೆ ಅವುಗಳನ್ನು ಸಂಪೂರ್ಣವಾಗಿ ನಾಶಮಾಡಬೇಡಿರಿ. ಅವುಗಳ ಎಲ್ಲಾ ಕೊಂಬೆಗಳನ್ನು ಕತ್ತರಿಸಿಬಿಡಿ. ಏಕೆಂದರೆ, ಈ ಕೊಂಬೆಗಳು ಯೆಹೋವನಿಗೆ ಸಂಬಂಧಿಸಿಲ್ಲ.


“ಜೆರುಸಲೇಮ್ ನಗರವು ನಿರ್ಮಾಣಗೊಂಡಂದಿನಿಂದ ಇಂದಿನವರೆಗೂ ಈ ನಗರದ ಜನರು ನನಗೆ ಕೋಪ ಬರುವಂತೆ ಮಾಡಿದ್ದಾರೆ. ಈ ನಗರವು ನನಗೆ ಅತಿಕೋಪ ಬರುವಂತೆ ಮಾಡಿದೆ. ಆದ್ದರಿಂದ ಕಣ್ಣಿಗೆ ಕಾಣದಂತೆ ಅದನ್ನು ಅಳಿಸಿಬಿಡುವೆನು.


“ನಾವು ದಂಗೆ ಎದ್ದಿದ್ದೇವೆ ಮತ್ತು ಅವಿಧೇಯರಾಗಿದ್ದೇವೆ. ಆದ್ದರಿಂದ ನೀನು ನಮ್ಮನ್ನು ಕ್ಷಮಿಸಿಲ್ಲ.


ಆದ್ದರಿಂದ ದೇಶವು ಸಹ ಅಶುದ್ಧವಾಯಿತು. ಆದ್ದರಿಂದ ನಾನು ಅದನ್ನು ಅದರ ಪಾಪಗಳಿಗಾಗಿ ದಂಡಿಸಿದೆನು. ಆ ದೇಶವು ತನ್ನಲ್ಲಿ ವಾಸಿಸಿದ ಜನರನ್ನು ಕಾರಿಬಿಟ್ಟಿತು.


ಬೇರೊಬ್ಬನ ಹೆಂಡತಿಯೊಡನೆ ಮಲಗಿಕೊಳ್ಳುವವನಿಗೆ ಇದೇ ರೀತಿಯಾಗುವುದು. ಅವನು ದಂಡನೆ ಅನುಭವಿಸುವನು.


ಸರ್ವಶಕ್ತನಾದ ಯೆಹೋವನು ಹೀಗೆ ಹೇಳಿದನು: “ಜೆರುಸಲೇಮಿನ ಸುತ್ತಮುತ್ತಲಿನ ಮರಗಳನ್ನು ಕಡಿದುಹಾಕಿರಿ; ಜೆರುಸಲೇಮಿನ ಎದುರಿಗೆ ಒಂದು ದಿಬ್ಬ ನಿರ್ಮಿಸಿರಿ. ನಗರವನ್ನು ದಂಡಿಸಬೇಕು. ನಗರದ ಒಳಗಡೆ ದಬ್ಬಾಳಿಕೆಯ ಹೊರತು ಮತ್ತೇನಿಲ್ಲ.


ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತಿದೆ, ತಡೆದುತಡೆದು ನನಗೆ ಸಾಕಾಗಿದೆ. “ಬೀದಿಯಲ್ಲಾಡುವ ಮಕ್ಕಳ ಮೇಲೆ ಅದನ್ನು ಹೊಯ್ದುಬಿಡಬೇಕು. ಒಂದೆಡೆ ಸೇರುವ ತರುಣರ ಮೇಲೆ ಅದನ್ನು ಹೊಯ್ದುಬಿಡಬೇಕು. ಗಂಡಹೆಂಡತಿಯರಿಬ್ಬರನ್ನು ಅಪಹರಿಸಲಾಗುವುದು. ಮುದುಕರನ್ನೂ ಮುಪ್ಪಿನ ಮುದುಕರನ್ನೂ ಅಪಹರಿಸಲಾಗುವುದು.


ಯೆಹೂದದ ಜನರ ನಾಲಿಗೆಗಳು ಚೂಪಾದ ಬಾಣಗಳಂತಿವೆ. ಅವರ ಬಾಯಿಗಳು ಸುಳ್ಳಾಡುತ್ತವೆ. ಪ್ರತಿಯೊಬ್ಬನು ತನ್ನ ನೆರೆಮನೆಯವನೊಂದಿಗೆ ನಯವಾಗಿ ಮಾತನಾಡುತ್ತಾನೆ. ರಹಸ್ಯವಾಗಿ ತನ್ನ ನೆರೆಮನೆಯವನನ್ನು ಆಕ್ರಮಣಮಾಡಲು ಯುಕ್ತಿ ಮಾಡುತ್ತಿರುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು