Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:13 - ಪರಿಶುದ್ದ ಬೈಬಲ್‌

13 ದೇವರು ಅವಳ ಮೇಲೆ ತನ್ನ ಕೋಪವನ್ನು ಪ್ರಕಟಿಸುವನು ಆದ್ದರಿಂದ ಅಲ್ಲಿ ಯಾರೂ ವಾಸಮಾಡಲಾರರು. ಬಾಬಿಲೋನ್ ನಗರವು ಸಂಪೂರ್ಣವಾಗಿ ನಿರ್ಜನವಾಗುವುದು. ಬಾಬಿಲೋನಿನಿಂದ ಹಾದುಹೋಗುವವರೆಲ್ಲ ಭಯಪಡುವರು. ಅದಕ್ಕೆ ಉಂಟಾದ ದುರ್ಗತಿಯನ್ನು ನೋಡಿ ಅವರು ತಮ್ಮ ತಲೆಯಾಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವುದು; ಬಾಬೆಲನ್ನು ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಪರಿಹಾಸ್ಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರನ ಕೋಪದ ನಿಮಿತ್ತ ಅದು ನಿರ್ಜನವಾಗುವುದು. ಪೂರ್ತಿಯಾಗಿ ಅದು ಪಾಳುಬೀಳುವುದು. ಬಾಬಿಲೋನನ್ನು ಹಾದುಹೋಗುವವರೆಲ್ಲರು ಅದಕ್ಕೆ ಬಂದೊದಗಿದ ವಿಪತ್ತುಗಳನ್ನು ಕಂಡು ನಿಬ್ಬೆರಗಾಗುವರು, ಸಿಳ್ಳುಹಾಕಿ ಮೂದಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವದು; ಬಾಬೆಲನ್ನು ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವುದಿಲ್ಲ; ಸಂಪೂರ್ಣ ಹಾಳಾಗುವುದು; ಬಾಬಿಲೋನನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಗಾಯಗಳ ವಿಷಯ ವಿಸ್ಮಯಪಟ್ಟು ಸಿಳ್ಳುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:13
18 ತಿಳಿವುಗಳ ಹೋಲಿಕೆ  

ಆದ್ದರಿಂದ ಯೆಹೂದ್ಯರ ದೇಶವು ಬರಿದಾದ ಮರುಭೂಮಿಯಾಗುವುದು. ಜನರು ಇಲ್ಲಿಂದ ಹಾದುಹೋಗುವಾಗಲೆಲ್ಲಾ ಸಿಳ್ಳುಹಾಕಿ ತಲೆಯಾಡಿಸುವರು. ದೇಶವು ಹಾಳಾದುದನ್ನು ನೋಡಿ ಬೆರಗಾಗುವರು.


“ಎದೋಮನ್ನು ನಾಶಮಾಡಲಾಗುವುದು. ಹಾಳಾದ ನಗರಗಳನ್ನು ಕಂಡು ಜನರು ಬೆರಗಾಗುವರು. ನಾಶವಾದ ನಗರಗಳನ್ನು ಕಂಡು ಜನರು ಆಶ್ಚರ್ಯಚಕಿತರಾಗಿ ಸಿಳ್ಳುಹಾಕುವರು.


ತಾವು ಸುರಕ್ಷಿತರಾಗಿದ್ದೇವೆ ಎಂದು ನೆನಸುವ ಜನಾಂಗಗಳ ಮೇಲೆ ನಾನು ಕೋಪಗೊಳ್ಳುವೆನು. ನಾನು ಸ್ವಲ್ಪ ಕೋಪಗೊಂಡಿದ್ದರಿಂದ ನನ್ನ ಜನರನ್ನು ಶಿಕ್ಷಿಸಲು ಆ ಜನಾಂಗಗಳನ್ನು ಉಪಯೋಗಿಸಿಕೊಂಡೆನು. ಆದರೆ ಆ ಜನಾಂಗಗಳು ಅತಿಯಾಗಿ ಅವರನ್ನು ಹಾನಿಮಾಡಿದರು.”


ಈ ನಿನೆವೆಯು ಸಂತೋಷಭರಿತ ನಗರಿಯಾಗಿದೆ. ಅದರ ನಿವಾಸಿಗಳು ತಾವು ಸುರಕ್ಷಿತರಾಗಿದ್ದೇವೆಂದು ತಿಳಿದಿದ್ದಾರೆ. ನಿನೆವೆಯು ಲೋಕದಲ್ಲಿ ಅತ್ಯಂತ ಮಹತ್ವಪೂರ್ಣ ಸ್ಥಳವೆಂದು ತಿಳಿದಿದ್ದಾರೆ. ಅವರು ಬಹಳ ಗರ್ವಪಡುತ್ತಾರೆ. ಆದರೆ ಆ ನಗರವು ನಾಶವಾಗುವದು. ಕಾಡುಮೃಗಗಳ ಹಕ್ಕೆಯಾಗುವದು. ದಾಟಿಹೋಗುವ ಜನರು, ತಮ್ಮ ಆಶ್ಚರ್ಯವನ್ನು ಸಿಳ್ಳುಹಾಕಿ ತಲೆಯಾಡಿಸಿ “ಎಂಥಾ ದುರ್ಗತಿ” ಎಂದು ಉದ್ಗರಿಸುವರು.


ಬಾಬಿಲೋನು ನಾಶವಾದ ಕಟ್ಟಡಗಳ ಗುಡ್ಡೆಯಾಗುವುದು. ಬಾಬಿಲೋನು ಕಾಡುನಾಯಿಗಳ ನಿವಾಸವಾಗುವುದು. ಜನರು ಕಲ್ಲುಬಂಡೆಗಳ ಗುಡ್ಡೆಯನ್ನು ನೋಡಿ ಆಶ್ಚರ್ಯಪಡುವರು. ಬಾಬಿಲೋನಿನ ಬಗ್ಗೆ ಜನರು ತಲೆಯಾಡಿಸುವರು. ಬಾಬಿಲೋನು ನಿರ್ಜನ ಪ್ರದೇಶವಾಗುವುದು.


“ಆದರೆ ಎಪ್ಪತ್ತು ವರ್ಷಗಳಾದ ಮೇಲೆ ನಾನು ಬಾಬಿಲೋನಿನ ರಾಜನನ್ನೂ ಜನರನ್ನೂ ದಂಡಿಸುವೆನು.” ಇದು ಯೆಹೋವನಿಂದ ಬಂದ ಸಂದೇಶ. “ಅವರ ಪಾಪಗಳಿಗಾಗಿ ನಾನು ಬಾಬಿಲೋನ್ ದೇಶವನ್ನು ದಂಡಿಸುವೆನು. ನಾನು ಶಾಶ್ವತವಾಗಿ ಆ ಭೂಮಿಯನ್ನು ಮರುಭೂಮಿಯನ್ನಾಗಿ ಮಾಡುವೆನು.


ನಾನು ಈ ನಗರವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಜೆರುಸಲೇಮಿನಿಂದ ಹಾದುಹೋಗುವಾಗ ಜನರು ಸಿಳ್ಳುಹಾಕಿ ತಲೆಯಾಡಿಸಿ ಹೋಗುವರು. ನಗರವು ಹಾಳಾಗಿರುವುದನ್ನು ಕಂಡು ಅವರು ಬೆರಗಾಗುವರು.


ದುಷ್ಟನು ಓಡಿಹೋಗುತ್ತಿರಲು ಜನರು ಚಪ್ಪಾಳೆ ತಟ್ಟುವರು; ಅವನ ಮನೆಯೊಳಗಿಂದ ಓಡಿಹೋಗುತ್ತಿರಲು ಜನರು ಸೀಟಿ ಹೊಡೆಯುವರು.”


“ಮುಂದಿನ ದಿವಸಗಳಲ್ಲಿ ನಿಮ್ಮ ಸಂತತಿಯವರೂ ದೂರದೇಶದ ಪರದೇಶಸ್ಥರೂ ನಿಮ್ಮ ದೇಶವು ಹೇಗೆ ಹಾಳಾಗಿ ಹೋಯಿತು ಎಂಬುದನ್ನು ನೋಡುವರು. ಯೆಹೋವನು ದೇಶಕ್ಕೆ ತಂದ ವ್ಯಾಧಿಗಳನ್ನು ಅವರು ನೋಡುವರು.


ಬಾಬಿಲೋನಿನ ಸೈನ್ಯವು ಜೆರುಸಲೇಮಿಗೆ ಬರಬೇಕೆಂದು ನಾನು ಆಜ್ಞಾಪಿಸುತ್ತೇನೆ.’ ಇದು ಯೆಹೋವನ ನುಡಿ. ‘ಆ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುವುದು. ಅವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು ಮತ್ತು ಅದಕ್ಕೆ ಬೆಂಕಿಯಿಟ್ಟು ಸುಟ್ಟುಬಿಡುವರು. ನಾನು ಯೆಹೂದ ಪ್ರದೇಶದ ನಗರಗಳನ್ನು ನಾಶಮಾಡುವೆನು. ಆ ನಗರಗಳು ಬರಿದಾದ ಮರುಭೂಮಿಗಳಾಗುವವು. ಅಲ್ಲಿ ಯಾರೂ ವಾಸಮಾಡಲಾರರು.’”


ಉತ್ತರದ ಒಂದು ಜನಾಂಗವು ಬಾಬಿಲೋನಿನ ಮೇಲೆ ಧಾಳಿ ಮಾಡುವುದು. ಆ ಜನಾಂಗವು ಬಾಬಿಲೋನನ್ನು ಒಂದು ಬರಿದಾದ ಮರುಭೂಮಿಯನ್ನಾಗಿ ಮಾಡುವದು. ಅಲ್ಲಿ ಯಾರೂ ವಾಸಮಾಡಲಾರರು. ಪ್ರಾಣಿಗಳು ಮತ್ತು ಮನುಷ್ಯರು ಅಲ್ಲಿಂದ ಪಲಾಯನ ಮಾಡುವರು.”


ನಿಮ್ಮಿಂದ ಜನರಿಗೆ ಮೂಲೆಗಲ್ಲಾಗುವಷ್ಟು ದೊಡ್ಡ ಕಲ್ಲು ಸಹ ಸಿಗಲಾರದು. ಜನರು ತಮ್ಮ ಕಟ್ಟಡದ ಅಸ್ತಿವಾರಕ್ಕಾಗಿ ಒಂದು ಕಲ್ಲುಬಂಡೆಯನ್ನು ಬಾಬಿಲೋನಿನಿಂದ ತೆಗೆದುಕೊಂಡು ಹೋಗಲಾರರು. ಏಕೆಂದರೆ ಶಾಶ್ವತವಾಗಿ ನಿಮ್ಮ ನಗರವು ಒಡೆದ ಕಲ್ಲುಗಳ ಗುಡ್ಡೆಯಾಗುವುದು.” ಯೆಹೋವನು ಹೀಗೆನ್ನುತ್ತಾನೆ:


ನೋವಿನಿಂದಲೋ ಎಂಬಂತೆ ಭೂಮಿಯು ನಡುಗುತ್ತದೆ ಮತ್ತು ಹೊರಳಾಡುತ್ತದೆ. ಯೆಹೋವನು ತಾನು ಯೋಚಿಸಿದಂತೆ ಬಾಬಿಲೋನಿಗೆ ಮಾಡಿದಾಗ ಅದು ನಡುಗುತ್ತದೆ. ಬಾಬಿಲೋನನ್ನು ಯಾರೂ ವಾಸಮಾಡದ ಮರುಭೂಮಿಯನ್ನಾಗಿ ಮಾಡಬೇಕೆಂಬುದು ಯೆಹೋವನ ಯೋಜನೆ.


ಆಮೇಲೆ ಹೀಗೆ ಹೇಳು: ‘ಯೆಹೋವನೇ, ಬಾಬಿಲೋನ್ ನಗರವನ್ನು ನಾಶಮಾಡುವೆನೆಂದು ನೀನು ಹೇಳಿರುವೆ. ಪ್ರಾಣಿಗಳು ಅಥವಾ ಮನುಷ್ಯರು ಯಾರೂ ಇಲ್ಲಿ ವಾಸಮಾಡದಂತೆ, ಇದು ಎಂದೆಂದಿಗೂ ಹಾಳುಬಿದ್ದ ಸ್ಥಳವಾಗಿರುವಂತೆ ಇದನ್ನು ನಾಶಮಾಡುವದಾಗಿ ಹೇಳಿರುವೆ.’


ಬೇರೆ ದೇಶಗಳಲ್ಲಿರುವ ವ್ಯಾಪಾರಿಗಳು ಆಶ್ಚರ್ಯದಿಂದ ಸಿಳ್ಳು ಹಾಕಿದರು. ನಿನಗೆ ಸಂಭವಿಸಿದ ವಿಷಯಗಳು ಜನರಿಗೆ ಭೀತಿಯನ್ನುಂಟುಮಾಡಿತು. ಯಾಕೆಂದರೆ ನಿನ್ನ ಕಥೆ ಮುಗಿಯಿತು. ನಿನಗೆ ಅಂತ್ಯವಾಯಿತು. ಇನ್ನು ನೀನು ಕಾಣುವದಿಲ್ಲ.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು