Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:14 - ಪರಿಶುದ್ದ ಬೈಬಲ್‌

14 “ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧತೆಗಳನ್ನು ಮಾಡಿರಿ. ಬಿಲ್ಲುಗಾರರೇ, ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಿರಿ. ನಿಮ್ಮ ಬಾಣಗಳಲ್ಲಿ ಒಂದನ್ನೂ ಉಳಿಸಿಕೊಳ್ಳಬೇಡಿರಿ. ಅದು ಯೆಹೋವನ ವಿರುದ್ಧವಾಗಿ ಪಾಪ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬಿಲ್ಲುಗಾರರೇ, ನೀವೆಲ್ಲರೂ ವ್ಯೂಹಕಟ್ಟಿ ಬಾಬಿಲೋನಿಗೆ ಮುತ್ತಿಗೆ ಹಾಕಿರಿ, ಬಾಣಗಳನ್ನು ಉಳಿಸದೆ ಎಸೆಯಿರಿ; ಅದು ಯೆಹೋವನಿಗೆ ಪಾಪ ಮಾಡಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಬಿಲ್ಲುಗಾರರೇ, ನೀವೆಲ್ಲರು ವ್ಯೂಹಕಟ್ಟಿ ಬಾಬಿಲೋನಿಗೆ ಮುತ್ತಿಗೆಹಾಕಿರಿ. ಬಾಣಗಳನ್ನು ಮಿಗಿಸದೆ ಎಸೆಯಿರಿ. ಅದು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಬಿಲ್ಲುಗಾರರೇ, ನೀವೆಲ್ಲರೂ ವ್ಯೂಹಕಟ್ಟಿ ಬಾಬೆಲಿಗೆ ಮುತ್ತಿಗೆ ಹಾಕಿರಿ, ಬಾಣಗಳನ್ನು ವಿುಗಿಸದೆ ಎಸೆಯಿರಿ; ಅದು ಯೆಹೋವನಿಗೆ ಪಾಪಮಾಡಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಬಿಲ್ಲನ್ನು ಬಗ್ಗಿಸುವವರೇ, ಬಾಬಿಲೋನಿಗೆ ವಿರೋಧವಾಗಿ ಸುತ್ತಲೂ ಯುದ್ಧ ಸಿದ್ಧಮಾಡಿರಿ; ಅದಕ್ಕೆ ಎಸೆಯಿರಿ; ಬಾಣಗಳನ್ನು ಕಡಿಮೆ ಮಾಡಬೇಡಿರಿ; ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:14
21 ತಿಳಿವುಗಳ ಹೋಲಿಕೆ  

“ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಲು ಬಿಲ್ಲುಗಾರರಿಗೆ ಹೇಳಿರಿ. ಆ ಜನರಿಗೆ ನಗರವನ್ನು ಮುತ್ತಲು ಹೇಳಿರಿ. ಯಾರೂ ತಪ್ಪಿಸಿಕೊಂಡು ಹೋಗದಂತೆ ನೋಡಿಕೊಳ್ಳಿ. ಅದು ಮಾಡಿದ ದುಷ್ಕೃತ್ಯಗಳಿಗಾಗಿ ಮುಯ್ಯಿತೀರಿಸಿರಿ. ಬೇರೆ ಜನಾಂಗಗಳಿಗೆ ಅದು ಮಾಡಿದಂತೆ ಅದಕ್ಕೆ ಮಾಡಿರಿ. ಬಾಬಿಲೋನ್ ಯೆಹೋವನನ್ನು ಗೌರವಿಸಲಿಲ್ಲ. ಪರಿಶುದ್ಧನಿಗೆ ಅವಮಾನ ಮಾಡಿದೆ. ಆದ್ದರಿಂದ ಬಾಬಿಲೋನನ್ನು ಶಿಕ್ಷಿಸಬೇಕು.


ಲೆಬನೋನಿನಲ್ಲಿ ಅನೇಕರನ್ನು ಗಾಯಗೊಳಿಸಿರುವೆ. ಅಲ್ಲಿ ಎಷ್ಟೋ ಪಶುಗಳನ್ನು ಅಪಹರಿಸಿರುವೆ. ಆ ದೇಶದಲ್ಲಿ ನೀನು ಮಾಡಿದ ದುಷ್ಕೃತ್ಯಗಳ ನಿಮಿತ್ತ, ಅದರಿಂದಾಗಿ ಅಲ್ಲಿ ಸತ್ತುಹೋದವರ ನಿಮಿತ್ತ ನೀನು ಭಯಗ್ರಸ್ತನಾಗಿರುವೆ. ಅಲ್ಲಿಯ ಪಟ್ಟಣಗಳಿಗೆ ನೀನು ಮಾಡಿದ ಹಾನಿ, ಜನರಿಗೆ ನೀನು ಕೊಟ್ಟ ಸಂಕಟದ ನಿಮಿತ್ತ ನಿನಗೆ ಹೆದರಿಕೆಯುಂಟಾಗಿದೆ.”


ಎಷ್ಟೋ ಜನಾಂಗಗಳಿಂದ ನೀನು ವಸ್ತುಗಳನ್ನು ಅಪಹರಿಸಿರುವೆ. ಅವರು ನಿನ್ನಿಂದ ಇನ್ನೂ ಹೆಚ್ಚಾಗಿ ಅಪಹರಿಸುವರು. ನೀನು ಎಷ್ಟೋ ಮಂದಿಯನ್ನು ಕೊಂದಿರುವೆ; ದೇಶಗಳನ್ನೂ ನಗರಗಳನ್ನೂ ನಾಶಮಾಡಿರುವೆ. ಅಲ್ಲಿಯ ಎಷ್ಟೋ ಜನರನ್ನು ಸಂಹರಿಸಿರುವೆ.


ಅವರ ಸೈನಿಕರ ಹತ್ತಿರ ಬಿಲ್ಲುಗಳು ಮತ್ತು ಭರ್ಜಿಗಳು ಇವೆ. ಆ ಸೈನಿಕರು ಕ್ರೂರಿಗಳಾಗಿದ್ದಾರೆ. ಅವರಿಗೆ ದಯೆದಾಕ್ಷಿಣ್ಯ ಇಲ್ಲ. ಆ ಸೈನಿಕರು ತಮ್ಮ ಕುದುರೆಗಳ ಮೇಲೆ ಬರುತ್ತಿದ್ದಾರೆ. ಅವರ ಧ್ವನಿ ಆರ್ಭಟಿಸುವ ಸಮುದ್ರದಂತಿದೆ. ಅವರು ಯುದ್ಧಕ್ಕೆ ಸಿದ್ಧರಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದಾರೆ. ಬಾಬಿಲೋನ್ ನಗರವೇ, ಅವರು ನಿನ್ನ ಮೇಲೆ ಧಾಳಿಮಾಡಲು ಸಿದ್ಧರಾಗಿದ್ದಾರೆ.


ಉತ್ತರ ದಿಕ್ಕಿನ ಹಲವು ಜನಾಂಗಗಳನ್ನು ನಾನು ಒಟ್ಟುಗೂಡಿಸಿ ತರುವೆನು. ಆ ಜನಾಂಗಗಳ ಸಮುದಾಯವು ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧವಾಗುತ್ತದೆ. ಬಾಬಿಲೋನ್ ಅವರಿಗೆ ವಶವಾಗುವುದು. ಆ ಜನಾಂಗಗಳ ಜನರು ಬಾಬಿಲೋನಿನ ಮೇಲೆ ಹಲವು ಬಾಣಗಳನ್ನು ಪ್ರಯೋಗ ಮಾಡುವರು. ಆ ಬಾಣಗಳೆಲ್ಲ ಬರಿಗೈಯಲ್ಲಿ ಯುದ್ಧದಿಂದ ಹಿಂದಿರುಗದ ಶೂರ ಸೈನಿಕರಂತಿರುವವು.


ನನ್ನ ಜನರನ್ನು ಕಂಡವರೆಲ್ಲ ಅವರನ್ನು ನೋಯಿಸಿದ್ದಾರೆ. ಆ ಶತ್ರುಗಳು, ‘ನಾವು ಮಾಡಿದ್ದು ತಪ್ಪಲ್ಲ. ಅವರು ಯೆಹೋವನ ವಿರುದ್ಧ ಪಾಪ ಮಾಡಿದ್ದಾರೆ. ಯೆಹೋವನು ಅವರ ನಿಜವಾದ ನಿವಾಸವಾಗಿದ್ದನು. ಯೆಹೋವನು ಅವರ ಪೂರ್ವಿಕರು ನಂಬಿದ್ದ ದೇವರಾಗಿದ್ದನು’ ಎಂದರು.


ಅವಳ ಹಣೆಯ ಮೇಲೆ ಒಂದು ಬರಹವನ್ನು ಬರೆದಿತ್ತು. ಆ ಬರಹಕ್ಕೆ ಗೂಢಾರ್ಥವಿತ್ತು. ಅಲ್ಲಿ ಬರೆದಿದ್ದುದು ಹೀಗಿತ್ತು: ಬಾಬಿಲೋನ್ ಎಂಬ ಮಹಾನಗರಿಯು ಭೂಮಿಯಲ್ಲಿರುವ ಕೆಟ್ಟಕಾರ್ಯಗಳಿಗೆ ಮತ್ತು ಜಾರಸ್ತ್ರೀಯರಿಗೆ ತಾಯಿ.


“ಎಲ್ಲಾ ದೇಶಗಳಲ್ಲಿ ಯುದ್ಧದ ಧ್ವಜವನ್ನು ಹಾರಿಸಿರಿ. ಎಲ್ಲಾ ರಾಷ್ಟ್ರಗಳಲ್ಲಿ ತುತ್ತೂರಿಗಳನ್ನು ಊದಿರಿ. ಬಾಬಿಲೋನಿನ ವಿರುದ್ಧ ಹೋರಾಡಲು ಎಲ್ಲಾ ಜನಾಂಗಗಳನ್ನು ಸಿದ್ಧಗೊಳಿಸಿರಿ. ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಜ್ಯಗಳನ್ನು ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಕರೆಯಿರಿ. ಸೈನ್ಯದ ಮುಂದಾಳಾಗಿರಲು ಒಬ್ಬ ಸೇನಾಧಿಪತಿಯನ್ನು ಆರಿಸಿರಿ. ಮಿಡತೆಯ ದಂಡಿನಂತೆ ಅಪಾರವಾಗಿರುವ ಅಶ್ವಬಲವನ್ನು ಕಳುಹಿಸಿರಿ.


ಬಾಬಿಲೋನನ್ನು ತೂರುವದಕ್ಕಾಗಿ ನಾನು ವಿದೇಶಿಯರನ್ನು ಕಳಿಸುವೆನು. ಅವರು ಬಾಬಿಲೋನನ್ನು ತೂರುವರು. ಆ ಜನರು ಬಾಬಿಲೋನನ್ನು ಬರಿದುಗೊಳಿಸುವರು. ಸೈನಿಕರು ನಗರವನ್ನು ಮುತ್ತುವರು; ಅಪಾರ ವಿನಾಶ ಸಂಭವಿಸುವದು.


“ಬಾಬಿಲೋನೇ, ನೀನು ಉಲ್ಲಾಸದಲ್ಲಿರುವೆ ಮತ್ತು ಸಂತೋಷದಲ್ಲಿರುವೆ. ನೀನು ನನ್ನ ಪ್ರದೇಶವನ್ನು ತೆಗೆದುಕೊಂಡೆ. ನೀನು ಕಣತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿರುವೆ. ನಿನ್ನ ನಗು ಕುದುರೆಗಳ ಸಂತೋಷಭರಿತ ಕೆನೆತದಂತೆ ಇದೆ.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನಾನು ಅತಿ ಶೀಘ್ರದಲ್ಲಿ ಏಲಾಮಿನ ಬಿಲ್ಲನ್ನು ಮುರಿದುಹಾಕುವೆನು. ಏಲಾಮಿಗೆ ಬಿಲ್ಲು ಬಹು ಮುಖ್ಯವಾದ ಆಯುಧವಾಗಿದೆ.


ಅಶ್ವಾರೋಹಿಗಳೇ, ಯುದ್ಧದಲ್ಲಿ ಧುಮುಕಿರಿ, ಸಾರಥಿಗಳೇ, ರಥಗಳನ್ನು ವೇಗವಾಗಿ ಓಡಿಸಿರಿ. ಶೂರ ಸೈನಿಕರೇ, ಮುನ್ನುಗ್ಗಿರಿ; ಕೂಷ್ಯ ಮತ್ತು ಪೂಟ್ಯ ಸೈನಿಕರೇ, ನಿಮ್ಮ ಗುರಾಣಿಗಳನ್ನು ಹಿಡಿದುಕೊಂಡು ಹೋಗಿರಿ. ಲೂದ್ಯ ಸೈನಿಕರೇ, ನಿಮ್ಮ ಬಿಲ್ಲುಗಳನ್ನು ಉಪಯೋಗಿಸಿರಿ.


“ಪರ್ವತಗಳಲ್ಲಿ ಒಂದು ದೊಡ್ಡ ಶಬ್ದ ಕೇಳಿಸುತ್ತದೆ. ಆ ಶಬ್ದಕ್ಕೆ ಕಿವಿಗೊಡಿರಿ. ದೊಡ್ಡ ಜನಸಮೂಹದ ಶಬ್ದದಂತೆ ಕೇಳಿಸುತ್ತದೆ. ಅನೇಕ ರಾಜ್ಯಗಳ ಜನರು ಒಟ್ಟಾಗಿ ಸೇರುತ್ತಿದ್ದಾರೆ. ಸರ್ವಶಕ್ತನಾದ ಯೆಹೋವನು ತನ್ನ ಸೈನ್ಯವನ್ನು ಒಟ್ಟುಗೂಡಿಸುತ್ತಿದ್ದಾನೆ.


ವೈರಿಗಳ ಬಾಣಗಳು ಬಹು ಹರಿತವಾದದ್ದು. ಅವರ ಬಿಲ್ಲುಗಳೆಲ್ಲವೂ ಬಾಣವೆಸೆಯಲು ತಯಾರಾಗಿವೆ. ಅವರ ಕುದುರೆಗಳ ಪಾದಗಳು ಬಂಡೆಯಂತೆ ಗಟ್ಟಿಯಾಗಿವೆ. ಅವರ ರಥಗಳ ಹಿಂದಿನಿಂದ ಧೂಳಿನ ಮೋಡವೇ ಹಾರುವದು.


ನಿನ್ನ ದೃಷ್ಟಿಗೆ ಕೆಟ್ಟದ್ದಾಗಿದ್ದನ್ನೇ ಮಾಡಿದ್ದೇನೆ. ಹೌದು, ನಾನು ಪಾಪ ಮಾಡಿದ್ದು ನಿನಗೇ. ನಾನು ತಪ್ಪಿತಸ್ಥನೆಂತಲೂ ನೀನು ನೀತಿವಂತನೆಂತಲೂ ಜನರಿಗೆ ಗೊತ್ತಾಗಲೆಂದೇ ಇವುಗಳನ್ನು ಅರಿಕೆಮಾಡಿಕೊಳ್ಳುತ್ತಿದ್ದೇನೆ. ನಿನ್ನ ತೀರ್ಪುಗಳು ನ್ಯಾಯಬದ್ಧವಾಗಿವೆ.


ಅಮ್ಮೋನಿಯರು ತಮ್ಮ ವಿರುದ್ಧವಾಗಿ ಹಿಂದೆ ಮತ್ತು ಮುಂದೆ ನಿಂತಿರುವುದನ್ನು ನೋಡಿದ ಯೋವಾಬನು ಇಸ್ರೇಲರಲ್ಲಿ ಶ್ರೇಷ್ಠರಾದವರನ್ನು ಆರಿಸಿಕೊಂಡು ಅರಾಮ್ಯರ ವಿರುದ್ಧ ಯುದ್ಧಮಾಡಲು ಅವರನ್ನು ಸಾಲಾಗಿ ನಿಲ್ಲಿಸಿದನು.


ದಾವೀದನು ಮಾರನೆಯ ದಿನ ಬೆಳಿಗ್ಗೆ ಕುರುಬನೊಬ್ಬನಿಗೆ ತನ್ನ ಕುರಿಗಳನ್ನು ಕಾಯಲು ಒಪ್ಪಿಸಿದನು. ಇಷಯನು ತಿಳಿಸಿದಂತೆ ದಾವೀದನು ಆಹಾರವನ್ನೆಲ್ಲ ತೆಗೆದುಕೊಂಡು ಹೊರಟನು. ದಾವೀದನು ತನ್ನ ಬಂಡಿಯನ್ನು ಪಾಳೆಯಕ್ಕೆ ಹೊಡೆದುಕೊಂಡು ಹೋದನು. ದಾವೀದನು ಅಲ್ಲಿಗೆ ಬರುವಷ್ಟರಲ್ಲಿ ಸೈನಿಕರೆಲ್ಲರು ಯುದ್ಧಭೂಮಿಗೆ ಹೋಗುವುದರಲ್ಲಿದ್ದರು. ಸೈನಿಕರೆಲ್ಲರು ಆರ್ಭಟಿಸುತ್ತಾ ಯುದ್ಧಭೂಮಿಯಲ್ಲಿ ಸೇರುತ್ತಿದ್ದರು.


ಯೆಹೋವನ ಒಂದು ಸಂದೇಶವನ್ನು ಕೇಳಿದೆ. ಯೆಹೋವನು ಎಲ್ಲಾ ಜನಾಂಗಗಳಿಗೆ ಸಂದೇಶವಾಹಕರನ್ನು ಕಳುಹಿಸಿದ್ದನು. ಆ ಸಂದೇಶ ಹೀಗಿದೆ: “ನಿಮ್ಮ ಸೈನ್ಯಗಳನ್ನು ಒಂದಡೆ ಸೇರಿಸಿರಿ. ಯುದ್ಧಕ್ಕೆ ಸಿದ್ಧರಾಗಿರಿ. ಎದೋಮ್ ಜನಾಂಗದ ವಿರುದ್ಧ ದಂಡಯಾತ್ರೆ ಮಾಡಿರಿ.


ಬಾಬಿಲೋನಿನ ಸೈನಿಕರು ತಮ್ಮ ಬಿಲ್ಲುಬಾಣಗಳನ್ನು ಉಪಯೋಗಿಸಲಾರರು. ಅವರು ತಮ್ಮ ಕವಚಗಳನ್ನು ಧರಿಸಲಾರರು. ಬಾಬಿಲೋನಿನ ಯೋಧರಿಗೆ ಮರುಕ ತೋರಿಸಬೇಡಿ. ಅದರ ಸೈನ್ಯವನ್ನು ಸಂಪೂರ್ಣವಾಗಿ ನಾಶಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು