ಯೆರೆಮೀಯ 50:16 - ಪರಿಶುದ್ದ ಬೈಬಲ್16 ಬಾಬಿಲೋನಿನ ಜನರಿಗೆ ಬೀಜಗಳನ್ನು ಬಿತ್ತಲು ಬಿಡಬೇಡಿ. ಸುಗ್ಗಿ ಮಾಡಲು ಅವರಿಗೆ ಬಿಡಬೇಡಿ. ಬಾಬಿಲೋನಿನ ಸೈನಿಕರು ಹಲವಾರು ಸೆರೆಯಾಳುಗಳನ್ನು ಹಿಡಿದುತಂದಿದ್ದಾರೆ. ಈಗ ಶತ್ರು ಸೈನಿಕರು ಬಂದುದರಿಂದ ಆ ಸೆರೆಯಾಳುಗಳು ತಮ್ಮ ಪ್ರದೇಶಗಳಿಗೆ ಹಿಂತಿರುಗುತ್ತಿದ್ದಾರೆ, ಆ ಸೆರೆಯಾಳುಗಳು ತಮ್ಮ ದೇಶಗಳಿಗೆ ಓಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಬೀಜ ಬಿತ್ತುವವನನ್ನೂ ಮತ್ತು ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ; ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬೀಜಬಿತ್ತುವವನಾಗಲಿ, ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನಾಗಲಿ ಆ ಬಾಬಿಲೋನಿನಲ್ಲಿ ಇಲ್ಲದಂತೆ ಮಾಡಿ. ಪ್ರತಿಯೊಬ್ಬ ವಿದೇಶಿಯನು ಹತ್ಯಮಾಡುವ ಆ ಖಡ್ಗದ ಮುಂದೆ ನಿಲ್ಲಲಾಗದೆ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಬೀಜಬಿತ್ತುವವನನ್ನೂ ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ; ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನದ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಬಿತ್ತುವವನನ್ನೂ, ಸುಗ್ಗಿಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬಿಲೋನಿನೊಳಗಿಂದ ಕಡಿದುಬಿಡಿರಿ; ಕಷ್ಟಪಡುವ ಖಡ್ಗದ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿಹೋಗುವರು. ಅಧ್ಯಾಯವನ್ನು ನೋಡಿ |