ಯೆರೆಮೀಯ 50:17 - ಪರಿಶುದ್ದ ಬೈಬಲ್17 “ಇಸ್ರೇಲು ದೇಶಗಳಲ್ಲೆಲ್ಲಾ ಚದರಿಹೋದ ಕುರಿಹಿಂಡಿನಂತಾಗಿದೆ. ಸಿಂಹಗಳಿಗೆ ಹೆದರಿ ಓಡಿಹೋದ ಕುರಿಗಳಂತಾಗಿದೆ ಇಸ್ರೇಲು. ಅದನ್ನು ತಿಂದು ಮುಗಿಸಿದ ಮೊದಲನೆ ಸಿಂಹವೆಂದರೆ ಅಶ್ಶೂರದ ರಾಜನು. ಅದರ ಎಲುಬುಗಳನ್ನು ಜಗಿದ ಕೊನೆಯ ಸಿಂಹವೆಂದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಇಸ್ರಯೇಲ್ ಚದರಿಹೋದ ಮಂದೆ. ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ. ಮೊಟ್ಟಮೊದಲು ಅಸ್ಸೀರಿಯಾದ ಅರಸನು ಅದನ್ನು ಕಬಳಿಸಿದನು. ಕಟ್ಟಕಡೆಗೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇಸ್ರಾಯೇಲು ಚದರಿಹೋದ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಇಸ್ರಾಯೇಲನು ಚದರಿಹೋದ ಕುರಿಯಾಗಿದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಸ್ಸೀರಿಯನ ಅರಸನು ಅವನನ್ನು ತಿಂದುಬಿಟ್ಟನು. ಕಡೆಯಲ್ಲಿ ಬಾಬಿಲೋನಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.” ಅಧ್ಯಾಯವನ್ನು ನೋಡಿ |
“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.
ಆದ್ದರಿಂದ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ಯುದ್ಧಮಾಡಲು ತನ್ನ ಎಲ್ಲಾ ಸೇನೆಯೊಡನೆ ಬಂದನು. ನೆಬೂಕದ್ನೆಚ್ಚರನು ಜೆರುಸಲೇಮಿನ ಸುತ್ತಲೂ ಪಾಳೆಯ ಮಾಡಿಕೊಂಡು ಮಣ್ಣಿನ ದಿಬ್ಬವನ್ನು ನಿರ್ಮಿಸಿದನು. ಅವನು ನಗರದೊಳಕ್ಕೆ ಹೋಗುವ ಮತ್ತು ನಗರದಿಂದ ಬರುವ ಜನರನ್ನು ತಡೆಯಲು ಹೀಗೆ ಮಾಡಿದನು. ಇದು ನೆಬೂಕದ್ನೆಚ್ಚರನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಂದು ಸಂಭವಿಸಿತು.
ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ತಿಂದುಬಿಡುವರು (ನಾಶಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳುಮಾಡುತ್ತಾರೆ.”
“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’