Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:19 - ಪರಿಶುದ್ದ ಬೈಬಲ್‌

19 “‘ಆದರೆ ಇಸ್ರೇಲನ್ನು ಪುನಃ ಅದರ ಹುಲ್ಲುಗಾವಲಿಗೆ ತರುವೆನು. ಅದು ಕರ್ಮೆಲ್ ಬೆಟ್ಟದ ಮೇಲೆ ಮತ್ತು ಬಾಷಾನಿನ ಪ್ರದೇಶದಲ್ಲಿ ಮೇಯುವದು. ಅದು ತಿಂದು ತೇಗುವದು. ಅದು ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತಿಂದು ತೃಪ್ತಿಪಡುವದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇಸ್ರಾಯೇಲನ್ನು ಪುನಃ ಅದರ ಹುಲ್ಗಾವಲಿಗೆ ಸೇರಿಸುವೆನು; ಅದು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವುದು; ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತೃಪ್ತಿಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇಸ್ರಯೇಲೆಂಬ ಮಂದೆಯನ್ನು ಮರಳಿ ಅದರ ಹುಲ್ಲುಗಾವಲಿಗೆ ಸೇರಿಸುವೆನು. ಅದು ಕರ್ಮೆಲಿನಲ್ಲೂ ಭಾಷಾನಿನಲ್ಲೂ ಮೇಯುವುದು. ಎಫ್ರಯಿಮಿನ ಮತ್ತು ಗಿಲ್ಯಾದಿನ ಗುಡ್ಡಗಳಲ್ಲಿ ಹೊಟ್ಟೆತುಂಬ ತಿನ್ನುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇಸ್ರಾಯೇಲನ್ನು ಪುನಃ ಅದರ ಹುಲ್ಗಾವಲಿಗೆ ಸೇರಿಸುವೆನು; ಅದು ಕರ್ಮೆಲಿನಲ್ಲಿಯೂ ಬಾಷಾನಿನಲ್ಲಿಯೂ ಮೇಯುವದು; ಎಫ್ರಾಯೀವಿುನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತೃಪ್ತಿಗೊಳ್ಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರುಗಿ ಬರಮಾಡುತ್ತೇನೆ; ಅವನು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯೀಮ್ ಬೆಟ್ಟದಲ್ಲಿಯೂ, ಗಿಲ್ಯಾದಿನಲ್ಲಿಯೂ ತೃಪ್ತಿ ಹೊಂದುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:19
36 ತಿಳಿವುಗಳ ಹೋಲಿಕೆ  

ಆದ್ದರಿಂದ ನಿನ್ನ ಜನರನ್ನು ಕಬ್ಬಿಣದ ಕೋಲಿನಿಂದ ಆಳು, ನಿನಗೆ ಸೇರಿದ ಜನರ ಹಿಂಡುಗಳನ್ನು ಆಳು. ಆ ಗುಂಪು ಅಡವಿಯಲ್ಲಿ ತಾನಾಗಿಯೇ ವಾಸಿಸುತ್ತದೆ; ಕರ್ಮೆಲ್ ಬೆಟ್ಟದಲ್ಲಿಯೂ ವಾಸಿಸುತ್ತದೆ. ಹಿಂದಿನ ಕಾಲದಲ್ಲಿ ಮಾಡಿದಂತೆ ಆ ಗುಂಪು ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯದಲ್ಲಿ ವಾಸಿಸುತ್ತದೆ.


ಒಂದು ಕಾಲ ಬರುವುದು, ಆಗ ಕಾವಲುಗಾರರು, ‘ಬನ್ನಿ, ನಮ್ಮ ದೇವರಾದ ಯೆಹೋವನನ್ನು ಆರಾಧಿಸಲು ಚೀಯೋನಿಗೆ ಹೋಗೋಣ’ ಎಂದು ಕೂಗುವರು. ಎಫ್ರಾಯೀಮಿನ ಬೆಟ್ಟಪ್ರದೇಶದ ಕಾವಲುಗಾರರು ಸಹ ಹೀಗೆಯೇ ಕೂಗುವರು.”


ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ. ನಿನ್ನ ಜನಶೇಷವನ್ನು ಮನ್ನಿಸುವೆ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ.


ಬಹುಕಾಲದ ನಂತರ, ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಅನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣಹೊಂದಿರುವ ದೇಶಕ್ಕೆ ಬರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಬಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಬರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನ್ನು ಮತ್ತೆ ಕರೆದುಕೊಂಡು ಬರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮ್ಮನ್ನು ನಿಮ್ಮ ಪಾಪಗಳಿಂದ ಶುದ್ಧೀಕರಿಸುವ ದಿನದಲ್ಲಿ ನಿಮ್ಮ ಪಟ್ಟಣಗಳನ್ನು ಪುನರ್ ಸ್ಥಾಪಿಸುವೆನು. ನಾನು ಹಾಳುಬಿದ್ದ ಕಟ್ಟಡಗಳನ್ನು ಮತ್ತೆ ಕಟ್ಟುವೆನು.


ದೇವರು ಹೇಳಿದ್ದೇನೆಂದರೆ, “ನಾನು ಆ ದೇಶಗಳಿಂದ ನಿಮ್ಮನ್ನು ತೆಗೆದು, ನಿಮ್ಮನ್ನು ಒಟ್ಟುಗೂಡಿಸಿ ನಿಮ್ಮ ಸ್ವದೇಶಕ್ಕೆ ತಿರುಗಿ ಬರಮಾಡುವೆನು.


ಆದ್ದರಿಂದ ಹೀಗೆ ಹೇಳು: ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿಮ್ಮನ್ನು ಜನಾಂಗಗಳಿಂದ ಒಟ್ಟುಗೂಡಿಸುವೆನು; ನೀವು ಚದರಿಸಲ್ಪಟ್ಟಿರುವ ದೇಶಗಳಿಂದ ನಾನು ನಿಮ್ಮನ್ನು ಒಟ್ಟುಗೂಡಿಸುವೆನು; ಮತ್ತು ನಾನು ನಿಮಗೆ ಇಸ್ರೇಲ್ ದೇಶವನ್ನು ಕೊಡುವೆನು.


‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.


ದುಬರ್ಲಗೊಂಡ ಮತ್ತು ದಣಿದ ಜನರಿಗೆ ನಾನು ಶಕ್ತಿಯನ್ನೂ ವಿಶ್ರಾಂತಿಯನ್ನೂ ಕೊಡುವೆನು.”


ಯಾಜಕರು ತಮಗೆ ಬೇಕಾಗುವದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೈವೇದ್ಯಗಳನ್ನು ಪಡೆಯುವರು. ನಾನು ಅವರಿಗೆ ಕೊಡುವ ಉತ್ತಮ ವಸ್ತುಗಳನ್ನು ಮನದಣಿಯುವ ಹಾಗೆ ಅನುಭವಿಸಿ ನನ್ನ ಜನರು ತೃಪ್ತಿಪಡುವರು.” ಇದು ಯೆಹೋವನ ನುಡಿ.


ಯೆಹೋವನು ಹೀಗೆನ್ನುತ್ತಾನೆ, “ಯಾಕೋಬಿನ ಜನರು ಈಗ ಬಂಧಿಗಳಾಗಿದ್ದಾರೆ. ಆದರೆ ಅವರು ಹಿಂತಿರುಗಿ ಬರುವರು. ಯಾಕೋಬಿನ ಮನೆಗಳ ಮೇಲೆ ನಾನು ಕನಿಕರ ತೋರುವೆನು. ನಗರವು ಈಗ ಕೇವಲ ಹಾಳುಬಿದ್ದ ಮನೆಗಳಿಂದ ಕೂಡಿದ ಒಂದು ದಿಬ್ಬವಾಗಿದೆ. ಆದರೆ ಆ ನಗರವು ಮತ್ತೆ ನಿರ್ಮಿಸಲ್ಪಡುವುದು. ಮುಂಚೆ ಇದ್ದ ಸ್ಥಳದಲ್ಲಿ ಅರಮನೆಯನ್ನು ಕಟ್ಟಲಾಗುವುದು.


ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.


“ನಾನು ನನ್ನ ಕುರಿಗಳನ್ನು ಬೇರೆ ದೇಶಗಳಿಗೆ ಕಳುಹಿಸಿದೆ. ಆದರೆ ಉಳಿದ ನನ್ನ ಕುರಿಗಳನ್ನು ಒಂದೆಡೆ ಸೇರಿಸುವೆನು. ಅವುಗಳನ್ನು ಅವುಗಳ ಹುಲ್ಲುಗಾವಲಿಗೆ ತರುವೆನು. ಅವುಗಳಿಗೆ ಅನೇಕ ಮಕ್ಕಳಾಗಿ ಅವುಗಳ ಸಂಖ್ಯೆ ಬೆಳೆಯುವುದು.


ಆ ಕಾಲದಲ್ಲಿ ಯೆಹೂದದ ಜನರು ಇಸ್ರೇಲ್ ಜನರನ್ನು ಕೂಡಿಕೊಳ್ಳುವರು. ಅವೆರಡೂ ಕೂಡಿ ಉತ್ತರದಿಕ್ಕಿನ ಪ್ರದೇಶದಿಂದ ಬರುವರು. ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶಕ್ಕೆ ಅವರು ಬರುವರು.”


ಮರುಭೂಮಿಯು ಹರ್ಷದಿಂದ ಅರಳಿದ ಹೂಗಳಿಂದ ತುಂಬಿಹೋಗುವುದು. ಸಂತೋಷದಿಂದ, ಕುಣಿದಾಡುವದೋ ಎಂಬಂತೆ ತೋರುವದು. ಲೆಬನೋನಿನ ಅರಣ್ಯದಂತೆಯೂ ಕರ್ಮೆಲ್ ಬೆಟ್ಟದಂತೆಯೂ ಶಾರೋನಿನ ಕಣಿವೆಯಂತೆಯೂ ಮನೋಹರವಾಗಿರುವದು. ಇವೆಲ್ಲಾ ನೆರವೇರುವದು ಯಾಕೆಂದರೆ ಎಲ್ಲಾ ಜನರು ಯೆಹೋವನ ಮಹಿಮೆಯನ್ನು ನಮ್ಮ ದೇವರ ಪ್ರಭಾವವನ್ನೂ ಕಾಣುವರು.


ದೇಶವು ಅಸ್ವಸ್ಥತೆಯಿಂದ ಸಾಯುತ್ತಿದೆ. ಲೆಬನೋನ್ ನಾಚಿಗೊಂಡು ಒಣಗುತ್ತಿದೆ. ಶಾರೋನ್ ತಗ್ಗು ಒಣಗಿ ನಿರ್ಜನವಾಗಿದೆ. ಬಾಷಾನ್ ಮತ್ತು ಕರ್ಮೆಲ್ ಹಿಂದೆ ಬಹು ಅಂದವಾದ ಸಸಿಗಳನ್ನು ಬೆಳೆಯಿಸುತ್ತಿದ್ದವು. ಈಗ ಅವುಗಳು ಅಲ್ಲಿ ಬೆಳೆಯುವದಿಲ್ಲ.


ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು; ಅವು ನನ್ನನ್ನು ಉದ್ರೇಕಗೊಳಿಸುತ್ತವೆ. ನಿನ್ನ ಕೂದಲು ಗಿಲ್ಯಾದ್ ಬೆಟ್ಟದ ಇಳಿಜಾರುಗಳಲ್ಲಿ ನೃತ್ಯವಾಡುತ್ತಿರುವ ಆಡುಮಂದೆಯಂತೆ ಬಳಕುತ್ತಿದೆ.


ಯೆಹೋಶುವನು, “ನಿಮ್ಮಲ್ಲಿ ಬಹಳ ಜನರಿದ್ದರೆ ಬೆಟ್ಟಪ್ರದೇಶಕ್ಕೆ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳಿರಿ. ಆ ಭೂಮಿಯು ಈಗ ಪೆರಿಜ್ಜೀಯರ ಮತ್ತು ರೆಫಾಯರ ಸ್ವತ್ತಾಗಿದೆ. ನಿಮಗೆ ಕೊಟ್ಟಿರುವ ಎಫ್ರಾಯೀಮ್ ಬೆಟ್ಟಪ್ರದೇಶವು ಚಿಕ್ಕದೆನಿಸಿದರೆ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳಿರಿ” ಎಂದನು.


ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಅವರು ಯಗ್ಜೇರ್ ಮತ್ತು ಗಿಲ್ಯಾದ್ ಪ್ರದೇಶಗಳನ್ನು ನೋಡಿದಾಗ ಅವು ಅವರ ಪಶುಗಳ ಮೇವಿಗೆ ಒಳ್ಳೆಯ ಸ್ಥಳವೆಂದು ತಿಳಿದುಕೊಂಡರು.


“ಇದು ಯಾಕೋಬ್ಯರಿಗೆ ಬಹು ಮುಖ್ಯವಾದ ಸಮಯ. ಇದು ಬಹಳ ಕಷ್ಟದ ಸಮಯ. ಎಂದೂ ಇಂಥ ಕಷ್ಟದ ಸಮಯ ಬರುವದಿಲ್ಲ. ಆದರೆ ಯಾಕೋಬ್ ಇದರಿಂದ ಪಾರಾಗುವುದು.”


“ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ಇಸ್ರೇಲೇ, ಅಂಜಬೇಡ. ಆ ದೂರಸ್ಥಳಗಳಿಂದ ನಾನು ನಿನ್ನನ್ನು ಖಂಡಿತವಾಗಿ ರಕ್ಷಿಸುತ್ತೇನೆ. ಬಂಧಿಯಾಗಿರುವ ದೇಶಗಳಿಂದ ನಾನು ನಿನ್ನ ಮಕ್ಕಳನ್ನು ರಕ್ಷಿಸುತ್ತೇನೆ. ಯಾಕೋಬು ಪುನಃ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇರುವುದು. ಯಾರೂ ಅದನ್ನು ಹೆದರಿಸಲಾರರು.”


“ನನ್ನ ಜನರು ತಪ್ಪಿಸಿಕೊಂಡ ಕುರಿಗಳಂತಿದ್ದಾರೆ. ಅವರ ಕುರುಬರು ಅವರನ್ನು ತಪ್ಪು ದಾರಿಗೆ ಎಳೆದಿದ್ದಾರೆ. ಅವರ ನಾಯಕರುಗಳು ಅವರನ್ನು ಬೆಟ್ಟಗಳಲ್ಲಿ ಅಲೆಯುವಂತೆ ಮಾಡಿದ್ದಾರೆ. ಅವರ ವಿಶ್ರಾಂತಿಸ್ಥಾನವನ್ನು ಅವರು ಮರೆತುಬಿಟ್ಟಿದ್ದಾರೆ.


“ಪೂರ್ವ ಭಾಗದಲ್ಲಿ, ಮೇರೆಯು ಹವ್ರಾನ್ ಮತ್ತು ದಮಸ್ಕದ ಮಧ್ಯದಲ್ಲಿರುವ ಹಚರ್ ಐನೋನ್ ಇಲ್ಲಿಂದ ಹೊರಟು ಜೋರ್ಡನ್ ಹೊಳೆಯ ತೀರದಲ್ಲಿ ಮುಂದುವರಿದು ಗಿಲ್ಯಾದಿಗೂ ಇಸ್ರೇಲ್ ರಾಜ್ಯಕ್ಕೂ ಮಧ್ಯದಲ್ಲಿ ಹರಿದು ಪೂರ್ವದ ಸಮುದ್ರದ ಕಡೆಗೆ ಹೋಗುತ್ತದೆ. ಅಲ್ಲಿಂದ ತಾಮಾರಿಗೆ ಸೇರುತ್ತದೆ. ಇದು ಪೂರ್ವ ಕಡೆಯ ಮೇರೆ.


ನಾನು ಅವರನ್ನು ಈಜಿಪ್ಟ್‌ನಿಂದ ಮತ್ತು ಅಶ್ಯೂರದಿಂದ ಹಿಂದಕ್ಕೆ ತರುವೆನು. ಅವರನ್ನು ಗಿಲ್ಯಾದಿಗೆ ಕರೆದುಕೊಂಡು ಬರುವೆನು. ಅಲ್ಲಿ ಅವರಿಗೆ ಸ್ಥಳ ಸಾಲದು. ಆದ್ದರಿಂದ ಅವರು ಪಕ್ಕದ ಲೆಬನೋನ್ ಪ್ರಾಂತ್ಯದಲ್ಲಿ ವಾಸಿಸುವಂತೆ ಮಾಡುವೆನು.”


ಸೆರೆಯಿಂದ ಮರಳಿಬಂದ ಸಂಸ್ಥಾನದವರ ವಿವರ, ಬಹಳ ವರ್ಷಗಳ ಹಿಂದೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಇವರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದಿದ್ದನು. ಇವರು ಜೆರುಸಲೇಮಿಗೆ ಹಿಂತಿರುಗಿ ಬಂದು ಎಲ್ಲರೂ ತಮ್ಮತಮ್ಮ ಸ್ವಂತ ಊರುಗಳಿಗೆ ಹೊರಟು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು