Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:20 - ಪರಿಶುದ್ದ ಬೈಬಲ್‌

20 ಇದು ಯೆಹೋವನ ನುಡಿ. “ಆ ಸಮಯದಲ್ಲಿ ಜನರು ಇಸ್ರೇಲಿನ ದೋಷವನ್ನು ಕಂಡುಹಿಡಿಯಲು ಪ್ರಯತ್ನಿಸುವರು. ಆದರೆ ಯಾವ ದೋಷಗಳೂ ಇರುವದಿಲ್ಲ. ಜನರು ಯೆಹೂದದ ಪಾಪಗಳನ್ನು ಹುಡುಕುವ ಪ್ರಯತ್ನ ಮಾಡುವರು. ಆದರೆ ಯಾವ ಪಾಪಗಳೂ ಸಿಕ್ಕುವದಿಲ್ಲ. ಏಕೆಂದರೆ ಇಸ್ರೇಲಿನ ಮತ್ತು ಯೆಹೂದದ ಜನರಲ್ಲಿ ಅಳಿದುಳಿದ ಕೆಲವು ಜನರನ್ನು ನಾನು ರಕ್ಷಿಸುತ್ತೇನೆ. ಅವರ ಪಾಪಗಳನ್ನೆಲ್ಲ ಕ್ಷಮಿಸಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಸಿಗದು. ಜುದೇಯದ ಪಾಪವನ್ನು ತಡಕಿದರೂ ಸಿಗದು. ಏಕೆಂದರೆ ನಾನು ಉಳಿಸಿದ ಜನಶೇಷವನ್ನು ಕ್ಷಮಿಸಿಬಿಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ತಡಕಿದರೂ ಸಿಕ್ಕುವದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷವಿುಸುವೆನಲ್ಲವೆ. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೋವ ದೇವರು ಹೇಳುತ್ತಾರೆ, “ಆ ದಿವಸಗಳಲ್ಲಿಯೂ, ಆ ಕಾಲದಲ್ಲಿಯೂ ಇಸ್ರಾಯೇಲಿನ ಅಕ್ರಮವನ್ನು ಹುಡುಕಿದರೂ, ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವುದಿಲ್ಲ. ಏಕೆಂದರೆ ನಾನು ಉಳಿಸುವವರನ್ನು ಮನ್ನಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:20
30 ತಿಳಿವುಗಳ ಹೋಲಿಕೆ  

ಯೆಹೋವನೇ, ನಮ್ಮನ್ನು ತಿರುಗಿ ಸಂತೈಸು. ನಮ್ಮ ಪಾಪಗಳನ್ನು ನಮ್ಮಿಂದ ನಿವಾರಿಸು. ನಮ್ಮೆಲ್ಲಾ ಪಾಪಗಳನ್ನು ಆಳವಾದ ಸಮುದ್ರದ ತಳದಲ್ಲಿ ಹಾಕು.


ತಮ್ಮ ನೆರೆಮನೆಯವರಿಗೂ ತಮ್ಮ ಬಂಧುಬಳಗದವರಿಗೂ ಯಾರೂ ಯೆಹೋವನ ಬಗ್ಗೆ ಹೇಳಿಕೊಡಬೇಕಾಗಿಲ್ಲ. ಯಾಕೆಂದರೆ ಅತಿ ಕನಿಷ್ಠರಿಂದ ಅತಿ ಪ್ರಮುಖರವರೆಗೆ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಕ್ಷಮಿಸುವೆನು. ನಾನು ಅವರ ಪಾಪಗಳನ್ನು ಮರೆತುಬಿಡುವೆನು.” ಇದು ಯೆಹೋವನ ನುಡಿ.


“ನಿಮ್ಮ ಪಾಪಗಳನ್ನೆಲ್ಲಾ ಅಳಿಸಿ ಹಾಕುವಾತನು ನಾನೇ. ನಾನು ಇದನ್ನು ನನಗೋಸ್ಕರವಾಗಿ ಮಾಡುತ್ತೇನೆ. ನಾನು ನಿಮ್ಮ ಪಾಪಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.


ಆದರೆ ಸರ್ವಶಕ್ತನಾದ ಯೆಹೋವನು ಸ್ವಲ್ಪ ಮಂದಿಯನ್ನಾದರೂ ಉಳಿಸಿ ಅಲ್ಲಿ ವಾಸಿಸುವಂತೆ ಮಾಡಿದ್ದಾನೆ. ನಾವು ಸೊದೋಮ್ ಗೊಮೋರ ಪಟ್ಟಣಗಳಂತೆ ಸಂಪೂರ್ಣವಾಗಿ ನಾಶವಾಗಲಿಲ್ಲ.


ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟೋ ದೂರವಿರುವಂತೆ ನಮ್ಮ ಪಾಪಗಳನ್ನು ನಮ್ಮಿಂದ ತೆಗೆದು ದೂರ ಮಾಡಿದ್ದಾನೆ.


ನಾವು ರಕ್ಷಣೆ ಹೊಂದಿಕೊಂಡದ್ದು ನಮ್ಮ ಪ್ರಭುವಿನ ತಾಳ್ಮೆಯಿಂದಲೇ ಎಂಬುದನ್ನು ನೆನಪು ಮಾಡಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ದೇವರಿಂದ ತನಗೆ ದೊರೆತ ಜ್ಞಾನದಿಂದ ನಿಮಗೆ ಪತ್ರ ಬರೆದಾಗ ಇದನ್ನೇ ತಿಳಿಸಿದನು.


ನಿನ್ನ ಪಾಪಗಳು ದೊಡ್ಡ ಮೋಡದಂತಿವೆ. ಆದರೆ ನಾನು ಅವುಗಳನ್ನು ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಗಾಳಿಯಲ್ಲಿ ಹಾರಿಹೋದ ಮೋಡದಂತೆ ಹಾರಿಸಿಬಿಟ್ಟಿದ್ದೇನೆ. ನಾನು ನಿನ್ನನ್ನು ರಕ್ಷಿಸಿದೆನು. ಆದ್ದರಿಂದ ನನ್ನ ಬಳಿಗೆ ಹಿಂತಿರುಗಿ ಬಾ.”


ಯಾಕೋಬನ ಜನರಲ್ಲಿ ಯಾವ ದೋಷವೂ ಇಲ್ಲ. ಇಸ್ರೇಲಿನ ಜನರಲ್ಲಿ ಯಾವ ಆಪತ್ತು ಕಾಣುತ್ತಿಲ್ಲ. ಯೆಹೋವನೇ ಅವರ ದೇವರು. ಆತನು ಅವರೊಂದಿಗಿದ್ದಾನೆ.


ನಿಮ್ಮ ದೇಹದ ಅಂಗಗಳನ್ನು ಪಾಪದ ಸೇವೆಗೆ ಒಪ್ಪಿಸಬೇಡಿ; ನಿಮ್ಮ ದೇಹಗಳನ್ನು ಪಾಪಕ್ಕೆ ಒಪ್ಪಿಸಿ ದುಷ್ಟತ್ವವನ್ನು ನಡೆಸುವ ಸಾಧನಗಳಾಗಬೇಡಿ. ಅದಕ್ಕೆ ಬದಲಾಗಿ, ನಿಮ್ಮನ್ನೇ ದೇವರಿಗೆ ಸಮರ್ಪಿಸಿಕೊಳ್ಳಿರಿ; ಸತ್ತು ಈಗ ಜೀವಂತವಾಗಿ ಎದ್ದುಬಂದಿರುವವರಂತೆ ಜೀವಿಸಿರಿ; ಒಳ್ಳೆಯ ಕಾರ್ಯಗಳನ್ನು ಮಾಡುವ ಸಾಧನಗಳನ್ನಾಗಿ ನಿಮ್ಮ ದೇಹದ ಅಂಗಗಳನ್ನು ದೇವರಿಗೆ ಸಮರ್ಪಿಸಿರಿ.


ಆಗ ನಾನು ದಾವೀದನ ವಂಶದಿಂದ ಒಳ್ಳೆಯದಾದ ‘ಮೊಳಕೆಯೊಂದನ್ನು’ ಚಿಗುರಿಸುವೆನು. ಆ ಮೊಳಕೆಯು ದೇಶಕ್ಕೆ ಒಳ್ಳೆಯದನ್ನೂ ನೀತಿಯುತವಾದುದನ್ನೂ ಮಾಡುವುದು.


ದೇವರ ಕೃಪೆಯ ಮೂಲಕ ಆರಿಸಲ್ಪಟ್ಟಿರುವ ಅವರು ದೇವರ ಮಕ್ಕಳಾದದ್ದು ತಮ್ಮ ಕ್ರಿಯೆಗಳಿಂದಲ್ಲ. ಇಲ್ಲದಿದ್ದರೆ, ದೇವರ ಕೃಪಾವರವು ಕೃಪಾವರವೆನಿಸಿಕೊಳ್ಳುತ್ತಿರಲಿಲ್ಲ.


ಆದಾಮನು ಒಮ್ಮೆ ಪಾಪಮಾಡಿದ ಮೇಲೆ ಅವನಿಗೆ ಅಪರಾಧಿ ಎಂದು ತೀರ್ಪು ನೀಡಲಾಯಿತು. ಆದರೆ ದೇವರ ಉಚಿತವಾದ ಕೊಡುಗೆ ಅದಕ್ಕೆ ತದ್ವಿರುದ್ಧವಾಗಿದೆ. ಅನೇಕ ಪಾಪಗಳ ದೆಸೆಯಿಂದ ದೇವರ ಉಚಿತವಾದ ಕೊಡುಗೆ ಬಂದಿತು. ಆ ಉಚಿತ ಕೊಡುಗೆ ಜನರನ್ನು ನೀತಿವಂತರನ್ನಾಗಿ ಮಾಡುತ್ತದೆ.


ದೇವರು ತನ್ನ ವಿಶೇಷ ಸೇವಕನನ್ನು (ಯೇಸುವನ್ನು) ಮೊಟ್ಟಮೊದಲು ನಿಮ್ಮ ಬಳಿಗೆ ಕಳುಹಿಸಿದನು. ನಿಮ್ಮನ್ನು ಆಶೀರ್ವದಿಸುವುದಕ್ಕಾಗಿ ದೇವರು ಯೇಸುವನ್ನು ಕಳುಹಿಸಿದನು. ಆತನು ನಿಮ್ಮನ್ನು ನಿಮ್ಮ ಕೆಟ್ಟಕಾರ್ಯಗಳಿಂದ ದೂರಮಾಡಿ ಆಶೀರ್ವದಿಸುತ್ತಾನೆ.”


ಆದ್ದರಿಂದ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿ. ಆಗ ಆತನು ನಿಮ್ಮ ಪಾಪಗಳನ್ನು ಕ್ಷಮಿಸುವನು.


ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ ಇಸ್ರೇಲಿನ ಮತ್ತು ಯೆಹೂದದ ಜನರು ಒಟ್ಟಿಗೆ ಸೇರುವರು. ಅವರು ಒಟ್ಟುಗೂಡಿ ಬಹಳವಾಗಿ ಗೋಳಾಡುವರು; ತಮ್ಮ ದೇವರಾದ ಯೆಹೋವನನ್ನು ಹುಡುಕಲು ಹೋಗುವರು.


ಈಜಿಪ್ಟಿಗೆ ವಲಸೆ ಹೋದ ಕೆಲವೇ ಯೆಹೂದದ ಜನರು ಅಳಿದುಳಿದವರಾಗಿದ್ದಾರೆ. ಒಬ್ಬನೂ ಕೂಡ ನನ್ನ ಶಿಕ್ಷೆಯಿಂದ ತಪ್ಪಿಸಿಕೊಳ್ಳಲಾರನು. ಅವರಲ್ಲಿ ಒಬ್ಬನೂ ಜೀವಂತವಾಗಿ ಯೆಹೂದಕ್ಕೆ ಹಿಂತಿರುಗಿ ಬರಲಾರನು. ಆ ಜನರು ಯೆಹೂದಕ್ಕೆ ಹಿಂತಿರುಗಿ ಬಂದು ಅಲ್ಲಿ ವಾಸಮಾಡಬಯಸುವರು, ಆದರೆ ತಪ್ಪಿಸಿಕೊಂಡ ಸ್ವಲ್ಪ ಜನರನ್ನು ಬಿಟ್ಟು ಮಿಕ್ಕವರಾರೂ ಯೆಹೂದಕ್ಕೆ ಹಿಂತಿರುಗುವದಿಲ್ಲ.”


ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ. ನೀನು ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದಾಗ ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ. ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ.


ಅಲ್ಲಿ ವಾಸಿಸುವವರಲ್ಲಿ ಯಾರೂ “ನನಗೆ ಸೌಖ್ಯವಿಲ್ಲ” ಎಂದು ಹೇಳುವುದಿಲ್ಲ. ಅಲ್ಲಿ ವಾಸಿಸುವವರೆಲ್ಲಾ ತಮ್ಮ ಪಾಪಗಳಿಗೆ ಕ್ಷಮೆಹೊಂದಿದವರಾಗಿದ್ದಾರೆ.


ಅವರು ನನ್ನ ವಿರುದ್ಧ ಪಾಪಗಳನ್ನು ಮಾಡಿದರೂ ಅವರ ಪಾಪಗಳನ್ನು ತೊಳೆದುಬಿಡುವೆನು. ಅವರು ನನ್ನ ವಿರುದ್ಧ ಕಾದಾಡಿದರೂ ಅವರನ್ನು ಕ್ಷಮಿಸುವೆನು.


ದೇವರು ಅವನ ಹಿಂದಿನ ಪಾಪಗಳನ್ನು ನೆನಪಿಗೆ ತರುವದಿಲ್ಲ. ಅವನು ತಾನು ಮಾಡಿದ ಒಳ್ಳೆಯ ಕಾರ್ಯಗಳ ನಿಮಿತ್ತ ಬದುಕುವನು.”


ನೋಡು, ನಾನು ಯೆಹೋಶುವನ ಮುಂದೆ ಒಂದು ವಿಶೇಷ ಕಲ್ಲನ್ನಿಡುವೆನು. ಆ ಕಲ್ಲಿನಲ್ಲಿ ಏಳು ಬದಿಗಳಿವೆ. ನಾನು ಆ ವಿಶೇಷ ಕಲ್ಲಿನ ಮೇಲೆ ವಿಶೇಷ ಸಂದೇಶವನ್ನು ಕೆತ್ತುವೆನು. ನಾನು ಆ ದೇಶದ ಪಾಪವನ್ನು ಒಂದು ದಿವಸದಲ್ಲಿ ತೆಗೆದುಹಾಕುವೆನೆಂದು ಅದು ತೋರಿಸುವುದು.”


ನಿನ್ನ ರೌದ್ರವನ್ನು ತೊರೆದುಬಿಡು. ಉಗ್ರ ಕೋಪದಿಂದಿರಬೇಡ.


ಯಾಕೋಬನ ಮನೆತನದಲ್ಲಿ ಅಳಿದುಳಿದವರು ಪರಾಕ್ರಮಿಯಾದ ದೇವರನ್ನು ಮತ್ತೆ ಅನುಸರಿಸತೊಡಗುವರು.


ಚೀಯೋನೇ, ನಿನಗಾಗಬೇಕಿದ್ದ ದಂಡನೆಯು ಸಂಪೂರ್ಣವಾಯಿತು. ಮತ್ತೆ ನೀನು ಸೆರೆವಾಸಕ್ಕೆ ಹೋಗುವುದಿಲ್ಲ. ಆದರೆ ಎದೋಮಿನ ಜನರೇ, ನಿಮ್ಮ ಪಾಪಗಳಿಗಾಗಿ ಯೆಹೋವನು ನಿಮ್ಮನ್ನು ದಂಡಿಸುವನು. ಆತನು ನಿಮ್ಮ ಪಾಪಗಳನ್ನು ಬಹಿರಂಗಪಡಿಸುವನು.


ನನ್ನ ಪಟ್ಟಣದೊಳಗೆ ಬರೇ ದೀನದರಿದ್ರರೇ ವಾಸಮಾಡುವರು. ಅವರು ಯೆಹೋವನ ಹೆಸರಿನಲ್ಲಿ ಭರವಸೆ ಇಡುವವರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು