ಯೆರೆಮೀಯ 50:23 - ಪರಿಶುದ್ದ ಬೈಬಲ್23 ಬಾಬಿಲೋನು ಇಡೀ ಭೂಮಂಡಲಕ್ಕೆ ‘ಸುತ್ತಿಗೆ’ಯಂತಿದೆ. ಆದರೆ ಈಗ ಆ ‘ಸುತ್ತಿಗೆ’ಯು ಮುರಿದು ಚೂರುಚೂರಾಗಿದೆ. ಬಾಬಿಲೋನ್ ನಿಜವಾಗಿಯೂ ಎಲ್ಲಕ್ಕಿಂತಲೂ ಹೆಚ್ಚು ಹಾಳಾದ ಜನಾಂಗವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟಿಗೆಯು ಮುರಿದು ತುಂಡುತುಂಡಾಯಿತು! ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಲೋಕವನ್ನೆಲ್ಲ ಬಡಿದ ಕೊಡಲಿಯಂಥ ಬಾಬಿಲೋನ್ ಈಗ ಮುರಿದು ಚೂರುಚೂರಾಗಿದೆ! ಆ ರಾಜ್ಯವು ರಾಷ್ಟ್ರಗಳ ನಡುವೆ ಹಾಳಾಗಿ ಬಿದ್ದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟಿಗೆಯು ಮುರಿದು ತುಂಡುತುಂಡಾಯಿತು! ಬಾಬೆಲ್‍ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಇಗೋ, ಲೋಕವನ್ನೆಲ್ಲಾ ಹೊಡೆದ ಸುತ್ತಿಗೆಯು ಮುರಿದು ತುಂಡುತುಂಡಾಯಿತು! ಹೇಗೆ ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ! ಅಧ್ಯಾಯವನ್ನು ನೋಡಿ |
ಅವರು ನಿನ್ನ ಬಗ್ಗೆ ಈ ಶೋಕಗೀತೆಯನ್ನು ಹಾಡುವರು: “‘ತೂರ್, ನೀನು ಹೆಸರುವಾಸಿಯಾದ ನಗರವಾಗಿದ್ದೆ. ನಿನ್ನಲ್ಲಿ ವಾಸಮಾಡಲು ಜನರು ಸಮುದ್ರದಾಚೆಯಿಂದ ಬಂದರು. ನೀನು ಪ್ರಸಿದ್ಧಳಾಗಿದ್ದೆ, ಆದರೆ ನೀನೀಗ ಹೋಗಿಬಿಟ್ಟೆ. ದ್ವೀಪವಾಗಿರುವ ನೀನು ಮತ್ತು ನಿನ್ನಲ್ಲಿ ವಾಸವಾಗಿದ್ದ ಜನರು ಸಮುದ್ರದಿಂದ ದೂರದಲ್ಲಿರುವುದರಿಂದ ಬಲಿಷ್ಠರಾಗಿದ್ದೀರಿ. ಭೂಮಿಯ ಮೇಲೆ ವಾಸವಾಗಿದ್ದ ಎಲ್ಲಾ ಜನರನ್ನು ನೀವು ಭಯಗೊಳಿಸಿದಿರಿ.