ಯೆರೆಮೀಯ 50:24 - ಪರಿಶುದ್ದ ಬೈಬಲ್24 ಬಾಬಿಲೋನೇ, ನಾನು ನಿನಗಾಗಿ ಒಂದು ಬಲೆಯನ್ನು ಒಡ್ಡಿದೆ. ನೀನು ತಿಳಿಯದೆ ಸಿಕ್ಕಿಹಾಕಿಕೊಂಡೆ. ನೀನು ಯೆಹೋವನ ವಿರುದ್ಧ ಹೋರಾಡಿದೆ. ಆದ್ದರಿಂದ ನಿನ್ನನ್ನು ಹುಡುಕಿ ವಶಪಡಿಸಿಕೊಳ್ಳಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಬಾಬೆಲೇ, ನಾನು ನಿನಗೆ ಉರುಲೊಡ್ಡಿದೆನು; ನೀನು ತಿಳಿಯದೆ ಸಿಕ್ಕಿಕೊಂಡಿ; ನೀನು ಯೆಹೋವನೊಂದಿಗೆ ಹೋರಾಡಿದ್ದರಿಂದ ಬೋನಿಗೆ ಬಿದ್ದು ವಶವಾದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಬಾಬಿಲೋನೇ, ನಿನಗೆ ನಾನು ಉರುಲೊಡ್ಡಿದ್ದೆ. ನೀನು ತಿಳಿಯದೆ ಅದರಲ್ಲಿ ಸಿಕ್ಕಿಕೊಂಡೆ. ನೀನು ಸರ್ವೇಶ್ವರನೊಂದಿಗೆ ಹೋರಾಡಿದ್ದರಿಂದ ಬೋನಿನ ವಶವಾದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಬಾಬೆಲೇ, ನಾನು ನಿನಗೆ ಉರುಲೊಡ್ಡಿದೆನು; ನೀನು ತಿಳಿಯದೆ ಸಿಕ್ಕಿಕೊಂಡಿ; ನೀನು ಯೆಹೋವನೊಂದಿಗೆ ಹೋರಾಡಿದ್ದರಿಂದ ಬೋನಿಗೆ ಬಿದ್ದು ವಶವಾದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನಾನು ಬೋನನ್ನು ಇಟ್ಟೆನು; ಹೌದು, ಬಾಬಿಲೋನೇ ನೀನು ಸಿಕ್ಕಿಕೊಂಡೆ. ಆದರೆ ನಿನಗೆ ತಿಳಿಯದೆ ಇತ್ತು. ನೀನು ಯೆಹೋವ ದೇವರಿಗೆ ವಿರೋಧವಾಗಿ ಜಗಳವಾಡಿದ್ದರಿಂದಲೇ ಸಿಕ್ಕಿಕೊಂಡೆ ಮತ್ತು ವಶವಾದೆ. ಅಧ್ಯಾಯವನ್ನು ನೋಡಿ |
“ಈ ಜನರನ್ನು ನೋಡು. ತಮ್ಮನ್ನು ಸೃಷ್ಟಿದಾತನೊಂದಿಗೆ ವಾದಿಸುತ್ತಿದ್ದಾರೆ. ನನ್ನೊಂದಿಗೆ ವಾದಿಸುವದನ್ನು ನೋಡಿರಿ! ಅವರು ಒಡೆಯಲ್ಪಟ್ಟ ಮಣ್ಣಿನ ಮಡಿಕೆಯ ತುಂಡುಗಳಂತಿದ್ದಾರೆ. ಒಬ್ಬನು ಮೃದುವಾದ ಜೇಡಿಮಣ್ಣಿನಿಂದ ಮಡಿಕೆಯನ್ನು ಮಾಡುತ್ತಾನೆ. ಆ ಮಡಿಕೆಯು ಕುಂಬಾರನಿಗೆ, ‘ನೀನು ಮಾಡುತ್ತಿರುವುದೇನು?’ ಎಂದು ಪ್ರಶ್ನಿಸುವದಿಲ್ಲ. ತಯಾರಿಸಲ್ಪಟ್ಟ ವಸ್ತುಗಳಿಗೆ ತಯಾರಿಸಿದವನನ್ನು ಪ್ರಶ್ನಿಸುವ ಅಧಿಕಾರವಿಲ್ಲ. ಜನರು ಈ ಜೇಡಿಮಣ್ಣಿನಂತೆ ಇದ್ದಾರೆ.