ಯೆರೆಮೀಯ 50:35 - ಪರಿಶುದ್ದ ಬೈಬಲ್35 ಯೆಹೋವನು ಹೀಗೆನ್ನುತ್ತಾನೆ: “ಖಡ್ಗವೇ, ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ಜನರನ್ನು ನಾಶಮಾಡು! ಖಡ್ಗವೇ, ಬಾಬಿಲೋನಿನ ಸಾಮಾನ್ಯ ಜನರನ್ನು, ಅಧಿಕಾರಿಗಳನ್ನು ಮತ್ತು ಪಂಡಿತರನ್ನು ಕೊಂದುಹಾಕು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ಕಸ್ದೀಯರ ಮೇಲೆ ಬೀಳಲಿ! ಬಾಬೆಲಿನ ಸಾಮಾನ್ಯ ಜನರು, ಪ್ರಧಾನರು, ಪಂಡಿತರು, ಇವರನ್ನೆಲ್ಲಾ ಹತಿಸಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಸರ್ವೇಶ್ವರ ಇಂತೆನ್ನುತ್ತಾರೆ: ಬಾಬಿಲೋನಿಯರ ಮೇಲೆ ಬೀಳಲಿದೆ ಖಡ್ಗ ಅದರ ಜನಸಾಮಾನ್ಯರನ್ನು, ಪದಾಧಿಕಾರಿಗಳನ್ನು, ಪಂಡಿತರನ್ನು ಇವರೆಲ್ಲರನ್ನು ಹತಿಸಲಿದೆ ಆ ಖಡ್ಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಯೆಹೋವನು ಇಂತೆನ್ನುತ್ತಾನೆ - ಖಡ್ಗವು ಕಸ್ದೀಯರ ಮೇಲೆ ಬೀಳಲಿ! ಬಾಬೆಲಿನ ಸಾಮಾನ್ಯಜನರು, ಪ್ರಧಾನರು, ಪಂಡಿತರು, ಇವರನ್ನೆಲ್ಲಾ ಹತಿಸಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 “ಬಾಬಿಲೋನಿಯರ ಮೇಲೆ ಬೀಳಲಿದೆ ಖಡ್ಗ,” ಎಂದು ಯೆಹೋವ ದೇವರು ಹೇಳುತ್ತಾರೆ. “ಅದರ ಜನಸಾಮಾನ್ಯರನ್ನು, ಪ್ರಧಾನರನ್ನು, ಪಂಡಿತರನ್ನು ಇವರೆಲ್ಲರನ್ನು ಹತಿಸಲಿದೆ ಖಡ್ಗ, ಅಧ್ಯಾಯವನ್ನು ನೋಡಿ |