Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:4 - ಪರಿಶುದ್ದ ಬೈಬಲ್‌

4 ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ ಇಸ್ರೇಲಿನ ಮತ್ತು ಯೆಹೂದದ ಜನರು ಒಟ್ಟಿಗೆ ಸೇರುವರು. ಅವರು ಒಟ್ಟುಗೂಡಿ ಬಹಳವಾಗಿ ಗೋಳಾಡುವರು; ತಮ್ಮ ದೇವರಾದ ಯೆಹೋವನನ್ನು ಹುಡುಕಲು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ಹೀಗೆನ್ನುತ್ತಾರೆ: “ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಯೇಲರೂ ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ಬರುವರು. ದಾರಿಯುದ್ದಕ್ಕೂ ಅಳುತ್ತಾ ಬಂದು ತಮ್ಮ ದೇವರಾದ ಸರ್ವೇಶ್ವರನನ್ನು ಮರೆಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಇಂತೆನ್ನುತ್ತಾನೆ - ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲ್ಯರೂ ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು ತಮ್ಮ ದೇವರಾದ ಯೆಹೋವನನ್ನು ಮರೆಹೊಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಆ ದಿವಸಗಳಲ್ಲಿಯೂ ಆ ಕಾಲದಲ್ಲಿಯೂ ಇಸ್ರಾಯೇಲರು ಬರುವರು; ಅವರೂ, ಯೆಹೂದ್ಯರೂ ಒಟ್ಟಾಗಿ ಕೂಡಿಕೊಳ್ಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಯೆಹೋವ ದೇವರನ್ನು ಹುಡುಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:4
32 ತಿಳಿವುಗಳ ಹೋಲಿಕೆ  

ಹೀಗೆ ಇದ್ದ ಬಳಿಕ ಇಸ್ರೇಲರು ಹಿಂತಿರುಗಿ ಬರುವರು. ಆಗ ಅವರು ತಮ್ಮ ದೇವರಾದ ಯೆಹೋವನನ್ನೂ ಅವರ ಅರಸನಾದ ದಾವೀದನನ್ನೂ ಹುಡುಕುವರು. ಕೊನೆಯ ದಿವಸಗಳಲ್ಲಿ ತಮ್ಮ ದೇವರಾದ ಯೆಹೋವನನ್ನೂ ಆತನ ಒಳ್ಳೆಯತನವನ್ನೂ ಗೌರವಿಸಲು ಬರುವರು.


“ಆಗ ಇಸ್ರೇಲಿನ ಪ್ರಜೆಗಳು ಮತ್ತು ಯೆಹೂದ ಪ್ರಾಂತ್ಯದ ಪ್ರಜೆಗಳು ಒಂದಾಗಿ ಸೇರಲ್ಪಡುವರು. ತಮಗೆ ಒಬ್ಬ ಅರಸನನ್ನು ಅವರು ಆರಿಸಿಕೊಳ್ಳುವರು. ಅವರ ಜನಾಂಗಕ್ಕೆ ಆ ದೇಶವು ಸಾಲದೆ ಹೋಗುವದು. ಇಜ್ರೇಲನ ದಿನವು ನಿಜವಾಗಿಯೂ ಮಹತ್ವವುಳ್ಳದ್ದಾಗಿರುವದು.”


ಯೆಹೋವನು ಹೀಗೆಂದನು: “ನಾನು ಇಸ್ರೇಲರೊಂದಿಗೂ ಮತ್ತು ಯೆಹೂದ್ಯರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ಸಮಯ ಬರುತ್ತಿದೆ.


ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.


ಇದು ಯೆಹೋವನ ಸಂದೇಶ: “ನಿಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಬನ್ನಿರಿ, ನೀವು ದುಷ್ಟತ್ವವನ್ನು ನಡಿಸಿರುವದರಿಂದ ದುಃಖಿಸಿರಿ, ಅಳಿರಿ, ಉಪವಾಸ ಮಾಡಿರಿ.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಈಗ ನಾನು ಯಾಕೋಬನ ವಂಶದವರನ್ನು ಸೆರೆಯಿಂದ ಬಿಡಿಸಿ ಹಿಂದಕ್ಕೆ ತರುವೆನು. ಇಸ್ರೇಲಿನ ಜನಾಂಗದವರ ಮೇಲೆಲ್ಲಾ ನನ್ನ ದಯೆ ಇರುವದು. ನನ್ನ ಪವಿತ್ರನಾಮದ ಸಲುವಾಗಿ ಅವರನ್ನು ಉದ್ಧರಿಸುವೆನು.


ಆಗ ನಾನು ದಾವೀದನ ವಂಶದಿಂದ ಒಳ್ಳೆಯದಾದ ‘ಮೊಳಕೆಯೊಂದನ್ನು’ ಚಿಗುರಿಸುವೆನು. ಆ ಮೊಳಕೆಯು ದೇಶಕ್ಕೆ ಒಳ್ಳೆಯದನ್ನೂ ನೀತಿಯುತವಾದುದನ್ನೂ ಮಾಡುವುದು.


ಜನರನ್ನು ಶಿಕ್ಷಿಸಲು ನಾನೊಂದು ಸಮಯವನ್ನು ನಿಗದಿ ಮಾಡಿರುತ್ತೇನೆ. ಈಗ ನನ್ನ ಜನರನ್ನು ರಕ್ಷಿಸಿ ಕಾಪಾಡುವ ಸಮಯ ಬಂದಿದೆ.


ಆದ್ದರಿಂದ ಸಮಯವು ದಾಟುವ ಮೊದಲು ನೀವು ಯೆಹೋವನಿಗಾಗಿ ಹುಡುಕಿರಿ. ಆತನು ಹತ್ತಿರವಿರುವಾಗಲೇ ಕರೆಯಿರಿ.


ನಾನು ಗುಪ್ತವಾಗಿ ಮಾತನಾಡದೆ ಬಹಿರಂಗವಾಗಿಯೇ ಮಾತನಾಡಿದ್ದೇನೆ. ಈ ಭೂಮಿಯ ಕತ್ತಲೆಯ ಸ್ಥಳದಲ್ಲಿ ನನ್ನ ಮಾತುಗಳನ್ನು ಅಡಗಿಸಿಡಲಿಲ್ಲ. ನನ್ನನ್ನು ಕಂಡುಹಿಡಿಯಲು ಗುಪ್ತಸ್ಥಳದಲ್ಲಿ ಹುಡುಕಿರಿ ಎಂದು ನಾನು ಯಾಕೋಬನ ಜನರಿಗೆ ಹೇಳಲಿಲ್ಲ. ನಾನೇ ಯೆಹೋವನು. ನಾನು ಸತ್ಯವನ್ನೇ ಆಡುವೆನು.


ಮುಂದಿನ ದಿವಸಗಳಲ್ಲಿ ಯೆಹೋವನು ಯಾಕೋಬನ ಮೇಲೆ ಮತ್ತೆ ಪ್ರೀತಿತೋರುವನು. ಯೆಹೋವನು ಮತ್ತೆ ಇಸ್ರೇಲರನ್ನು ಆರಿಸುವನು. ಆ ಸಮಯದಲ್ಲಿ ಅವರ ದೇಶವನ್ನು ಅವರಿಗೆ ಹಿಂತಿರುಗಿಸುವನು. ಆಗ ಯೆಹೂದ್ಯರಲ್ಲದವರು ಯೆಹೂದ್ಯರೊಂದಿಗೆ ಸೇರಿಕೊಳ್ಳುವರು. ಅವರೆಲ್ಲರೂ ಒಂದೇ ವಂಶದವರಾಗುವರು. ಅದು ಯಾಕೋಬನ ವಂಶ.


ಯೆಹೋವನನ್ನೂ ಆತನ ಬಲವನ್ನೂ ಆಶ್ರಯಿಸಿಕೊಳ್ಳಿರಿ; ಸಹಾಯಕ್ಕಾಗಿ ಆತನ ಬಳಿಗೇ ಹೋಗಿರಿ.


ದುಃಖಪಡಿರಿ, ಗೋಳಾಡಿರಿ, ಕಣ್ಣೀರಿಡಿರಿ! ನಗುವುದನ್ನು ಬಿಟ್ಟು ಗೋಳಾಡಿರಿ. ಸಂತೋಷಿಸುವುದನ್ನು ಬಿಟ್ಟು ವ್ಯಸನಪಡಿರಿ.


ಇಷ್ಮಾಯೇಲನು ಈ ಎಂಭತ್ತು ಜನರನ್ನು ಕಾಣುವದಕ್ಕಾಗಿ ಮಿಚ್ಫ ಪಟ್ಟಣದ ಹೊರಗಡೆ ಹೋದನು. ಅವರನ್ನು ಕಾಣುವದಕ್ಕೆ ಹೋಗುವಾಗ ಅವನು ಅಳುತ್ತಿದ್ದನು. ಇಷ್ಮಾಯೇಲನು ಆ ಎಂಭತ್ತು ಜನರನ್ನು ಎದುರುಗೊಂಡು, “ಅಹೀಕಾಮನ ಮಗನಾದ ಗೆದಲ್ಯನನ್ನು ಭೇಟಿ ಮಾಡುವದಕ್ಕೆ ನನ್ನೊಂದಿಗೆ ಬನ್ನಿ” ಎಂದು ಕರೆದನು.


ನಿನ್ನ ಅಕ್ಕತಂಗಿಯಂದಿರನ್ನು ನಾನು ನಿನ್ನ ಬಳಿಗೆ ತಂದು ಅವರನ್ನು ನಿನ್ನ ಮಕ್ಕಳನ್ನಾಗಿ ಮಾಡುವೆನು. ಅದು ನಮ್ಮ ಒಡಂಬಡಿಕೆಯಲ್ಲಿಲ್ಲದಿದ್ದರೂ ನಾನು ಅದನ್ನು ನಿನಗಾಗಿ ಮಾಡುವೆನು. ಆಗ ನೀನು ಮಾಡಿದ ಭಯಂಕರ ಸಂಗತಿಗಳನ್ನು ಜ್ಞಾಪಕಕ್ಕೆ ತಂದು ನೀನು ನಾಚಿಕೊಳ್ಳುವಿ.


“ಬನ್ನಿರಿ, ನಾವು ಯೆಹೋವನ ಬಳಿಗೆ ಹಿಂತಿರುಗೋಣ. ಆತನು ನಮಗೆ ಗಾಯ ಮಾಡಿದರೂ ಗುಣಮಾಡುವನು. ನಮ್ಮ ಗಾಯಗಳಿಗೆ ಬಟ್ಟೆಯನ್ನು ಸುತ್ತುವನು.


ನನ್ನ ಹೆಸರಿನಿಂದ ಕರೆಯಲ್ಪಡುವ ನನ್ನ ಜನರು ದೀನತೆಯಿಂದ ಪ್ರಾರ್ಥಿಸಿ, ತಮ್ಮ ಪಾಪಗಳನ್ನು ಬಿಟ್ಟು ನನ್ನ ಕಡೆಗೆ ತಿರುಗಿದರೆ ನಾನು ಪರಲೋಕದಿಂದ ಅವರನ್ನು ಆಲೈಸಿ, ಅವರ ಪಾಪಗಳನ್ನು ಮನ್ನಿಸಿ ಅವರ ದೇಶವನ್ನು ಗುಣಪಡಿಸುವೆನು.


ನಾನು ಸಿಂಹದಂತೆ ಗರ್ಜಿಸುವೆನು. ನಾನು ಗರ್ಜಿಸುವಾಗ ನನ್ನ ಮಕ್ಕಳು ಬರುವರು ಮತ್ತು ನನ್ನನ್ನು ಹಿಂಬಾಲಿಸುವರು. ಪಶ್ಚಿಮದಿಂದ ನನ್ನ ಮಕ್ಕಳು ಹೆದರಿ ನಡುಗುತ್ತಾ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು