ಯೆರೆಮೀಯ 50:45 - ಪರಿಶುದ್ದ ಬೈಬಲ್45 ಯೆಹೋವನು ಬಾಬಿಲೋನಿನ ವಿರುದ್ಧ ಮಾಡಬೇಕೆಂದಿರುವುದನ್ನು ಕೇಳಿರಿ. “ಬಾಬಿಲೋನಿನ ಜನರ ವಿರುದ್ಧ ಯೆಹೋವನು ನಿಶ್ಚಯಿಸಿರುವುದನ್ನು ಕೇಳಿರಿ. ಶತ್ರುವು ಬಾಬಿಲೋನಿನ ಕುರಿಮರಿಗಳನ್ನು (ಜನರನ್ನು) ಕೊಂಡೊಯ್ಯುವನು. ಬಾಬಿಲೋನಿನ ಹುಲ್ಲುಗಾವಲುಗಳು ಸಂಭವಿಸಿದ ನಾಶನಕ್ಕೆ ಬೆದರುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ, ಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶಕ್ಕೆ ಬೆದರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಹೀಗಿರಲು, ಸರ್ವೇಶ್ವರನು ಬಾಬಿಲೋನಿಯರ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನು, ಅದರ ಕಸ್ದೀಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನು ಆಲಿಸಿರಿ: ಕಾಡುಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವುವು. ಅವುಗಳ ನಾಶಕ್ಕಾಗಿ ಹುಲ್ಲುಗಾವಲು ನಿಶ್ಚಯವಾಗಿ ಕಳವಳಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; [ಮೃಗಗಳು] ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕೆ ಬೆದರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಆದ್ದರಿಂದ ಯೆಹೋವ ದೇವರು ಬಾಬಿಲೋನಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, ಅವರು ಬಾಬಿಲೋನಿಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ; ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ಖಂಡಿತವಾಗಿ, ಅವುಗಳ ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು. ಅಧ್ಯಾಯವನ್ನು ನೋಡಿ |