ಯೆರೆಮೀಯ 50:46 - ಪರಿಶುದ್ದ ಬೈಬಲ್46 ಬಾಬಿಲೋನ್ ಪತನವಾಗುವುದು. ಆ ಪತನವು ಭೂಮಂಡಲವನ್ನು ಅಲುಗಾಡಿಸುವುದು. ಎಲ್ಲಾ ಜನಾಂಗಗಳ ಜನರು ಬಾಬಿಲೋನಿನ ವಿನಾಶದ ವಿಷಯವನ್ನು ಕೇಳುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಬಾಬೆಲು ಶತ್ರುವಶವಾಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುತ್ತದೆ, ಅದರ ಮೊರೆಯು ಜನಾಂಗಗಳಲ್ಲಿ ಕೇಳಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಬಾಬಿಲೋನ್ ಶತ್ರುವಶ ಆಯಿತೆಂಬ ಕೋಲಾಹಲಕ್ಕೆ ಭೂಮಿ ಕಂಪಿಸುವುದು. ಅದರ ಮೊರೆ ರಾಷ್ಟ್ರಗಳಿಗೆ ಕೇಳಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಬಾಬೆಲು ಶತ್ರುವಶವಾಯಿತೆಂಬ ಕೋಲಾಹಲಕ್ಕೆ ಭೂವಿುಯು ಕಂಪಿಸುತ್ತದೆ, ಅದರ ಮೊರೆಯು ಜನಾಂಗಗಳಲ್ಲಿ ಕೇಳಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಬಾಬಿಲೋನು ಶತ್ರುವಶ ಆಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುವುದು; ಅದರ ಕೂಗು ಜನಾಂಗಗಳೊಳಗೆ ಕೇಳಬಂತು. ಅಧ್ಯಾಯವನ್ನು ನೋಡಿ |
ನಾನು ಆ ಮರವನ್ನು ಬೀಳಿಸಿದೆನು. ಬೀಳುವ ಅದರ ಶಬ್ದವನ್ನು ಕೇಳಿ ರಾಜ್ಯಗಳೆಲ್ಲಾ ಭಯದಿಂದ ನಡುಗಿದವು. ನಾನು ಆ ಮರವನ್ನು ಪಾತಾಳಕ್ಕೆ ಕಳುಹಿಸಿದೆನು. ಅದು ಹೋಗಿ ಅದಕ್ಕಿಂತ ಮೊದಲೇ ಆ ಆಳವಾದ ಗುಂಡಿಗೆ ಹೋಗಿರುವವರೊಂದಿಗೆ ಸೇರಿಕೊಂಡಿತು. ಗತಿಸಿದ ದಿವಸಗಳಲ್ಲಿ ಏದೆನಿನಲ್ಲಿದ್ದ ಎಲ್ಲಾ ಮರಗಳು, ಲೆಬನೋನಿನ ಉತ್ಕೃಷ್ಟ ಮರಗಳು ಆ ನೀರನ್ನು ಕುಡಿದಿದ್ದವು. ಅವೆಲ್ಲವೂ ಪಾತಾಳದಲ್ಲಿ ಸಂತೈಸಿಕೊಂಡವು.
“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”