ಯೆರೆಮೀಯ 50:5 - ಪರಿಶುದ್ದ ಬೈಬಲ್5 ಅವರು ಚೀಯೋನಿಗೆ ಹೋಗುವ ಮಾರ್ಗವನ್ನು ವಿಚಾರಿಸುವರು. ಆ ದಿಕ್ಕಿನಲ್ಲಿ ಹೋಗಲು ಪ್ರಾರಂಭಿಸುವರು. ‘ಬನ್ನಿ, ನಾವೆಲ್ಲರೂ ಯೆಹೋವನ ಆಶ್ರಯಪಡೆಯೋಣ. ಆತನೊಂದಿಗೆ ಶಾಶ್ವತವಾದ ಮತ್ತು ನಾವೆಂದೂ ಮರೆಯಲಾಗದ ಒಡಂಬಡಿಕೆಯನ್ನು ಮಾಡಿಕೊಳ್ಳೋಣ’ ಎಂದು ಅವರು ಹೇಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ, ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸಿಯೋನಿಗೆ ಅಭಿಮುಖರಾಗಿ, ಮಾರ್ಗವನ್ನು ವಿಚಾರಿಸುತ್ತಾ, ‘ಬನ್ನಿ, ಸರ್ವೇಶ್ವರನನ್ನು ಆಶ್ರಯಿಸಿ, ಎಂದಿಗೂ ಮರೆಯಲಾಗದ ಶಾಶ್ವತ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ - ಬನ್ನಿರಿ, ಯೆಹೋವನನ್ನು ಆಶ್ರಯಿಸಿ ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ ಬನ್ನಿ; ಮರೆತು ಹೋಗದ ನಿತ್ಯವಾದ ಒಡಂಬಡಿಕೆಯಿಂದ ಯೆಹೋವ ದೇವರನ್ನು ಸೇರಿಕೊಳ್ಳೋಣ, ಅನ್ನುವರು. ಅಧ್ಯಾಯವನ್ನು ನೋಡಿ |
ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.
ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.
ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.