Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:6 - ಪರಿಶುದ್ದ ಬೈಬಲ್‌

6 “ನನ್ನ ಜನರು ತಪ್ಪಿಸಿಕೊಂಡ ಕುರಿಗಳಂತಿದ್ದಾರೆ. ಅವರ ಕುರುಬರು ಅವರನ್ನು ತಪ್ಪು ದಾರಿಗೆ ಎಳೆದಿದ್ದಾರೆ. ಅವರ ನಾಯಕರುಗಳು ಅವರನ್ನು ಬೆಟ್ಟಗಳಲ್ಲಿ ಅಲೆಯುವಂತೆ ಮಾಡಿದ್ದಾರೆ. ಅವರ ವಿಶ್ರಾಂತಿಸ್ಥಾನವನ್ನು ಅವರು ಮರೆತುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ನನ್ನ ಜನರು ದಾರಿತಪ್ಪಿದ ಕುರಿಗಳು. ಕುರಿಗಾಹಿಗಳು ಅವರನ್ನು ದಾರಿ ತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ. ನನ್ನ ಜನರು ತಮ್ಮ ಬೀಡುಗಳನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನನ್ನ ಜನರು ಕಳೆದುಹೋದ ಕುರಿಗಳಾಗಿದ್ದಾರೆ; ಅವರ ಕುರುಬರು ಅವರನ್ನು ತಪ್ಪಿಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:6
36 ತಿಳಿವುಗಳ ಹೋಲಿಕೆ  

ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲಾಡಿದೆವು. ನಮ್ಮ ಸ್ವಂತ ದಾರಿಯಲ್ಲಿ ನಾವು ಹೋದೆವು. ನಮ್ಮ ಅಪರಾಧಗಳಿಂದ ನಾವು ವಿಮುಕ್ತರಾಗುವಂತೆ ಯೆಹೋವನು ನಮ್ಮ ಅಪರಾಧಗಳನ್ನು ಆತನ ಮೇಲೆ ಹಾಕಿದನು.


ನೋವಿನಿಂದ ನರಳುತ್ತಿದ್ದ ಮತ್ತು ಅಸಹಾಯಕರಾಗಿದ್ದ ಅನೇಕ ಜನರನ್ನು ಯೇಸು ನೋಡಿ ದುಃಖಪಟ್ಟನು. ಕುರುಬನಿಲ್ಲದ ಕುರಿಗಳಂತೆ ಅವರಿದ್ದರು.


ಆದರೆ ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಹೋಗಿ,


ಹುಲ್ಲುಗಾವಲಿಗೆ ನಾನು ಅವುಗಳನ್ನು ನಡೆಸುವೆನು. ಇಸ್ರೇಲಿನ ಎತ್ತರವಾದ ಬೆಟ್ಟಗಳಲ್ಲಿ ಅವು ಮೇಯುವವು. ಅಲ್ಲಿ ಒಳ್ಳೆಯ ಸ್ಥಳದಲ್ಲಿ ಅವುಗಳು ಮಲಗಿ ಹುಲ್ಲನ್ನು ಮೇಯುವವು.


“ಇಸ್ರೇಲು ದೇಶಗಳಲ್ಲೆಲ್ಲಾ ಚದರಿಹೋದ ಕುರಿಹಿಂಡಿನಂತಾಗಿದೆ. ಸಿಂಹಗಳಿಗೆ ಹೆದರಿ ಓಡಿಹೋದ ಕುರಿಗಳಂತಾಗಿದೆ ಇಸ್ರೇಲು. ಅದನ್ನು ತಿಂದು ಮುಗಿಸಿದ ಮೊದಲನೆ ಸಿಂಹವೆಂದರೆ ಅಶ್ಶೂರದ ರಾಜನು. ಅದರ ಎಲುಬುಗಳನ್ನು ಜಗಿದ ಕೊನೆಯ ಸಿಂಹವೆಂದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು.


ನಾನು ಕಳೆದುಹೋದ ಕುರಿಯಂತೆ ಅಲೆದಾಡುತ್ತಿದ್ದೇನೆ. ನನಗೋಸ್ಕರ ಹುಡುಕುತ್ತಾ ಬಾ. ನಿನ್ನ ಸೇವಕನಾದ ನಾನು ನಿನ್ನ ಆಜ್ಞೆಗಳನ್ನು ಮರೆತುಬಿಟ್ಟಿಲ್ಲ.


“‘ಆದರೆ ಇಸ್ರೇಲನ್ನು ಪುನಃ ಅದರ ಹುಲ್ಲುಗಾವಲಿಗೆ ತರುವೆನು. ಅದು ಕರ್ಮೆಲ್ ಬೆಟ್ಟದ ಮೇಲೆ ಮತ್ತು ಬಾಷಾನಿನ ಪ್ರದೇಶದಲ್ಲಿ ಮೇಯುವದು. ಅದು ತಿಂದು ತೇಗುವದು. ಅದು ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತಿಂದು ತೃಪ್ತಿಪಡುವದು.’”


ಯೆಹೂದ ಪ್ರದೇಶವನ್ನು ಯೋಷೀಯನು ಆಳುತ್ತಿದ್ದಾಗ ಯೆಹೋವನು ನನ್ನೊಂದಿಗೆ ಮಾತನಾಡಿ, “ಯೆರೆಮೀಯನೇ, ಇಸ್ರೇಲ್‌ ಎಂಬಾಕೆಯು ಮಾಡಿದ ದುಷ್ಕೃತ್ಯಗಳನ್ನು ನೀನು ನೋಡಿದಿಯಾ? ಅವಳು ನನಗೆ ಹೇಗೆ ವಂಚಿಸಿದಳು ನೋಡಿದಿಯಾ? ಅವಳು ಪ್ರತಿಯೊಂದು ಬೆಟ್ಟದ ಮೇಲೆಯೂ ಸೊಂಪಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವಿಗ್ರಹಗಳ ಜೊತೆ ಜಾರತನ ಮಾಡಿದಳು.


ನನ್ನ ಆತ್ಮವೇ, ವಿಶ್ರಮಿಸಿಕೊ! ಯೆಹೋವನು ನಿನ್ನನ್ನು ಕಾಪಾಡುವನು.


ಮಹೋನ್ನತನ ಮೊರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


ನೀವು ದಾರಿ ತಪ್ಪಿದ ಕುರಿಗಳಾಗಿದ್ದಿರಿ. ಆದರೆ ಈಗ ನೀವು ನಿಮ್ಮ ಕುರುಬನ ಬಳಿಗೆ ಅಂದರೆ ನಿಮ್ಮ ಆತ್ಮಗಳನ್ನು ಕಾಪಾಡುವಾತನ ಬಳಿಗೆ ಹಿಂತಿರುಗಿ ಬಂದಿರುವಿರಿ.


ಯೇಸು, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಮಾತ್ರ ದೇವರು ನನ್ನನ್ನು ಕಳುಹಿಸಿದನು” ಎಂದನು.


ಕುರುಬರು ಬುದ್ಧಿಗೇಡಿಗಳಾಗಿದ್ದಾರೆ. ಅವರು ಯೆಹೋವನನ್ನು ಹುಡುಕುವ ಪ್ರಯತ್ನ ಮಾಡುವುದಿಲ್ಲ. ಅವರು ಜ್ಞಾನಿಗಳಲ್ಲ, ಅವರ ಹಿಂಡುಗಳು ಚದರಿಹೋಗುವವು; ಕಳೆದುಹೋಗುವವು.


ಬೆಟ್ಟದ ಮೇಲೆ ವಿಗ್ರಹಗಳ ಪೂಜೆ ಮಾಡಿದ್ದು ನಮ್ಮ ಮೂರ್ಖತನವಾಯಿತು. ಬೆಟ್ಟಗಳ ಮೇಲಿನ ಎಲ್ಲಾ ಉತ್ಸವಗಳು ಕೇವಲ ಸುಳ್ಳು. ಇಸ್ರೇಲಿನ ರಕ್ಷಣೆ ಖಚಿತವಾಗಿಯೂ ನಮ್ಮ ದೇವರಾದ ಯೆಹೋವನಿಂದ ಮಾತ್ರ ಸಾಧ್ಯ.


ಯುವತಿಯು ತನ್ನ ಆಭರಣಗಳನ್ನು ಮರೆಯುವಳೇ? ಇಲ್ಲ. ವಧುವು ಮದುವೆಯ ಉಡುಪನ್ನು ಧರಿಸಿಕೊಳ್ಳಲು ಮರೆಯುವಳೇ? ಇಲ್ಲ. ಆದರೆ ನನ್ನ ಜನರು ನನ್ನನ್ನು ಅಸಂಖ್ಯಾತ ದಿನಗಳವರೆಗೆ ಮರೆತುಬಿಟ್ಟಿದ್ದಾರೆ.


“ಯೆಹೂದವೇ, ಬಹಳ ದಿನಗಳ ಹಿಂದೆಯೇ ನೀನು ನಿನ್ನ ನೊಗವನ್ನು ಕಳಚಿ ಎಸೆದುಬಿಟ್ಟೆ. ನನ್ನೊಂದಿಗೆ ಬಂಧಿಸಿದ ಕಣ್ಣಿಗಳನ್ನು ಹರಿದುಬಿಟ್ಟೆ. ‘ನಾನು ನಿನ್ನನ್ನು ಸೇವಿಸುವದಿಲ್ಲ’ ವೆಂದು ನನಗೆ ಹೇಳಿಬಿಟ್ಟೆ. ನಿಜವಾಗಿ ನೋಡಿದರೆ ಎತ್ತರವಾದ ಎಲ್ಲಾ ಪರ್ವತಗಳ ಮೇಲೂ ಮತ್ತು ಸೊಂಪಾಗಿ ಬೆಳೆದ ಎಲ್ಲಾ ಮರಗಳ ಕೆಳಗೂ ನೀನು ಮಲಗಿಕೊಂಡು ವೇಶ್ಯೆಯರಂತೆ ವರ್ತಿಸಿದೆ.


ಹೀಗಿದ್ದಲ್ಲಿ ರಾಜನು ಮಳೆಯಲ್ಲಿ ಆಶ್ರಯ ಸ್ಥಳವಾಗಿಯೂ ಗಾಳಿಯಲ್ಲಿ ಮರೆಯಂತೆಯೂ ಮರುಭೂಮಿಯಲ್ಲಿ ಒರತೆಯಂತೆಯೂ ಬೆಂಗಾಡಿನಲ್ಲಿ ಬಂಡೆಯ ನೆರಳಿನಂತೆಯೂ ಇರುವನು.


ನನ್ನ ಒಡೆಯನೂ ದೇವರೂ ಇಸ್ರೇಲಿನ ಪರಿಶುದ್ಧನೂ ಹೇಳುವುದೇನೆಂದರೆ, “ನೀವು ನನ್ನ ಕಡೆಗೆ ತಿರುಗಿಕೊಳ್ಳುವುದಾದರೆ ನೀವು ರಕ್ಷಿಸಲ್ಪಡುವಿರಿ. ನೀವು ತಾಳ್ಮೆಯಿಂದ ನನ್ನ ಮೇಲೆ ಭರವಸೆಯಿಟ್ಟರೆ, ನೀವು ಬಲವನ್ನು ಹೊಂದುವಿರಿ.” ಆದರೆ ಹಾಗೆ ಮಾಡಲು ನಿಮಗೆ ಇಷ್ಟವಿಲ್ಲ.


ಯೆಹೋವನೇ, ತಲತಲಾಂತರಗಳಿಂದಲೂ ನೀನೇ ನಮ್ಮ ವಾಸಸ್ಥಾನ.


ನೀನು ನನಗೆ ಆಶ್ರಯದುರ್ಗವಾಗಿರುವೆ. ಇಕ್ಕಟ್ಟುಗಳಲ್ಲಿ ನೀನು ನನ್ನನ್ನು ಸುತ್ತುವರಿದು ಕಾಪಾಡುವೆ. ಆದ್ದರಿಂದ ನಿನ್ನ ರಕ್ಷಣೆಯ ಕುರಿತು ಹಾಡಿಕೊಂಡಾಡುವೆ.


ಆತನು ನನ್ನನ್ನು ಹಸಿರುಗಾವಲುಗಳಲ್ಲಿ ತಂಗಿಸುವನು. ಪ್ರಶಾಂತವಾದ ನೀರಿನ ತೊರೆಗಳ ಬಳಿಯಲ್ಲಿ ನನ್ನನ್ನು ನಡೆಸುವನು.


ನಿಮ್ಮ ದೇವರಾದ ಯೆಹೋವನು ಅಂಧಕಾರವನ್ನು ಉಂಟುಮಾಡುವ ಮೊದಲೇ ಆತನನ್ನು ಗೌರವಿಸಿರಿ, ಕಗ್ಗತ್ತಲಿನ ಬೆಟ್ಟಗಳ ಮೇಲೆ ನೀವು ಬೀಳುವ ಮೊದಲೇ ಆತನನ್ನು ಸ್ತುತಿಸಿರಿ. ಯೆಹೂದದ ಜನರಾದ ನೀವು ಬೆಳಕನ್ನು ನಿರೀಕ್ಷಿಸುತ್ತಿದ್ದೀರಿ. ಆದರೆ ಯೆಹೋವನು ಬೆಳಕನ್ನು ಗಾಢಾಂಧಕಾರವನ್ನಾಗಿ ಪರಿವರ್ತಿಸುವನು.


ಯೆಹೋವನ ಸಂದೇಶವಿದು: “ಯೆಹೂದದ ಕುರುಬರಿಗೆ ಒಳ್ಳೆಯದಾಗುವದಿಲ್ಲ. ಈ ಕುರುಬರು ಕುರಿಗಳನ್ನು ಹಾಳುಮಾಡುತ್ತಿದ್ದಾರೆ. ಅವರು ನನ್ನ ಹುಲ್ಲುಗಾವಲಿನಿಂದ ಕುರಿಗಳು ಎಲ್ಲಾ ದಿಕ್ಕುಗಳಿಗೂ ಓಡಿಹೋಗುವಂತೆ ಮಾಡುತ್ತಿದ್ದಾರೆ.”


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಈ ಸ್ಥಳವು ಈಗ ಬರಿದಾಗಿದೆ. ಈಗ ಇಲ್ಲಿ ಜನರಾಗಲಿ ಪಶುಗಳಾಗಲಿ ವಾಸಿಸುವದಿಲ್ಲ. ಆದರೆ ಯೆಹೂದದ ಎಲ್ಲಾ ಊರುಗಳಲ್ಲಿ ಜನರು ವಾಸಿಸುವರು; ಕುರುಬರು ವಾಸಿಸುವರು. ಕುರಿಮಂದೆಗಳಿಗಾಗಿ ಹುಲ್ಲುಗಾವಲುಗಳಿರುವವು.


“ಮತ್ತೆಮತ್ತೆ ಆ ಸುಳ್ಳು ಪ್ರವಾದಿಗಳು ನನ್ನ ಜನರಿಗೆ ಸುಳ್ಳು ಹೇಳಿದರು. ಅವರು ಶಾಂತಿ ಇರುವದೆಂದು ಹೇಳಿದರು. ಆದರೆ ಶಾಂತಿ ಇರಲಿಲ್ಲ. ಅದು ಈ ರೀತಿಯಲ್ಲಿದೆ: ಜನರು ಬಲಹೀನವಾದ ಗೋಡೆಯನ್ನು ಕಟ್ಟುತ್ತಾರೆ; ಅದು ಬಲವಾಗಿ ಕಾಣುವಂತೆ ಮಾಡಲು ಪ್ರವಾದಿಗಳು ಅದಕ್ಕೆ ತೆಳುವಾದ ಮಡ್ಡಿ ಮಾಡುತ್ತಾರೆ.


ಹೌದು, ನಾನು ನನ್ನ ಮಂದೆಯನ್ನು ಮೇಯಿಸಿ ಅವುಗಳನ್ನು ವಿಶ್ರಾಂತಿಯ ಸ್ಥಳಕ್ಕೆ ನಡೆಸುವೆನು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


“ಕಳೆದುಹೋದ ಕುರಿಗಳನ್ನು ನಾನು ಹುಡುಕುವೆನು. ಚದರಿಹೋಗಿದ್ದ ಕುರಿಗಳನ್ನು ಹಿಂದಕ್ಕೆ ತರುವೆನು. ಗಾಯಗೊಂಡ ಕುರಿಗಳನ್ನು ಬಟ್ಟೆಯಿಂದ ಸುತ್ತುವೆನು. ಬಲಹೀನ ಕುರಿಗಳನ್ನು ಬಲಶಾಲಿಯಾಗಿ ಮಾಡುವೆನು. ಆದರೆ ನಾನು ಕೊಬ್ಬಿದ, ಶಕ್ತಿಶಾಲಿಯಾದ ಕುರುಬರನ್ನು ನಾಶಮಾಡುವೆನು. ಯೋಗ್ಯವಾದ ಶಿಕ್ಷೆಯನ್ನು ಅವರಿಗೆ ಉಣಿಸುವೆನು.”


ಎತ್ತು ತನ್ನ ದಣಿಯನ್ನು ತಿಳಿದದೆ; ಕತ್ತೆಯು ತನ್ನ ದಣಿಯ ಕೊಟ್ಟಿಗೆಯನ್ನು ತಿಳಿದದೆ. ಆದರೆ ಇಸ್ರೇಲರು ನನ್ನನ್ನು ತಿಳಿದೇ ಇಲ್ಲ. ನನ್ನ ಜನರು ನನ್ನನ್ನು ಅರ್ಥಮಾಡಿಕೊಳ್ಳುವುದೇ ಇಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು