9 ಉತ್ತರ ದಿಕ್ಕಿನ ಹಲವು ಜನಾಂಗಗಳನ್ನು ನಾನು ಒಟ್ಟುಗೂಡಿಸಿ ತರುವೆನು. ಆ ಜನಾಂಗಗಳ ಸಮುದಾಯವು ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧವಾಗುತ್ತದೆ. ಬಾಬಿಲೋನ್ ಅವರಿಗೆ ವಶವಾಗುವುದು. ಆ ಜನಾಂಗಗಳ ಜನರು ಬಾಬಿಲೋನಿನ ಮೇಲೆ ಹಲವು ಬಾಣಗಳನ್ನು ಪ್ರಯೋಗ ಮಾಡುವರು. ಆ ಬಾಣಗಳೆಲ್ಲ ಬರಿಗೈಯಲ್ಲಿ ಯುದ್ಧದಿಂದ ಹಿಂದಿರುಗದ ಶೂರ ಸೈನಿಕರಂತಿರುವವು.
9 ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬೀಳಮಾಡುವೆನು; ಅವು ಬಾಬಿಲೋನಿಗೆ ವಿರುದ್ಧವಾಗಿ ವ್ಯೂಹಕಟ್ಟಿ ಅದನ್ನು ಅದರ ಸ್ಥಳದೊಳಗಿಂದ ನಿರ್ಮೂಲಮಾಡುವವು; ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧಪ್ರವೀಣರಾದ ಶೂರನಂತಿರುವವು.
9 ಇಗೋ, ದೊಡ್ಡ ರಾಷ್ಟ್ರಗಳ ಸಮೂಹವನ್ನು ಎಬ್ಬಿಸಿ ಉತ್ತರದಿಂದ ಬಾಬಿಲೋನಿಯದ ಮೇಲೆ ಬೀಳಮಾಡುವೆನು. ಅವು ಬಾಬಿಲೋನಿಗೆ ವಿರುದ್ಧ, ವ್ಯೂಹಕಟ್ಟಿ ಅದನ್ನು ಬುಡಮೇಲು ಮಾಡುವುವು. ಅವುಗಳು ಪ್ರಯೋಗಿಸುವ ಬಾಣಗಳು ಯುದ್ಧ ಪ್ರವೀಣ ಶೂರನಂತಿರುವುವು; ಅವು ಸುಮ್ಮನೆ ಹಿಂದಿರುಗವು.
9 ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಬಡಗಲಿಂದ ಬಾಬೆಲಿನ ಮೇಲೆ ಬೀಳಮಾಡುವೆನು; ಅವು ಬಾಬೆಲಿಗೆ ವಿರುದ್ಧವಾಗಿ ವ್ಯೂಹ ಕಟ್ಟಿ ಅದನ್ನು ಸ್ಥಳದೊಳಗಿಂದ ಕಿತ್ತುಬಿಡುವವು; ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧಪ್ರವೀಣ ಶೂರನಂತಿರುವವು.
9 ಏಕೆಂದರೆ ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ, ಬಾಬಿಲೋನಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧವಾಗಿ ಯುದ್ಧ ಸಿದ್ಧಮಾಡುವರು. ಅಲ್ಲಿಂದ ಅದು ಹಿಡಿಯಲಾಗುವುದು. ಅವರ ಬಾಣಗಳು ಬಲಿಷ್ಠನಾದ ಪ್ರವೀಣ ಶೂರನಂತಿರುವುವು. ಯಾವುದೂ ವ್ಯರ್ಥವಾಗಿ ತಿರುಗದು.
ನಿಮ್ಮ ಬಾಣಗಳನ್ನು ಮಸೆಯಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಯೆಹೋವನು ಮೇದ್ಯರ ರಾಜರನ್ನು ಪ್ರಚೋದಿಸಿದ್ದಾನೆ. ಬಾಬಿಲೋನನ್ನು ನಾಶಪಡಿಸಬೇಕೆಂಬ ಉದ್ದೇಶದಿಂದ ಆತನು ಅವರನ್ನು ಪ್ರಚೋದಿಸಿದ್ದಾನೆ. ಯೆಹೋವನು ಬಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಾನೆ. ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ ಆಲಯವನ್ನು ನಾಶಮಾಡಿತು. ಆದ್ದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುವನು.
“ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಲು ಬಿಲ್ಲುಗಾರರಿಗೆ ಹೇಳಿರಿ. ಆ ಜನರಿಗೆ ನಗರವನ್ನು ಮುತ್ತಲು ಹೇಳಿರಿ. ಯಾರೂ ತಪ್ಪಿಸಿಕೊಂಡು ಹೋಗದಂತೆ ನೋಡಿಕೊಳ್ಳಿ. ಅದು ಮಾಡಿದ ದುಷ್ಕೃತ್ಯಗಳಿಗಾಗಿ ಮುಯ್ಯಿತೀರಿಸಿರಿ. ಬೇರೆ ಜನಾಂಗಗಳಿಗೆ ಅದು ಮಾಡಿದಂತೆ ಅದಕ್ಕೆ ಮಾಡಿರಿ. ಬಾಬಿಲೋನ್ ಯೆಹೋವನನ್ನು ಗೌರವಿಸಲಿಲ್ಲ. ಪರಿಶುದ್ಧನಿಗೆ ಅವಮಾನ ಮಾಡಿದೆ. ಆದ್ದರಿಂದ ಬಾಬಿಲೋನನ್ನು ಶಿಕ್ಷಿಸಬೇಕು.
“ಅತಿ ದೂರದಿಂದ ಬಾಬಿಲೋನಿನ ಮೇಲೆ ಬೀಳಲು ಬನ್ನಿ. ಅದರ ಧಾನ್ಯದ ಕಣಜಗಳನ್ನು ತೆರೆಯಿರಿ. ಬಾಬಿಲೋನನ್ನು ಸಂಪೂರ್ಣವಾಗಿ ನಾಶಮಾಡಿರಿ; ಯಾರನ್ನೂ ಜೀವಂತ ಉಳಿಸಬೇಡಿ. ಧಾನ್ಯಗಳ ಗುಡ್ಡೆಗಳ ಹಾಗೆ ಶವಗಳ ದೊಡ್ಡದೊಡ್ಡ ಗುಡ್ಡೆಗಳನ್ನು ಹಾಕಿರಿ.
ಯೆಹೋವನು ಹೀಗೆನ್ನುತ್ತಾನೆ: “ಮೆರಾಥಯಿಮ್ ದೇಶದ ಮೇಲೆ ಧಾಳಿ ಮಾಡಿರಿ. ಪೆಕೋದ ಪ್ರದೇಶದಲ್ಲಿ ವಾಸಮಾಡುವ ಜನಗಳ ಮೇಲೆ ಧಾಳಿ ಮಾಡಿರಿ. ಅವರ ಮೇಲೆ ಧಾಳಿ ಮಾಡಿ ಅವರನ್ನು ಕೊಂದು ಸಂಪೂರ್ಣವಾಗಿ ನಾಶಮಾಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಿರಿ.
“ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧತೆಗಳನ್ನು ಮಾಡಿರಿ. ಬಿಲ್ಲುಗಾರರೇ, ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಿರಿ. ನಿಮ್ಮ ಬಾಣಗಳಲ್ಲಿ ಒಂದನ್ನೂ ಉಳಿಸಿಕೊಳ್ಳಬೇಡಿರಿ. ಅದು ಯೆಹೋವನ ವಿರುದ್ಧವಾಗಿ ಪಾಪ ಮಾಡಿದೆ.
ಉತ್ತರದ ಒಂದು ಜನಾಂಗವು ಬಾಬಿಲೋನಿನ ಮೇಲೆ ಧಾಳಿ ಮಾಡುವುದು. ಆ ಜನಾಂಗವು ಬಾಬಿಲೋನನ್ನು ಒಂದು ಬರಿದಾದ ಮರುಭೂಮಿಯನ್ನಾಗಿ ಮಾಡುವದು. ಅಲ್ಲಿ ಯಾರೂ ವಾಸಮಾಡಲಾರರು. ಪ್ರಾಣಿಗಳು ಮತ್ತು ಮನುಷ್ಯರು ಅಲ್ಲಿಂದ ಪಲಾಯನ ಮಾಡುವರು.”
ಯೆಹೂದದ ಜನರೇ, ನಾನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವೆನು. ಅವರು ನೀವೆಂದೂ ತಿಳಿಯದ ಪ್ರದೇಶದಿಂದ ಬಂದು ನಿಮ್ಮನ್ನು ಅಲ್ಲಿಗೆ ಸಾಗಿಸುವರು. ನನಗೆ ಅತಿಕೋಪ ಬಂದಿದೆ. ನನ್ನ ಕೋಪವು ಜ್ವಾಲೆಯಂತಿದೆ. ಆ ಜ್ವಾಲೆಯಿಂದ ನೀವು ಸುಟ್ಟುಹೋಗುವಿರಿ.”
“ಉತ್ತರದಿಕ್ಕಿನಲ್ಲಿರುವ ಒಬ್ಬ ಮನುಷ್ಯನನ್ನು ನಾನು ಎಚ್ಚರಪಡಿಸಿದೆನು. ಅವನು ಪೂರ್ವದಿಕ್ಕಿನಿಂದ ಬರುವನು. ನನ್ನ ನಾಮವನ್ನು ಅವನು ಆರಾಧಿಸುವನು. ಕುಂಬಾರನು ಜೇಡಿಮಣ್ಣನ್ನು ತುಳಿದು ಹದಗೊಳಿಸುವಂತೆ ಅವನು ಅರಸರುಗಳ ಮೇಲೆ ತುಳಿದಾಡುವನು.
ನಡೆಯಲಿರುವ ಒಂದು ಭಯಂಕರ ಘಟನೆಯನ್ನು ನಾನು ದರ್ಶನದಲ್ಲಿ ನೋಡಿದ್ದೇನೆ. ನಿನಗೆ ವಿರುದ್ಧವಾಗಿ ದ್ರೋಹಿಗಳು ಏಳುತ್ತಿದ್ದಾರೆ. ನಿನ್ನ ಧನೈಶ್ವರ್ಯಗಳನ್ನು ಜನರು ಕಿತ್ತುಕೊಳ್ಳುತ್ತಿದ್ದಾರೆ. ಏಲಾಮೇ, ಹೋಗಿ ಆ ಜನರೊಂದಿಗೆ ಹೋರಾಡು. ಮೇದ್ಯವೇ, ಆ ಪಟ್ಟಣವನ್ನು ನಿನ್ನ ಸೈನ್ಯದಿಂದ ಸೋಲಿಸು. ಆ ನಗರದ ಎಲ್ಲಾ ದುಷ್ಟತನವನ್ನು ನಾನು ಕೊನೆಗಾಣಿಸುವೆನು.
ಯೋನಾತಾನನ ಬಿಲ್ಲು ತನ್ನ ಪಾಲಿನ ಶತ್ರುಗಳನ್ನು ಸಂಹರಿಸಿತು. ಸೌಲನ ಖಡ್ಗವು ತನ್ನ ಪಾಲಿನ ಶತ್ರುಗಳನ್ನು ಸಂಹರಿಸಿತು. ಈಗ ಸತ್ತುಬಿದ್ದಿರುವ ಸೈನಿಕರ ರಕ್ತವನ್ನು ಅವರ ಆಯುಧಗಳು ಚಿಮ್ಮಿಸಿದವು. ಅವರ ಆಯುಧಗಳು ಬಲಿಷ್ಠರ ಕೊಬ್ಬನ್ನು ಕತ್ತರಿಸಿಹಾಕಿದವು.
ಉತ್ತರದಲ್ಲಿ ಸಮೀಪದಲ್ಲಿದ್ದ ಮತ್ತು ದೂರದಲ್ಲಿದ್ದ ಎಲ್ಲಾ ರಾಜರನ್ನು ಈ ಪಾತ್ರೆಯಿಂದ ಒಬ್ಬರಾದ ಮೇಲೊಬ್ಬರು ಕುಡಿಯುವಂತೆ ಮಾಡಿದೆನು. ನಾನು ಭೂಮಿಯ ಮೇಲಿದ್ದ ಎಲ್ಲಾ ರಾಜ್ಯಗಳು ಯೆಹೋವನ ಕೋಪದ ಪಾತ್ರೆಯಿಂದ ಕುಡಿಯುವಂತೆ ಮಾಡಿದೆನು. ಆದರೆ ಬಾಬಿಲೋನಿನ ರಾಜನು ಎಲ್ಲಾ ದೇಶಗಳವರು ಕುಡಿದ ತರುವಾಯ ಕುಡಿಯುವನು.