ಯೆರೆಮೀಯ 51:14 - ಪರಿಶುದ್ದ ಬೈಬಲ್14 ಸರ್ವಶಕ್ತನಾದ ಯೆಹೋವನು ತನ್ನ ಮೇಲೆ ಆಣೆ ಇಟ್ಟುಕೊಂಡು ಹೀಗೆ ಹೇಳಿದ್ದಾನೆ: “ಬಾಬಿಲೋನೇ, ನಾನು ಖಂಡಿತವಾಗಿ ನಿನ್ನನ್ನು ವೈರಿ ಸೈನಿಕರಿಂದ ತುಂಬಿಸಿಬಿಡುವೆನು. ಅವರು ಮಿಡತೆಗಳ ಸಮೂಹದಂತೆ ವ್ಯಾಪಿಸುವರು. ಆ ಸೈನಿಕರು ನಿನ್ನ ವಿರುದ್ಧ ಯುದ್ಧದಲ್ಲಿ ಜಯಗಳಿಸುವರು. ಅವರು ನಿನ್ನ ಮೇಲೆ ನಿಂತುಕೊಂಡು ಜಯಘೋಷ ಮಾಡುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು, ‘ಖಂಡಿತವಾಗಿ ನಾನು ನಿನ್ನನ್ನು ಮಿಡತೆಗಳಷ್ಟು ಅಸಂಖ್ಯ ಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಜಯಘೋಷಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸೇನಾಧೀಶ್ವರ ಸರ್ವೇಶ್ವರ ತಮ್ಮ ಮೇಲೆ ಆಣೆಯಿಟ್ಟು ಹೇಳುವುದು ಇದು: “ಖಂಡಿತವಾಗಿ ನಾನು ಮಿಡತೆಗಳಷ್ಟು ಅಸಂಖ್ಯ ಜನರಿಂದ ನಿನ್ನನ್ನು ತುಂಬಿಸುವೆನು. ಅವರು ನಿನ್ನ ಮೇಲೆ ಜಯಘೋಷಮಾಡುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು - ಖಂಡಿತವಾಗಿ ನಾನು ನಿನ್ನನ್ನು ವಿುಡಿತೆಗಳಷ್ಟು ಅಸಂಖ್ಯಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಆರ್ಭಟಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಸೇನಾಧೀಶ್ವರ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟು: ನಿಶ್ಚಯವಾಗಿ ನಾನು ಮಿಡತೆಗಳಷ್ಟು ಅಸಂಖ್ಯ ಜನರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧವಾಗಿ ಆರ್ಭಟವನ್ನು ಎತ್ತುವರು. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆನ್ನುತ್ತಾನೆ, “ನನ್ನ ಸ್ವಸಾಮರ್ಥ್ಯದಿಂದ ನಾನು ಈ ಪ್ರಮಾಣ ಮಾಡುವೆನು. ನಾನು ಆಣೆಯಿಟ್ಟು ಹೇಳುವೆನು. ಬೊಚ್ರ ನಗರವನ್ನು ನಾಶಮಾಡಲಾಗುವುದು. ಆ ನಗರ ಒಂದು ಹಾಳು ದಿಬ್ಬವಾಗುವುದು. ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಶಪಿಸುವಾಗ ಜನರು ‘ಬೊಚ್ರದಂತೆ ಹಾಳಾಗಲಿ’ ಎಂದು ಈ ನಗರದ ಉದಾಹರಣೆಯನ್ನು ಕೊಡುವರು. ಜನರು ಈ ನಗರವನ್ನು ಅವಮಾನ ಮಾಡುವರು. ಬೊಚ್ರ ನಗರದ ಸುತ್ತಮುತ್ತಲಿನ ಪಟ್ಟಣಗಳು ಶಾಶ್ವತವಾಗಿ ಹಾಳುಬೀಳುವವು.”
“ಎಲ್ಲಾ ದೇಶಗಳಲ್ಲಿ ಯುದ್ಧದ ಧ್ವಜವನ್ನು ಹಾರಿಸಿರಿ. ಎಲ್ಲಾ ರಾಷ್ಟ್ರಗಳಲ್ಲಿ ತುತ್ತೂರಿಗಳನ್ನು ಊದಿರಿ. ಬಾಬಿಲೋನಿನ ವಿರುದ್ಧ ಹೋರಾಡಲು ಎಲ್ಲಾ ಜನಾಂಗಗಳನ್ನು ಸಿದ್ಧಗೊಳಿಸಿರಿ. ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಜ್ಯಗಳನ್ನು ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಕರೆಯಿರಿ. ಸೈನ್ಯದ ಮುಂದಾಳಾಗಿರಲು ಒಬ್ಬ ಸೇನಾಧಿಪತಿಯನ್ನು ಆರಿಸಿರಿ. ಮಿಡತೆಯ ದಂಡಿನಂತೆ ಅಪಾರವಾಗಿರುವ ಅಶ್ವಬಲವನ್ನು ಕಳುಹಿಸಿರಿ.
ಆದರೆ, ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಎಲ್ಲಾ ಯೆಹೂದ್ಯರೇ, ಯೆಹೋವನ ಸಂದೇಶವನ್ನು ಕೇಳಿರಿ. ‘ನಾನು ಆಣೆಮಾಡಿ ಹೀಗೆ ಹೇಳುತ್ತೇನೆ. ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದಿಯರಲ್ಲಿ ಯಾರೊಬ್ಬರೂ ಇನ್ನು ಮುಂದೆ ನನ್ನ ಹೆಸರಿನ ಮೇಲೆ ಆಣೆಯಿಟ್ಟು ಹೇಳಲಾರರು ಎಂದು ನಾನು ನನ್ನ ಮಹತ್ತಾದ ನಾಮದ ಮೇಲೆ ಆಣೆಯಿಟ್ಟುಕೊಂಡು ಹೇಳುತ್ತೇನೆ. ಇನ್ನು ಮುಂದೆ ಎಂದೂ ಅವರು “ದೇವರ ಆಣೆಯಾಗಿ” ಎಂದು ಹೇಳಲಾರರು.