ಯೆರೆಮೀಯ 51:15 - ಪರಿಶುದ್ದ ಬೈಬಲ್15 ಯೆಹೋವನು ತನ್ನ ಅಪಾರ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದನು. ತನ್ನ ಜ್ಞಾನದಿಂದ ಈ ಲೋಕವನ್ನು ನಿರ್ಮಿಸಿದನು. ತನ್ನ ವಿವೇಕದಿಂದ ಆಕಾಶವನ್ನು ಹರಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ವಿಸ್ತರಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆತ ಭೂಮಿಯನ್ನು ನಿರ್ಮಿಸಿದ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ ವಿವೇಕದಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆತನು ತನ್ನ ಶಕ್ತಿಯಿಂದ ಭೂವಿುಯನ್ನು ನಿರ್ಮಿಸಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ಅವರು ತಮ್ಮ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿ, ತಮ್ಮ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತಮ್ಮ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾರೆ. ಅಧ್ಯಾಯವನ್ನು ನೋಡಿ |
“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.
ಯೆಹೋವನು ನಿನ್ನನ್ನು ಸೃಷ್ಟಿಸಿದ್ದಾನೆ. ತನ್ನ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದವನು ಆತನೇ. ಆತನು ತನ್ನ ಶಕ್ತಿಯಿಂದ ಭೂಮಿಯ ಮೇಲೆ ಆಕಾಶವನ್ನು ಹರಡಿದ್ದಾನೆ. ಆದರೆ ನೀನು ಆತನನ್ನೂ ಆತನ ಶಕ್ತಿಯನ್ನೂ ಮರೆತುಬಿಟ್ಟೆ ಆದ್ದರಿಂದಲೇ ನಿನಗೆ ಕೇಡುಮಾಡುವ ದುಷ್ಟರಿಗೆ ನೀನು ಯಾವಾಗಲೂ ಹೆದರಿಕೊಂಡಿರುವೆ. ಅವರು ನಿನ್ನನ್ನು ನಾಶಮಾಡಲು ಆಲೋಚಿಸಿದ್ದಾರೆ. ಈಗ ಅವರೆಲ್ಲಿದ್ದಾರೆ? ಅವರೆಲ್ಲಾ ಹೋಗಿಬಿಟ್ಟಿದ್ದಾರೆ.