ಯೆರೆಮೀಯ 51:17 - ಪರಿಶುದ್ದ ಬೈಬಲ್17 ಆದರೆ ಜನರು ಬುದ್ಧಿಹೀನರಾಗಿ ದೇವರ ಕಾರ್ಯವನ್ನು ತಿಳಿಯದವರಾಗಿದ್ದಾರೆ. ಕುಶಲಕೆಲಸಗಾರರು ಸುಳ್ಳುದೇವರುಗಳ ಪ್ರತಿಮೆಗಳನ್ನು ಮಾಡುತ್ತಾರೆ. ಆ ಪ್ರತಿಮೆಗಳು ಕೇವಲ ಸುಳ್ಳುದೇವರುಗಳೇ. ಆ ಕೆಲಸಗಾರರು ಎಷ್ಟು ಮೂರ್ಖರೆಂಬುದನ್ನು ಅವು ತೋರಿಸುತ್ತವೆ. ಆ ಪ್ರತಿಮೆಗಳು ಜೀವಂತವಾಗಿರುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇದರ ಮುಂದೆ ಜನರು ತಿಳುವಳಿಕೆಯಿಲ್ಲದ ಪಶುಪ್ರಾಯರು ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಪೊಳ್ಳು, ಶ್ವಾಸವಿಲ್ಲದವುಗಳು, ಅವನು ಎರಕಹೊಯ್ದ ಪುತ್ತಳಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಎಲ್ಲರೂ ತಿಳುವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿವಿುತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ; ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ; ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ; ಅವುಗಳಲ್ಲಿ ಉಸಿರೇ ಇಲ್ಲ. ಅಧ್ಯಾಯವನ್ನು ನೋಡಿ |