18 ಆ ವಿಗ್ರಹಗಳು ನಿಷ್ಪ್ರಯೋಜಕವಾದವುಗಳೇ. ಆ ವಿಗ್ರಹಗಳನ್ನು ಮಾಡಿದವರು ಜನರೇ. ಅವುಗಳು ಕೇವಲ ಹಾಸ್ಯಾಸ್ಪದ ವಸ್ತುಗಳಲ್ಲದೆ ಮತ್ತೇನೂ ಅಲ್ಲ. ಅವುಗಳ ಬಗ್ಗೆ ತೀರ್ಪುಕೊಡುವ ಕಾಲ ಬರುವದು; ಆ ವಿಗ್ರಹಗಳನ್ನು ನಾಶಮಾಡಲಾಗುವುದು.
“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.
“ನೀವು ನಿರ್ಮಿಸಿದ ವಸ್ತುಗಳಲ್ಲಿ ಮತ್ತು ನಿಮ್ಮ ಸಂಪತ್ತಿನಲ್ಲಿ ನಂಬಿಕೆಯಿಟ್ಟಿದ್ದರಿಂದ ನಿಮ್ಮನ್ನು ವಶಪಡಿಸಿಕೊಳ್ಳಲಾಗುವುದು. ಕೆಮೋಷ್ ದೇವತೆಯನ್ನು ಅದರ ಯಾಜಕರೊಂದಿಗೆ ಮತ್ತು ಪ್ರಧಾನರೊಂದಿಗೆ ಸೆರೆಹಿಡಿಯಲಾಗುವುದು.
ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ: “ಬಹುಬೇಗನೆ ನಾನು ಥೀಬಸ್ಸಿನ ಆಮೋನ್ ದೇವತೆಯನ್ನು ದಂಡಿಸುವೆನು. ನಾನು ಫರೋಹನನ್ನು, ಈಜಿಪ್ಟನ್ನು ಮತ್ತು ಅವಳ ದೇವರುಗಳನ್ನು ದಂಡಿಸುವೆನು. ನಾನು ಈಜಿಪ್ಟಿನ ರಾಜರನ್ನು ದಂಡಿಸುವೆನು. ಫರೋಹನನ್ನು ನಂಬಿದವರನ್ನು ದಂಡಿಸುವೆನು.
ಆದರೆ ನನ್ನ ಜನರು ನನ್ನನ್ನು ಮರೆತಿದ್ದಾರೆ. ಅವರು ನಿಷ್ಪ್ರಯೋಜಕವಾದ ವಿಗ್ರಹಗಳಿಗೆ ನೈವೇದ್ಯ ಮಾಡುತ್ತಾರೆ. ನನ್ನ ಜನರು ತಾವು ಮಾಡುವ ಕೆಲಸಗಳಲ್ಲಿ ಮುಗ್ಗರಿಸುತ್ತಾರೆ. ಅವರು ತಮ್ಮ ಪೂರ್ವಿಕರ ಹಳೆಯ ಹಾದಿಯಲ್ಲಿಯೇ ಮುಗ್ಗರಿಸುತ್ತಾರೆ. ನನ್ನ ಜನರು ಒಳ್ಳೆಯ ರಾಜಬೀದಿಯ ಮೇಲೆ ನನ್ನನ್ನು ಹಿಂಬಾಲಿಸುವದನ್ನು ತೊರೆದು ಹಾಳಾದ ಹಾದಿಯನ್ನು ಹಿಡಿಯುತ್ತಾರೆ.
ಬೇಲ್ ಮತ್ತು ನೆಬೋ ನನ್ನ ಮುಂದೆ ಅಡ್ಡಬೀಳುವವು. ಒಡೆಯನು ಹೀಗೆನ್ನುತ್ತಾನೆ, “ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳೇ. ಜನರು ಭಾರವಾದ ವಿಗ್ರಹಗಳನ್ನು ಪಶುಗಳ ಮೇಲೆ ಹೊರಿಸುವರು. ಅವು ಕೇವಲ ಹೊತ್ತುಕೊಂಡು ಹೋಗಬೇಕಾದ ಹೊರೆಗಳಾಗಿವೆ. ಆ ಸುಳ್ಳುದೇವರುಗಳು ಜನರನ್ನು ದಣಿಸುವುದೊಂದನ್ನು ಬಿಟ್ಟು ಬೇರೆ ಯಾವ ಕೆಲಸವನ್ನೂ ಮಾಡುವದಿಲ್ಲ.
ಈಜಿಪ್ಟಿನ ವಿಷಯವಾಗಿ ದುಃಖಕರವಾದ ಸಂದೇಶ: ಯೆಹೋವನು ವೇಗವಾಗಿ ಬರುವ ಮೋಡದೊಂದಿಗೆ ಬರುತ್ತಿದ್ದಾನೆ. ಆತನು ಈಜಿಪ್ಟನ್ನು ಪ್ರವೇಶಿಸುವಾಗ ಈಜಿಪ್ಟಿನ ಸುಳ್ಳುದೇವರುಗಳೆಲ್ಲಾ ಹೆದರಿ ನಡುಗುವವು. ಈಜಿಪ್ಟು ಧೈರ್ಯಶಾಲಿ ದೇಶವಾಗಿದ್ದರೂ, ಅದರ ಧೈರ್ಯ ಮೇಣದಂತೆ ಕರಗಿಹೋಗುವದು.
“ಆ ರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗಿ ಈಜಿಪ್ಟಿನ ಚೊಚ್ಚಲು ಪಶುಗಳನ್ನೂ ಚೊಚ್ಚಲು ಗಂಡುಮಕ್ಕಳನ್ನೂ ಕೊಲ್ಲುವೆನು; ಈಜಿಪ್ಟಿನ ಎಲ್ಲಾ ದೇವರುಗಳಿಗೆ ತೀರ್ಪು ಮಾಡುವೆನು. ನಾನೇ ಯೆಹೋವನೆಂದು ತೋರಿಸಿಕೊಡುವೆನು.
ಯೆಹೋವನು ಹೇಳುತ್ತಾನೆ, “ಈ ಸಂದೇಶವನ್ನು ಆ ಜನರಿಗೆ ಹೇಳು: ‘ಆ ಸುಳ್ಳುದೇವರುಗಳು ಭೂಲೋಕವನ್ನೂ ಪರಲೋಕವನ್ನೂ ಸೃಷ್ಟಿ ಮಾಡಿಲ್ಲ. ಆ ಸುಳ್ಳುದೇವರುಗಳನ್ನು ನಾಶಮಾಡಲಾಗುವುದು; ಅವುಗಳು ಭೂಲೋಕದಿಂದಲೂ ಆಕಾಶದಿಂದಲೂ ಕಣ್ಮರೆಯಾಗುವವು.’”
ನಿಮ್ಮ ಜನರು ವಾಸಮಾಡುವಲ್ಲೆಲ್ಲಾ ಕೆಟ್ಟಸಂಗತಿಗಳು ನಡೆಯುವವು; ಪಟ್ಟಣಗಳು ಕಲ್ಲಿನ ರಾಶಿಗಳಾಗುವವು; ಪೂಜಾಸ್ಥಳಗಳು ನಾಶಮಾಡಲ್ಪಡುವವು. ನಿಮ್ಮ ಯಜ್ಞವೇದಿಕೆಗಳು ಕೆಡವಲ್ಪಟ್ಟು ಹಾಳಾಗಿಹೋಗುವವು; ನಿಮ್ಮ ವಿಗ್ರಹಗಳು ಮುರಿಯಲ್ಪಟ್ಟು ನಾಶವಾಗುವವು. ಜನರು ಅವುಗಳನ್ನು ಇನ್ನು ಎಂದಿಗೂ ಪೂಜಿಸರು. ನಿಮ್ಮ ಧೂಪವೇದಿಕೆಗಳು ಕತ್ತರಿಸಲ್ಪಡುವವು. ನೀವು ಮಾಡಿಕೊಂಡ ವಿಗ್ರಹಗಳು ಅಳಿದುಹೋಗುವವು.