22 ಗಂಡಸರನ್ನೂ ಹೆಂಗಸರನ್ನೂ ಸಂಹರಿಸುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. ವೃದ್ಧರನ್ನೂ ತರುಣರನ್ನೂ ನಾಶಪಡಿಸಲು ನಾನು ನಿನ್ನನ್ನು ಬಳಸುತ್ತೇನೆ. ತರುಣರನ್ನೂ ತರುಣಿಯರನ್ನೂ ಧ್ವಂಸ ಮಾಡಲು ನಾನು ನಿನ್ನನ್ನು ಬಳಸುತ್ತೇನೆ.
ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.
ಈಗ, ನೀನು ಹೋಗಿ ಅಮಾಲೇಕ್ಯರ ವಿರುದ್ಧ ಹೋರಾಡು. ನೀನು ಅಮಾಲೇಕ್ಯರನ್ನೂ ಮತ್ತು ಅವರಿಗೆ ಸೇರಿದ ಎಲ್ಲವನ್ನೂ ನಾಶಗೊಳಿಸಬೇಕು. ಯಾರನ್ನೂ ಜೀವದಿಂದ ಉಳಿಸಬೇಡ, ನೀನು ಎಲ್ಲ ಗಂಡಸರನ್ನು ಮತ್ತು ಹೆಂಗಸರನ್ನು ಕೊಲ್ಲಬೇಕು. ನೀನು ಎಲ್ಲ ಮಕ್ಕಳನ್ನೂ ಎಳೆಕೂಸುಗಳನ್ನೂ ಕೊಲ್ಲಬೇಕು. ನೀನು ಅವರಿಗೆ ಸೇರಿದ ಎಲ್ಲ ಹಸುಗಳನ್ನೂ ಕುರಿಗಳನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಂದುಹಾಕಬೇಕು’” ಎಂದು ಹೇಳಿದನು.
ಕಂಬನಿ ಸುರಿದು ನನ್ನ ಕಣ್ಣುಗಳು ಇಂಗಿಹೋಗಿವೆ. ನನ್ನ ಕರುಳು ತಳಮಳಗೊಂಡಿದೆ. ನನ್ನ ಹೃದಯವನ್ನು ನೆಲಕ್ಕೆ ಚೆಲ್ಲಲಾಗಿದೆ ಎಂದೆನಿಸುತ್ತಿದೆ. ನನ್ನ ಜನರ ವಿನಾಶದಿಂದ ನನಗೆ ಹೀಗಾಗಿದೆ. ಮಕ್ಕಳು ಮತ್ತು ಶಿಶುಗಳು ಮೂರ್ಛೆ ಹೋಗುತ್ತಿದ್ದಾರೆ. ಅವರು ನಗರದ ಕೇಂದ್ರ ಸ್ಥಳಗಳಲ್ಲಿ (ಚೌಕಗಳಲ್ಲಿ) ಮೂರ್ಛೆಹೋಗುತ್ತಿದ್ದಾರೆ.
ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತಿದೆ, ತಡೆದುತಡೆದು ನನಗೆ ಸಾಕಾಗಿದೆ. “ಬೀದಿಯಲ್ಲಾಡುವ ಮಕ್ಕಳ ಮೇಲೆ ಅದನ್ನು ಹೊಯ್ದುಬಿಡಬೇಕು. ಒಂದೆಡೆ ಸೇರುವ ತರುಣರ ಮೇಲೆ ಅದನ್ನು ಹೊಯ್ದುಬಿಡಬೇಕು. ಗಂಡಹೆಂಡತಿಯರಿಬ್ಬರನ್ನು ಅಪಹರಿಸಲಾಗುವುದು. ಮುದುಕರನ್ನೂ ಮುಪ್ಪಿನ ಮುದುಕರನ್ನೂ ಅಪಹರಿಸಲಾಗುವುದು.
ರಸ್ತೆಗಳಲ್ಲಿ ಸಿಪಾಯಿಗಳು ಅವರನ್ನು ಕೊಲ್ಲುವರು. ಅವರ ಮನೆಗಳಲ್ಲಿ ಭಯಂಕರ ಸಂಗತಿಗಳು ನಡೆಯುವವು. ಯುವಕಯುವತಿಯರನ್ನೂ ಸಿಪಾಯಿಗಳು ಕೊಲ್ಲುವರು, ಮುದುಕರನ್ನೂ ಎಳೆಗೂಸುಗಳನ್ನೂ ಸಂಹರಿಸುವರು.
ಅಶ್ಶೂರದ ಅರಸನು ಈಜಿಪ್ಟನ್ನೂ ಇಥಿಯೋಪ್ಯವನ್ನೂ ಸೋಲಿಸುವನು. ಅಶ್ಶೂರವು ಜನರನ್ನು ಸೆರೆಹಿಡಿದು ಅವರ ರಾಜ್ಯಗಳಿಂದ ಹೊರಗೆ ಕೊಂಡುಹೋಗುವದು. ವೃದ್ಧರೂ ಬಾಲಕರೂ ಬಟ್ಟೆಯಿಲ್ಲದೆಯೂ ಪಾದರಕ್ಷೆಗಳಿಲ್ಲದೆಯೂ ಇರುವರು. ಅವರು ಪೂರ್ಣ ಬೆತ್ತಲೆಯಾಗಿರುವರು. ಈಜಿಪ್ಟಿನ ಜನರು ನಾಚಿಕೆಗೆ ತುತ್ತಾಗುವರು.
“ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ವಿಗ್ರಹಗಳ ಪೂಜೆಮಾಡಿ ನಿಮ್ಮನ್ನು ನೀವೇ ಏಕೆ ತೊಂದರೆಗೀಡು ಮಾಡಿಕೊಳ್ಳುವಿರಿ? ಈ ದುರಾಚಾರದ ನಿಮಿತ್ತ ನೀವು ಯೆಹೂದ ಕುಟುಂಬದಿಂದ ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು ಮತ್ತು ಕೂಸುಗಳನ್ನು ಅಗಲಿಸುತ್ತಿದ್ದೀರಿ. ಯೆಹೂದ ಕುಲದಿಂದ ಯಾರೂ ಉಳಿಯದಂತೆ ಮಾಡುತ್ತಿದ್ದೀರಿ.
ಖಡ್ಗವೇ, ಬಾಬಿಲೋನಿನ ಕುದುರೆಗಳನ್ನು ಮತ್ತು ರಥಗಳನ್ನು ಧ್ವಂಸಮಾಡು! ಖಡ್ಗವೇ, ಪರದೇಶಗಳಿಂದ ಕರೆಸಿದ ಸೈನಿಕರನ್ನು ಕೊಂದುಹಾಕು! ಆ ಸೈನಿಕರು ಹೆದರಿದ ಹೆಂಗಸರಂತಾಗಿರುವರು. ಖಡ್ಗವೇ, ಬಾಬಿಲೋನಿನ ಭಂಡಾರಗಳನ್ನು ನಾಶಮಾಡು! ಆ ಐಶ್ವರ್ಯವು ಸೂರೆಗೊಳ್ಳುವುದು.
ಕುರುಬರನ್ನೂ ಕುರಿಹಿಂಡನ್ನೂ ನಾಶಮಾಡುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. ರೈತರನ್ನೂ ಮತ್ತು ಹಸುಗಳನ್ನೂ ಸಂಹರಿಸುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. ಅಧಿಪತಿಗಳನ್ನೂ ಪ್ರಮುಖ ಅಧಿಕಾರಿಗಳನ್ನೂ ನುಚ್ಚುನೂರು ಮಾಡುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ.
ಬೀದಿಗಳಲ್ಲಿ ತರುಣರು ಮತ್ತು ವೃದ್ಧರು ನೆಲದ ಮೇಲೆ ಬಿದ್ದಿದ್ದಾರೆ. ನನ್ನ ಯುವತಿಯರು ಮತ್ತು ಯುವಕರು ಖಡ್ಗದಿಂದ ಹತರಾಗಿದ್ದಾರೆ. ಯೆಹೋವನೇ, ನಿನಗೆ ಕೋಪಬಂದ ದಿನ ಅವರನ್ನು ಕೊಂದುಬಿಟ್ಟೆ; ಕರುಣೆ ತೋರದೆ ಅವರನ್ನು ಸಂಹರಿಸಿದೆ.