Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:25 - ಪರಿಶುದ್ದ ಬೈಬಲ್‌

25 ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನೇ, ನೀನು ಇಡೀ ದೇಶವನ್ನು ನಾಶಪಡಿಸುವ ಜ್ವಾಲಾಮುಖಿಯಂತಿರುವೆ. ಆದರೆ ನಾನು ನಿನಗೆ ವಿರುದ್ಧವಾಗಿ ತಿರುಗಿದ್ದೇನೆ. ನಾನು ನಿನ್ನನ್ನು ಸುಟ್ಟುಹೋದ ಪರ್ವತವನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನು ಇಂತೆನ್ನುತ್ತಾನೆ, “ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ಲೋಕವನ್ನೆಲ್ಲಾ ನಾಶಮಾಡುವ ಎಲೈ ನಾಶಕ ಪರ್ವತವೇ, ನಾನು ನಿನಗೆ ವಿರುದ್ಧನಾಗಿದ್ದೇನೆ. ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಬಂಡೆಯ ಮೇಲಿಂದ ಕೆಳಕ್ಕೆ ಉರುಳಿಸುವೆನು. ಸುಟ್ಟ ಬೆಟ್ಟವನ್ನಾಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೆಹೋವನು ಇಂತೆನ್ನುತ್ತಾನೆ - ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕ ಪರ್ವತವೇ, ನಾನು ನಿನಗೆ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಜರಿಯ ಮೇಲಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಲೋಕವನ್ನೆಲ್ಲಾ ನಾಶಮಾಡುವ ನಾಶಕ ಪರ್ವತವೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. “ನಿನ್ನ ಮೇಲೆ ನನ್ನ ಕೈಯನ್ನು ಚಾಚಿ, ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ, ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:25
18 ತಿಳಿವುಗಳ ಹೋಲಿಕೆ  

ಎರಡನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿದ್ದ ದೊಡ್ಡ ಬೆಟ್ಟವೋ ಎಂಬಂತಿದ್ದ ವಸ್ತುವೊಂದನ್ನು ಸಮುದ್ರದೊಳಕ್ಕೆ ಎಸೆಯಲಾಯಿತು. ಆಗ ಸಮುದ್ರದ ಮೂರನೆಯ ಒಂದು ಭಾಗ ರಕ್ತವಾಯಿತು.


ಉನ್ನತವಾದ ಶಿಖರವು ಜೆರುಬ್ಬಾಬೆಲನಿಗೆ ಸಮತಟ್ಟಾದ ನೆಲದಂತಿರುವುದು. ಅವನು ಆಲಯವನ್ನು ಕಟ್ಟುವನು. ಅದರ ಅತಿ ವಿಶೇಷವಾದ ಕಲ್ಲನ್ನಿಟ್ಟ ಬಳಿಕ ಜನರೆಲ್ಲರೂ, ‘ಬಹಳ ಚಂದ, ಬಹಳ ಚಂದ’ ಎಂದು ಆರ್ಭಟಿಸುವರು.”


“ಬಾಬಿಲೋನೇ, ನೀನು ತುಂಬಾ ದುರಹಂಕಾರಿ. ನಾನು ನಿನಗೆ ವಿರುದ್ಧವಾಗಿದ್ದೇನೆ.” ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ. “ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನ್ನನ್ನು ದಂಡಿಸುವ ಸಮಯ ಬಂದಿದೆ.


ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ಅಗಲವಾದ ಮತ್ತು ಸುಭದ್ರವಾದ ಗೋಡೆಯನ್ನು ಬೀಳಿಸಲಾಗುವುದು. ಅದರ ಎತ್ತರವಾದ ಬಾಗಿಲುಗಳನ್ನು ಸುಟ್ಟುಹಾಕಲಾಗುವುದು. ಬಾಬಿಲೋನಿನ ಜನರು ನಗರವನ್ನು ರಕ್ಷಿಸಲು ಬಹಳ ಕಷ್ಟಪಡುವರು. ಆದರೆ ಅದು ನಿಷ್ಪ್ರಯೋಜಕವಾಗುವುದು. ನಗರವನ್ನು ರಕ್ಷಿಸುವ ಪ್ರಯತ್ನದಲ್ಲಿ ಅವರು ತುಂಬಾ ಶ್ರಮವಹಿಸುವರು. ಆದರೆ ಅವರು ಕೇವಲ ಅಗ್ನಿಗೆ ಆಹುತಿಯಾಗುವರು.”


ಬಾಬಿಲೋನ್ ನಗರವು ಗಗನ ಚುಂಬಿಯಾಗಿ ಬೆಳೆಯಬಹುದು. ಅದು ತನ್ನ ಕೋಟೆಗಳನ್ನು ಭದ್ರಪಡಿಸಿಕೊಳ್ಳಬಹುದು. ಆದರೆ ಆ ನಗರದ ವಿರುದ್ಧ ಯುದ್ಧಮಾಡಲು ನಾನು ಜನರನ್ನು ಕಳುಹಿಸುತ್ತೇನೆ. ಆ ಜನರು ಅದನ್ನು ನಾಶಮಾಡುವರು.” ಇದು ಯೆಹೋವನ ನುಡಿ.


“ಬೋಳುಗುಡ್ಡದ ಮೇಲೆ ಧ್ವಜವನ್ನೆತ್ತಿರಿ. ಜನರನ್ನು ಕರೆಯಿರಿ; ಕೈಸನ್ನೆ ಮಾಡಿರಿ; ದ್ವಾರಗಳ ಮೂಲಕ ಪ್ರವೇಶಿಸಲು ಪ್ರಮುಖರಿಗೆ ಹೇಳಿರಿ.


ಬಾಬಿಲೋನ್ ಯೆಹೋವನ ಕೈಯಲ್ಲಿನ ಬಂಗಾರದ ಪಾತ್ರೆಯಂತಿತ್ತು. ಲೋಕವೆಲ್ಲವೂ ಮದ್ಯಪಾನ ಮಾಡುವಂತೆ ಬಾಬಿಲೋನ್ ಮಾಡಿತು. ಜನಾಂಗಗಳು ಬಾಬಿಲೋನಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.


ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ಬಳಿಕ ಅವರು, “ನಾವು ನಮಗಾಗಿ ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವಂಥ ಗೋಪುರವನ್ನೂ ಕಟ್ಟಿದರೆ ನಾವು ಪ್ರಸಿದ್ಧರಾಗುತ್ತೇವೆ. ಆಗ ನಾವು ಭೂಮಿಯಲ್ಲೆಲ್ಲಾ ಚದರಿಹೋಗದೆ ಒಂದೇ ಸ್ಥಳದಲ್ಲಿ ವಾಸಿಸಲು ಸಾಧ್ಯವಾಗುತ್ತದೆ” ಎಂದು ಮಾತಾಡಿಕೊಂಡರು.


ಆದರೆ ಪ್ರಭುವು ಮತ್ತೆ ಪ್ರತ್ಯಕ್ಷನಾಗುವ ದಿನವು ಕಳ್ಳನು ಬರುವಂತೆ ಅನಿರೀಕ್ಷಿತವಾಗಿ ಬರುತ್ತದೆ. ಆಕಾಶವು ಮಹಾ ಘೋಷದೊಂದಿಗೆ ಅದೃಶ್ಯವಾಗುತ್ತದೆ. ಆಕಾಶಮಂಡಲದಲ್ಲಿರುವ ಎಲ್ಲಾ ಸೃಷ್ಟಿಗಳು ಬೆಂಕಿಯಿಂದ ನಾಶವಾಗುತ್ತವೆ. ಈ ಲೋಕವೂ ಅದರಲ್ಲಿರುವ ಸಮಸ್ತವೂ ಸುಟ್ಟುಹೋಗುತ್ತದೆ.


ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು. ನನ್ನ ವೈರಿಗಳು ನನ್ನ ಮೇಲೆ ಕೋಪಗೊಂಡಿದ್ದರೆ, ನನ್ನನ್ನು ಅವರಿಂದ ರಕ್ಷಿಸು.


ಯೆಹೋವನು ತನ್ನ ಆಯುಧಶಾಲೆಯನ್ನು ತೆರೆದಿದ್ದಾನೆ. ಆತನು ತನ್ನ ಆಯುಧಶಾಲೆಯಿಂದ ತನ್ನ ರೋಷದ ಶಸ್ತ್ರಾಸ್ತ್ರಗಳನ್ನು ಹೊರತೆಗೆದಿದ್ದಾನೆ. ತಾನು ಮಾಡಬೇಕಾದ ಕಾರ್ಯಕ್ಕಾಗಿ ಸರ್ವಶಕ್ತನಾದ ಆತನು ಆ ಶಸ್ತ್ರಾಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ. ಕಸ್ದೀಯರ ದೇಶದಲ್ಲಿ ಆತನು ಮಾಡಬೇಕಾದ ಕಾರ್ಯವೊಂದಿದೆ.


“ಆದರೆ ಎಪ್ಪತ್ತು ವರ್ಷಗಳಾದ ಮೇಲೆ ನಾನು ಬಾಬಿಲೋನಿನ ರಾಜನನ್ನೂ ಜನರನ್ನೂ ದಂಡಿಸುವೆನು.” ಇದು ಯೆಹೋವನಿಂದ ಬಂದ ಸಂದೇಶ. “ಅವರ ಪಾಪಗಳಿಗಾಗಿ ನಾನು ಬಾಬಿಲೋನ್ ದೇಶವನ್ನು ದಂಡಿಸುವೆನು. ನಾನು ಶಾಶ್ವತವಾಗಿ ಆ ಭೂಮಿಯನ್ನು ಮರುಭೂಮಿಯನ್ನಾಗಿ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು