Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:27 - ಪರಿಶುದ್ದ ಬೈಬಲ್‌

27 “ಎಲ್ಲಾ ದೇಶಗಳಲ್ಲಿ ಯುದ್ಧದ ಧ್ವಜವನ್ನು ಹಾರಿಸಿರಿ. ಎಲ್ಲಾ ರಾಷ್ಟ್ರಗಳಲ್ಲಿ ತುತ್ತೂರಿಗಳನ್ನು ಊದಿರಿ. ಬಾಬಿಲೋನಿನ ವಿರುದ್ಧ ಹೋರಾಡಲು ಎಲ್ಲಾ ಜನಾಂಗಗಳನ್ನು ಸಿದ್ಧಗೊಳಿಸಿರಿ. ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಜ್ಯಗಳನ್ನು ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಕರೆಯಿರಿ. ಸೈನ್ಯದ ಮುಂದಾಳಾಗಿರಲು ಒಬ್ಬ ಸೇನಾಧಿಪತಿಯನ್ನು ಆರಿಸಿರಿ. ಮಿಡತೆಯ ದಂಡಿನಂತೆ ಅಪಾರವಾಗಿರುವ ಅಶ್ವಬಲವನ್ನು ಕಳುಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ದೇಶದಲ್ಲಿ ಧ್ವಜವನ್ನೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸಿದ್ಧಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಧಿಪತಿಯನ್ನು ನೇಮಿಸಿರಿ, ಅಶ್ವಬಲವನ್ನು ಬಿರುಸಾದ ಮಿಡತೆಯ ದಂಡಿನೋಪಾದಿಯಲ್ಲಿ ಬರಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ನಾಡಿನಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲ ಕೊಂಬೂದಿರಿ, ರಾಷ್ಟ್ರಗಳನ್ನು ಸಜ್ಜುಮಾಡಿರಿ. ಬಾಬಿಲೋನಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿ. ಸೋಲಿಸಬಲ್ಲ ಸೇನಾಪತಿಯನ್ನು ನೇಮಿಸಿರಿ. ಬಿರುಸಾದ ಅಶ್ವಬಲವನ್ನು ಮಿಡತೆಗಳ ದಂಡಿನೋಪಾದಿ ಬರಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ದೇಶದಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸನ್ನಾಹಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ವಿುನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಪತಿಯನ್ನು ನೇವಿುಸಿರಿ, ಅಶ್ವಬಲವನ್ನು ಬಿರುಸಾದ ವಿುಡಿತೆದಂಡಿನೋಪಾದಿಯಲ್ಲಿ ಬರಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರಾರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆಗಳನ್ನು ಬರಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:27
24 ತಿಳಿವುಗಳ ಹೋಲಿಕೆ  

ಗೋಮೆರನ ಗಂಡುಮಕ್ಕಳು: ಅಷ್ಕೆನಸ್, ರೀಫತ್ ಮತ್ತು ತೋಗರ್ಮ.


ಗೋಮೆರನ ಗಂಡುಮಕ್ಕಳು: ಅಷ್ಕೆನಜ್, ರೀಫತ್ ಮತ್ತು ತೊಗರ್ಮ.


ಬಾಬಿಲೋನಿನ ಕೋಟೆಗೋಡೆಯ ವಿರುದ್ಧ ಧ್ವಜವನ್ನು ಎತ್ತಿ ಹಾರಿಸಿರಿ. ಹೆಚ್ಚಿನ ಸಂಖ್ಯೆಯಲ್ಲಿ ಕಾವಲುಗಾರರನ್ನು ಕರೆದುತನ್ನಿರಿ. ಯೋಧರನ್ನು ಅವರವರ ಸ್ಥಾನಗಳಲ್ಲಿ ನಿಲ್ಲಿಸಿರಿ. ಗುಪ್ತವಾಗಿ ಧಾಳಿ ಮಾಡುವುದಕ್ಕೆ ಸಿದ್ಧರಾಗಿರಿ. ಯೆಹೋವನು ತನ್ನ ಯೋಜನೆಗಳಂತೆ ಕಾರ್ಯ ನೆರವೇರಿಸುವನು. ಯೆಹೋವನು ಬಾಬಿಲೋನಿನ ಜನರ ವಿರುದ್ಧ ಹೇಳಿರುವಂತೆಯೇ ಮಾಡುವನು.


“ಎಲ್ಲಾ ಜನಾಂಗಗಳಲ್ಲಿ ಪ್ರಚಾರಪಡಿಸಿರಿ, ಒಂದು ಧ್ವಜವನ್ನು ಹಾರಿಸಿ ಈ ಸಂದೇಶವನ್ನೆಲ್ಲಾ ಸಾರಿರಿ. ‘ಬಾಬಿಲೋನ್ ಜನಾಂಗವನ್ನು ವಶಪಡಿಸಿಕೊಳ್ಳಲಾಗುವುದು. ಬೇಲ್ ದೇವತೆ ನಾಚಿಕೆಪಡುವುದು. ಮೆರೋದಾಕ್ ದೇವತೆಯು ಭಯಪಡುವುದು. ಬಾಬಿಲೋನಿನ ವಿಗ್ರಹಗಳು ನಾಚಿಕೆಪಡುವವು. ಅಲ್ಲಿಯ ದೇವತೆಗಳು ಹೆದರಿಕೊಳ್ಳುವವು.’


ಹೌದು, ಬಾಬಿಲೋನಿನ ಜನರು ಅನೇಕ ಜನಾಂಗಗಳ ಮತ್ತು ಅನೇಕ ಮಹಾರಾಜರ ಸೇವೆ ಮಾಡಬೇಕಾಗುವುದು. ಅವರು ಮಾಡಲಿರುವ ದುಷ್ಕೃತ್ಯಗಳಿಗೆಲ್ಲ ತಕ್ಕ ಶಿಕ್ಷೆಯನ್ನು ನಾನು ಅವರಿಗೆ ಕೊಡುವೆನು.”


ಸರ್ವಶಕ್ತನಾದ ಯೆಹೋವನು ತನ್ನ ಮೇಲೆ ಆಣೆ ಇಟ್ಟುಕೊಂಡು ಹೀಗೆ ಹೇಳಿದ್ದಾನೆ: “ಬಾಬಿಲೋನೇ, ನಾನು ಖಂಡಿತವಾಗಿ ನಿನ್ನನ್ನು ವೈರಿ ಸೈನಿಕರಿಂದ ತುಂಬಿಸಿಬಿಡುವೆನು. ಅವರು ಮಿಡತೆಗಳ ಸಮೂಹದಂತೆ ವ್ಯಾಪಿಸುವರು. ಆ ಸೈನಿಕರು ನಿನ್ನ ವಿರುದ್ಧ ಯುದ್ಧದಲ್ಲಿ ಜಯಗಳಿಸುವರು. ಅವರು ನಿನ್ನ ಮೇಲೆ ನಿಂತುಕೊಂಡು ಜಯಘೋಷ ಮಾಡುವರು.”


ಪರ್ವತದ ತುದಿಯಲ್ಲಿ ಧ್ವಜವೇರಿಸಿದರೆ ಹೇಗೆ ಎಲ್ಲರಿಗೂ ಕಾಣಿಸುತ್ತದೋ ಹಾಗೆಯೇ ಜನರು ಅದನ್ನು ಸ್ಪಷ್ಟವಾಗಿ ನೋಡುವರು. ಲೋಕದೊಳಗೆ ವಾಸಿಸುವ ಜನರೆಲ್ಲಾ ಆ ಉನ್ನತ ಬಲಶಾಲಿಗಳಾದ ಜನರಿಗೆ ಸಂಭವಿಸುವ ವಿಷಯಗಳ ವಾರ್ತೆಯನ್ನು ಕೇಳುವರು. ರಣರಂಗದಲ್ಲಿ ತುತ್ತೂರಿಯು ಮೊಳಗುವುದು ಹೇಗೆ ಸ್ಪಷ್ಟವಾಗಿ ಕೇಳಿಸುತ್ತದೋ ಹಾಗೇ ಕೇಳಿಸಿಕೊಳ್ಳುವರು.


ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಮಾಡಲು ನಾನು ಎಲ್ಲಾ ಜನಾಂಗಗಳನ್ನು ಒಟ್ಟಿಗೆ ಸೇರಿಸುವೆನು. ಅವರು ಪಟ್ಟಣವನ್ನು ವಶಪಡಿಸಿಕೊಂಡು ಕಟ್ಟಡಗಳನ್ನೆಲ್ಲಾ ಧ್ವಂಸಮಾಡುವರು. ಹೆಂಗಸರನ್ನು ಬಲಾತ್ಕಾರದಿಂದ ಸಂಭೋಗಿಸುವರು. ಜನಸಂಖ್ಯೆಯ ಅರ್ಧದಷ್ಟು ಜನರು ಸೆರೆಹಿಡಿಯಲ್ಪಡುವರು. ಉಳಿದವರನ್ನು ಪಟ್ಟಣದಿಂದ ಕೊಂಡೊಯ್ಯುವುದಿಲ್ಲ.


ತುತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ.


ಯೆಹೋವನು ಹೀಗೆನ್ನುತ್ತಾನೆ: “ವೈರಿಗಳು ಈಜಿಪ್ಟಿನ ಅರಣ್ಯವನ್ನು (ಸೈನ್ಯವನ್ನು) ಕತ್ತರಿಸುವರು. ಆ ಅರಣ್ಯದಲ್ಲಿ (ಸೈನ್ಯದಲ್ಲಿ) ಅನೇಕ ಮರಗಳಿವೆ (ಸೈನಿಕರಿದ್ದಾರೆ). ಆದರೂ ಅದನ್ನು ಕತ್ತರಿಸಲಾಗುವುದು. ಮಿಡತೆಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ವೈರಿಗಳ ಸೈನಿಕರಿದ್ದಾರೆ. ಆ ಸೈನಿಕರನ್ನು ಯಾರಿಂದಲೂ ಎಣಿಸಲಾಗದು.


ಬೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನ್ನು ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಿರಿ. ಉತ್ತರದಿಕ್ಕಿನಿಂದ ವಿಪತ್ತು ಬರುತ್ತಿರುವುದರಿಂದ ಇವೆಲ್ಲವನ್ನು ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಬರುತ್ತಿದೆ.


ಸನ್ಹೇರೀಬನು ಒಂದು ದಿನ ತನ್ನ ದೇವರಾದ ನಿಸ್ರೋಕನನ್ನು ಆಲಯದಲ್ಲಿ ಆರಾಧಿಸುತ್ತಿದ್ದನು. ಅವನ ಮಕ್ಕಳಾದ ಅದ್ರಮ್ಮೆಲೆಕ್ ಮತ್ತು ಸರೆಚೆರ್ ಅವನನ್ನು ಖಡ್ಗದಿಂದ ಇರಿದುಕೊಂದರು. ನಂತರ ಅದ್ರಮ್ಮೆಲೆಕ್ ಮತ್ತು ಸರೆಚೆರ್ ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಸನ್ಹೇರೀಬನ ಮಗನಾದ ಏಸರ್‌ಹದ್ದೋನನು ಅವನ ನಂತರ ಹೊಸ ರಾಜನಾದನು.


ಮಿದ್ಯಾನ್ಯರು ಬಂದು ಈ ಪ್ರದೇಶದಲ್ಲಿ ಪಾಳೆಯ ಮಾಡಿಕೊಂಡರು. ಅವರು ತಮ್ಮ ಸಂಗಡ ತಮ್ಮ ಕುಟುಂಬದವರನ್ನೂ ಪಶುಗಳನ್ನೂ ತಂದರು. ಅವರು ಮಿಡತೆಗಳ ಗುಂಪಿನಂತೆ ಅಸಂಖ್ಯರಾಗಿದ್ದರು. ಅವರು ಮತ್ತು ಅವರ ಒಂಟೆಗಳು ಅತಿದೊಡ್ಡ ಪ್ರಮಾಣದಲ್ಲಿದ್ದು ಎಣಿಸಲು ಸಾಧ್ಯವಿರಲಿಲ್ಲ. ಇವರೆಲ್ಲರೂ ಇಸ್ರೇಲರ ಪ್ರದೇಶಕ್ಕೆ ನುಗ್ಗಿ ಹಾಳುಮಾಡಿದರು.


ಒಂದು ದಿವಸ ಸನ್ಹೇರೀಬನು ತನ್ನ ದೇವರಾದ ನಿಸ್ರೋಕನ ಮಂದಿರದಲ್ಲಿ ಪೂಜಿಸುತ್ತಿರುವಾಗ ಅವನ ಇಬ್ಬರು ಮಕ್ಕಳಾದ ಅದ್ರಮ್ಮೆಲೆಕ್ ಮತ್ತು ಸರೆಚರ್ ಎಂಬವರು ಅವನನ್ನು ಕತ್ತಿಯಿಂದ ಸಂಹರಿಸಿ ಅರರಾಟ್‌ಗೆ ಪಲಾಯನಗೈದರು. ಅನಂತರ ಸನ್ಹೇರೀಬನ ಮಗ ಏಸರ್‌ಹದ್ದೋನನು ಅಶ್ಶೂರದ ಹೊಸ ಅರಸನಾದನು.


ಉತ್ತರದ ಒಂದು ಜನಾಂಗವು ಬಾಬಿಲೋನಿನ ಮೇಲೆ ಧಾಳಿ ಮಾಡುವುದು. ಆ ಜನಾಂಗವು ಬಾಬಿಲೋನನ್ನು ಒಂದು ಬರಿದಾದ ಮರುಭೂಮಿಯನ್ನಾಗಿ ಮಾಡುವದು. ಅಲ್ಲಿ ಯಾರೂ ವಾಸಮಾಡಲಾರರು. ಪ್ರಾಣಿಗಳು ಮತ್ತು ಮನುಷ್ಯರು ಅಲ್ಲಿಂದ ಪಲಾಯನ ಮಾಡುವರು.”


ಉತ್ತರ ದಿಕ್ಕಿನ ಹಲವು ಜನಾಂಗಗಳನ್ನು ನಾನು ಒಟ್ಟುಗೂಡಿಸಿ ತರುವೆನು. ಆ ಜನಾಂಗಗಳ ಸಮುದಾಯವು ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧವಾಗುತ್ತದೆ. ಬಾಬಿಲೋನ್ ಅವರಿಗೆ ವಶವಾಗುವುದು. ಆ ಜನಾಂಗಗಳ ಜನರು ಬಾಬಿಲೋನಿನ ಮೇಲೆ ಹಲವು ಬಾಣಗಳನ್ನು ಪ್ರಯೋಗ ಮಾಡುವರು. ಆ ಬಾಣಗಳೆಲ್ಲ ಬರಿಗೈಯಲ್ಲಿ ಯುದ್ಧದಿಂದ ಹಿಂದಿರುಗದ ಶೂರ ಸೈನಿಕರಂತಿರುವವು.


ಅದರ ವಿರುದ್ಧ ಯುದ್ಧಕ್ಕಾಗಿ ಜನಾಂಗಗಳನ್ನು ಸಿದ್ಧಮಾಡಿರಿ. ಮೇದ್ಯರ ರಾಜರನ್ನು ಸಿದ್ಧಮಾಡಿರಿ. ಅವರ ಅಧಿಪತಿಗಳನ್ನು ಮತ್ತು ಎಲ್ಲಾ ಮುಖ್ಯ ಅಧಿಕಾರಿಗಳನ್ನು ಸಿದ್ಧಗೊಳಿಸಿರಿ. ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಅವರು ಆಳುವ ಎಲ್ಲಾ ದೇಶಗಳನ್ನು ಸನ್ನದ್ಧಗೊಳಿಸಿರಿ.


ಜನಾಂಗದವರಿಗೆ ಇದನ್ನು ಪ್ರಕಟಿಸು: ಯುದ್ಧಕ್ಕೆ ತಯಾರಾಗಿರಿ! ಶೂರರನ್ನು ಎಚ್ಚರಿಸಿರಿ! ಯುದ್ಧ ವೀರರು ಹತ್ತಿರಕ್ಕೆ ಬರಲಿ; ಅವರು ಬರಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು