Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:29 - ಪರಿಶುದ್ದ ಬೈಬಲ್‌

29 ನೋವಿನಿಂದಲೋ ಎಂಬಂತೆ ಭೂಮಿಯು ನಡುಗುತ್ತದೆ ಮತ್ತು ಹೊರಳಾಡುತ್ತದೆ. ಯೆಹೋವನು ತಾನು ಯೋಚಿಸಿದಂತೆ ಬಾಬಿಲೋನಿಗೆ ಮಾಡಿದಾಗ ಅದು ನಡುಗುತ್ತದೆ. ಬಾಬಿಲೋನನ್ನು ಯಾರೂ ವಾಸಮಾಡದ ಮರುಭೂಮಿಯನ್ನಾಗಿ ಮಾಡಬೇಕೆಂಬುದು ಯೆಹೋವನ ಯೋಜನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದೇಶವೆಲ್ಲಾ ನೊಂದು ನಡುಗುತ್ತದೆ; ಏಕೆಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಪೊಡವಿ ನೊಂದು ನಡುಗುತ್ತಿದೆ! ಏಕೆಂದರೆ ಬಾಬಿಲೋನ್ ದೇಶ ಹಾಳುಬಿದ್ದು ನಿರ್ಜನವಾಗಲಿ ಎಂದು ಸರ್ವೇಶ್ವರ ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪ ಅಚಲವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ದೇಶವೆಲ್ಲಾ ನೊಂದು ನಡುಗುತ್ತದೆ; ಏಕಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ದೇಶವು ನೊಂದು ನಡುಗುವುದು. ಏಕೆಂದರೆ ಬಾಬಿಲೋನ್ ದೇಶವು ನಿರ್ಜನವಾಗಲಿ ಎಂದು ಅದರ ವಿರೋಧವಾಗಿ ಯೆಹೋವ ದೇವರ ಉದ್ದೇಶಗಳು ಸ್ಥಿರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:29
25 ತಿಳಿವುಗಳ ಹೋಲಿಕೆ  

ಬಾಬಿಲೋನಿನ ಪಟ್ಟಣಗಳು ಬರಿದಾದ ಊರುಗಳಾಗುವವು. ಬಾಬಿಲೋನು ಮರುಭೂಮಿಯಾಗುವುದು. ಅದು ನಿರ್ಜನವಾದ ನೆಲವಾಗುವುದು. ಜನರು ಬಾಬಿಲೋನಿನ ಮೂಲಕ ಪ್ರಯಾಣ ಮಾಡಲಾಗದು.


ದಾನ್‌ಕುಲದವರ ಪ್ರದೇಶದಿಂದ ನಾವು ಶತ್ರುಗಳ ಕುದುರೆಗಳ ಕೆನೆತವನ್ನು ಕೇಳುತ್ತಿದ್ದೇವೆ. ಅವುಗಳ ಪಾದಗಳ ಬಡಿತದಿಂದ ಭೂಮಿ ನಡುಗುತ್ತಿದೆ. ಅವರು ನಮ್ಮ ಪ್ರದೇಶವನ್ನು ಮತ್ತು ಅಲ್ಲಿದ್ದ ಎಲ್ಲವನ್ನು ಹಾಳುಮಾಡಲು ಬಂದಿದ್ದಾರೆ. ಅವರು ನಗರವನ್ನು ಮತ್ತು ಅಲ್ಲಿದ್ದ ಎಲ್ಲಾ ಜನರನ್ನು ಹಾಳುಮಾಡಲು ಬಂದಿದ್ದಾರೆ.


ಅದರ ಸಲುವಾಗಿ ಇಡೀ ದೇಶವು ಅಲುಗಾಡುವದು. ಸತ್ತವರಿಗಾಗಿ ದೇಶದ ಪ್ರತಿ ನಿವಾಸಿಯೂ ರೋಧಿಸುವನು. ಈಜಿಪ್ಟಿನ ನೈಲ್ ನದಿಯ ರೀತಿಯಲ್ಲಿ ದೇಶವು ತಿರುಗುಮುರುಗಾಗುವುದು.”


ಯೆಹೋವನು ಬಾಬಿಲೋನಿನ ವಿರುದ್ಧ ಮಾಡಬೇಕೆಂದಿರುವುದನ್ನು ಕೇಳಿರಿ. “ಬಾಬಿಲೋನಿನ ಜನರ ವಿರುದ್ಧ ಯೆಹೋವನು ನಿಶ್ಚಯಿಸಿರುವುದನ್ನು ಕೇಳಿರಿ. ಶತ್ರುವು ಬಾಬಿಲೋನಿನ ಕುರಿಮರಿಗಳನ್ನು (ಜನರನ್ನು) ಕೊಂಡೊಯ್ಯುವನು. ಬಾಬಿಲೋನಿನ ಹುಲ್ಲುಗಾವಲುಗಳು ಸಂಭವಿಸಿದ ನಾಶನಕ್ಕೆ ಬೆದರುವವು.


ದೇವರು ಅವಳ ಮೇಲೆ ತನ್ನ ಕೋಪವನ್ನು ಪ್ರಕಟಿಸುವನು ಆದ್ದರಿಂದ ಅಲ್ಲಿ ಯಾರೂ ವಾಸಮಾಡಲಾರರು. ಬಾಬಿಲೋನ್ ನಗರವು ಸಂಪೂರ್ಣವಾಗಿ ನಿರ್ಜನವಾಗುವುದು. ಬಾಬಿಲೋನಿನಿಂದ ಹಾದುಹೋಗುವವರೆಲ್ಲ ಭಯಪಡುವರು. ಅದಕ್ಕೆ ಉಂಟಾದ ದುರ್ಗತಿಯನ್ನು ನೋಡಿ ಅವರು ತಮ್ಮ ತಲೆಯಾಡಿಸುವರು.


ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.


ದೇವದೂತನು ತನ್ನ ಶಕ್ತಿಯುತವಾದ ಧ್ವನಿಯಿಂದ ಆರ್ಭಟಿಸಿದನು: “ಅವಳು ನಾಶವಾದಳು! ಬಾಬಿಲೋನೆಂಬ ಮಹಾನಗರಿಯು ನಾಶವಾದಳು! ಅವಳು (ಬಾಬಿಲೋನ್) ದೆವ್ವಗಳಿಗೆ ವಾಸಸ್ಥಾನವಾದಳು, ಸಕಲ ಅಶುದ್ಧಾತ್ಮಗಳಿಗೆ ನೆಲೆಯಾದಳು, ಅಶುದ್ಧವಾದ ಮತ್ತು ಅಸಹ್ಯವಾದ ಸಕಲ ಹಕ್ಕಿಗಳಿಗೆ ಆಶ್ರಯವಾದಳು.”


ಅವರ ಮುಂದೆ ಭೂಮಿಯೂ ಆಕಾಶವೂ ನಡುಗುವುದು; ಸೂರ್ಯಚಂದ್ರರು ಕಪ್ಪಾಗಿಹೋಗುವರು; ನಕ್ಷತ್ರಗಳು ಹೊಳಪನ್ನು ಕಳೆದುಕೊಳ್ಳುವುದು.


ಬಾಬಿಲೋನಿನ ರಾಜನು ಆ ಸೈನ್ಯಗಳ ಬಗ್ಗೆ ಕೇಳಿ ಬಹಳ ಗಾಬರಿಗೊಂಡನು; ಹೆದರಿಕೆಯಿಂದ ಅವನ ಕೈಗಳು ಚಲಿಸದಂತಾಗಿವೆ. ಪ್ರಸವವೇದನೆಯಂತೆ ಅವನಿಗೆ ವೇದನೆಯಾಗಿದೆ.”


ನಿನ್ನನ್ನು ನೋಡುವ ಜನರು ನಿನ್ನ ಬಗ್ಗೆ ಯೋಚಿಸುವರು. ನೀನು ಕೇವಲ ಸತ್ತ ಹೆಣವೆಂದು ತಿಳಿದು, “ಭೂಮಿಯ ಮೇಲಿನ ರಾಜ್ಯಗಳಲ್ಲಿ ಮಹಾಭೀತಿಯನ್ನುಂಟು ಮಾಡಿದವನು ಇವನೋ?


ಖಡ್ಗವೇ, ಬಾಬಿಲೋನಿನ ಯಾಜಕರನ್ನೂ ಸುಳ್ಳುಪ್ರವಾದಿಗಳನ್ನೂ ಕೊಲ್ಲು! ಅವರು ಮೂರ್ಖರಂತಾಗುವರು. ಖಡ್ಗವೇ, ಬಾಬಿಲೋನಿನ ಸೈನಿಕರನ್ನು ಕೊಲ್ಲು, ಆ ಸೈನಿಕರು ಭಯಭೀತರಾಗಿರುವರು.


ಬಾಬಿಲೋನ್ ಪತನವಾಗುವುದು. ಆ ಪತನವು ಭೂಮಂಡಲವನ್ನು ಅಲುಗಾಡಿಸುವುದು. ಎಲ್ಲಾ ಜನಾಂಗಗಳ ಜನರು ಬಾಬಿಲೋನಿನ ವಿನಾಶದ ವಿಷಯವನ್ನು ಕೇಳುವರು.”


ನಿಮ್ಮಿಂದ ಜನರಿಗೆ ಮೂಲೆಗಲ್ಲಾಗುವಷ್ಟು ದೊಡ್ಡ ಕಲ್ಲು ಸಹ ಸಿಗಲಾರದು. ಜನರು ತಮ್ಮ ಕಟ್ಟಡದ ಅಸ್ತಿವಾರಕ್ಕಾಗಿ ಒಂದು ಕಲ್ಲುಬಂಡೆಯನ್ನು ಬಾಬಿಲೋನಿನಿಂದ ತೆಗೆದುಕೊಂಡು ಹೋಗಲಾರರು. ಏಕೆಂದರೆ ಶಾಶ್ವತವಾಗಿ ನಿಮ್ಮ ನಗರವು ಒಡೆದ ಕಲ್ಲುಗಳ ಗುಡ್ಡೆಯಾಗುವುದು.” ಯೆಹೋವನು ಹೀಗೆನ್ನುತ್ತಾನೆ:


ಅದರ ವಿರುದ್ಧ ಯುದ್ಧಕ್ಕಾಗಿ ಜನಾಂಗಗಳನ್ನು ಸಿದ್ಧಮಾಡಿರಿ. ಮೇದ್ಯರ ರಾಜರನ್ನು ಸಿದ್ಧಮಾಡಿರಿ. ಅವರ ಅಧಿಪತಿಗಳನ್ನು ಮತ್ತು ಎಲ್ಲಾ ಮುಖ್ಯ ಅಧಿಕಾರಿಗಳನ್ನು ಸಿದ್ಧಗೊಳಿಸಿರಿ. ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಅವರು ಆಳುವ ಎಲ್ಲಾ ದೇಶಗಳನ್ನು ಸನ್ನದ್ಧಗೊಳಿಸಿರಿ.


ಲೋಕದ ಪಾಪವು ತುಂಬಾ ಭಾರವಾಗಿದೆ. ಆ ಭಾರದಿಂದಾಗಿ ಭೂಮಿಯು ಬೀಳುವದು. ಒಂದು ಹಳೆಯ ಮನೆಯಂತೆ ಭೂಮಿಯು ಅಲುಗಾಡುವದು. ಕುಡಿದು ಮತ್ತನಾಗಿ ನೆಲಕ್ಕೆ ಬೀಳುವವನಂತೆ ಭೂಮಿಯು ಇರುವದು. ಭೂಮಿಗೆ ಮುಂದುವರಿಯಲು ಆಗದು.


ಬಾಬಿಲೋನು ನಾಶವಾದ ಕಟ್ಟಡಗಳ ಗುಡ್ಡೆಯಾಗುವುದು. ಬಾಬಿಲೋನು ಕಾಡುನಾಯಿಗಳ ನಿವಾಸವಾಗುವುದು. ಜನರು ಕಲ್ಲುಬಂಡೆಗಳ ಗುಡ್ಡೆಯನ್ನು ನೋಡಿ ಆಶ್ಚರ್ಯಪಡುವರು. ಬಾಬಿಲೋನಿನ ಬಗ್ಗೆ ಜನರು ತಲೆಯಾಡಿಸುವರು. ಬಾಬಿಲೋನು ನಿರ್ಜನ ಪ್ರದೇಶವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು