Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:30 - ಪರಿಶುದ್ದ ಬೈಬಲ್‌

30 ಬಾಬಿಲೋನಿನ ಸೈನಿಕರು ಕಾದಾಡುವದನ್ನು ನಿಲ್ಲಿಸಿದ್ದಾರೆ. ಅವರು ತಮ್ಮ ಕೋಟೆಗಳಲ್ಲಿದ್ದಾರೆ. ಅವರ ಬಲ ನಷ್ಟವಾಗಿದೆ. ಅವರು ಭಯಪಟ್ಟ ಹೆಂಗಸಿನಂತಾಗಿದ್ದಾರೆ. ಬಾಬಿಲೋನಿನ ಮನೆಗಳು ಉರಿಯುತ್ತಿವೆ. ಅದರ ಬಾಗಿಲಿನ ಅಗುಳಿಗಳು ಮುರಿದುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ, ಅವರ ಅಗುಳಿಗಳು ಮುರಿದುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಬಾಬಿಲೋನಿಯದ ಶೂರರು ಯುದ್ಧಕ್ಕೆ ಹಿಂಜರಿದು ಹೆಂಗಸರಂತೆ, ಹೇಡಿಗಳಂತೆ ತಮ್ಮ ಕೋಟೆಗಳಲ್ಲೆ ನಿಂತಿದ್ದಾರೆ. ಅದರ ಹೆಬ್ಬಾಗಿಲುಗಳು ಮುರಿದುಬಿದ್ದಿವೆ. ಅದರ ಮನೆಗೆ ಬೆಂಕಿಯಿಕ್ಕಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಅಬಲರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿಯಿಕ್ಕಿದೆ, ಅದರ ಅಗುಳಿಗಳು ಮುರಿದುಹೋಗಿವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಬಾಬಿಲೋನಿನ ಪರಾಕ್ರಮಶಾಲಿಗಳು ಯುದ್ಧಮಾಡುವುದನ್ನು ಬಿಟ್ಟಿದ್ದಾರೆ; ಅವರ ಭದ್ರಸ್ಥಾನಗಳಲ್ಲಿ ನಿಂತಿದ್ದಾರೆ. ಅವರ ಪರಾಕ್ರಮತನ ತಪ್ಪಿತು; ಅವರು ಬಲಹೀನರಾಗಿದ್ದಾರೆ. ಆ ದೇಶದ ನಿವಾಸಗಳನ್ನು ಸುಟ್ಟಿದ್ದಾರೆ; ಅದರ ಹೆಬ್ಬಾಗಿಲುಗಳು ಮುರಿದುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:30
16 ತಿಳಿವುಗಳ ಹೋಲಿಕೆ  

ನಿನೆವೆಯೇ, ನಿನ್ನ ಜನರೆಲ್ಲಾ ಹೆಂಗಸರಂತೆ, ವೈರಿ ಸೈನಿಕರು ಅವರನ್ನು ಹಿಡಿದುಕೊಳ್ಳಲು ತಯಾರಾಗಿದ್ದಾರೆ. ನಿನ್ನ ದೇಶದ ದ್ವಾರಗಳು, ವೈರಿಗಳು ಪ್ರವೇಶಿಸುವಂತೆ ಅಗಲವಾಗಿ ತೆರೆಯಲ್ಪಟ್ಟಿವೆ. ದ್ವಾರದ ಬಾಗಿಲಿನ ಅಡ್ಡಪಟ್ಟಿಯು ಬೆಂಕಿಯಿಂದ ಸುಟ್ಟಿರುತ್ತದೆ.


ಜೆರುಸಲೇಮಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಹೋಗಿವೆ. ಆತನು ಹೆಬ್ಬಾಗಿಲುಗಳ ಸರಳುಗಳನ್ನು ಮುರಿದು ಚೂರುಚೂರು ಮಾಡಿದ್ದಾನೆ. ಅವಳ ರಾಜನು ಮತ್ತು ರಾಜಕುಮಾರರು ಅನ್ಯಜನಾಂಗಗಳ ಮಧ್ಯದಲ್ಲಿದ್ದಾರೆ. ಆ ಜನರಿಗೆ ಉಪದೇಶ ಮಾಡಲು ಯಾರೂ ಇಲ್ಲ. ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನಗಳೂ ಇಲ್ಲ.


ಆ ಸಮಯದಲ್ಲಿ ಈಜಿಪ್ಟಿನವರು ಭಯದಿಂದ ಕಂಗೆಟ್ಟ ಹೆಂಗಸರಂತಿರುವರು. ಅವರು ಸರ್ವಶಕ್ತನಾದವನಿಗೆ ಭಯಪಡುವರು. ಯೆಹೋವನು ಜನರನ್ನು ಶಿಕ್ಷಿಸಲು ತನ್ನ ಕೈಯನ್ನೆತ್ತುವನು. ಆಗ ಅವರೆಲ್ಲರೂ ಹೆದರಿಹೋಗುವರು.


ಆ ಸೈನಿಕರು ತಾವೇ ಶಕ್ತಿವಂತರೆಂದುಕೊಂಡಿದ್ದರು. ಆದರೆ ಈಗ ಅವರು ಬಯಲುಗಳಲ್ಲಿ ಸತ್ತುಬಿದ್ದಿದ್ದಾರೆ. ಅವರು ಧರಿಸಿಕೊಂಡಿದ್ದವುಗಳನ್ನೆಲ್ಲ ಸುಲಿಗೆ ಮಾಡಲಾಗಿದೆ. ಆ ಸೈನಿಕರಲ್ಲಿ ಯಾರೂ ತಮ್ಮನ್ನು ಸಂರಕ್ಷಿಸಿಕೊಳ್ಳಲಾಗಲಿಲ್ಲ.


“ನಾನು ದಮಸ್ಕದ ಹೆಬ್ಬಾಗಿಲುಗಳನ್ನೂ ಒಡೆದುಹಾಕುವೆನು; ಆವೆನ್ ಕಣಿವೆಯಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ತೆಗೆದುಬಿಡುವೆನು; ಬೇತ್ ಎದೆನ್‌ನಲ್ಲಿರುವ ಸಾಮರ್ಥ್ಯದ ಗುರುತನ್ನು ಕಿತ್ತುಹಾಕುವೆನು. ಆಗ ಅರಾಮ್ಯರು ಸೋಲಿಸಲ್ಪಟ್ಟವರಾಗಿ ಕೀರ್ ಎಂಬಲ್ಲಿಗೆ ಕೊಂಡೊಯ್ಯುವರು. ಇದು ಯೆಹೋವನ ನುಡಿ.”


ಮೋವಾಬಿನ ಪಟ್ಟಣಗಳನ್ನು ಗೆದ್ದುಕೊಳ್ಳಲಾಗುವುದು. ಅಡಗಿಕೊಳ್ಳುವ ಭದ್ರವಾದ ನೆಲೆಗಳನ್ನು ವಶಪಡಿಸಿಕೊಳ್ಳಲಾಗುವುದು. ಆಗ ಮೋವಾಬಿನ ಸೈನಿಕರು ಪ್ರಸವವೇದನೆಪಡುವ ಹೆಂಗಸಿನಂತೆ ಗಾಬರಿಯಾಗುವರು.


ಅವಳ ಯಾತನೆಯನ್ನು ಕಂಡು ರಾಜರುಗಳು ಭಯದಿಂದ ದೂರನಿಂತು ಹೀಗೆನ್ನುವರು: ‘ಅಯ್ಯೋ, ಅಯ್ಯೋ, ಮಹಾನಗರಿಯೇ, ಬಲಿಷ್ಠವಾದ ಬಾಬಿಲೋನ್ ಪಟ್ಟಣವೇ, ಒಂದೇ ಗಳಿಗೆಯಲ್ಲಿ ನಿನಗೆ ದಂಡನೆ ಆಯಿತಲ್ಲಾ!’


ಬಾಬಿಲೋನಿನ ಮುಖ್ಯ ಅಧಿಕಾರಿಗಳಿಗೂ ಪಂಡಿತರಿಗೂ ದ್ರಾಕ್ಷಾರಸ ಕುಡಿಯುವಂತೆ ಮಾಡುತ್ತೇನೆ. ಅಲ್ಲಿಯ ಅಧಿಪತಿಗಳಿಗೂ ಅಧಿಕಾರಿಗಳಿಗೂ ಸೈನಿಕರಿಗೂ ದ್ರಾಕ್ಷಾರಸ ಕುಡಿಸುತ್ತೇನೆ. ಆಮೇಲೆ ಅವರು ಶಾಶ್ವತವಾಗಿ ಮಲಗಿಬಿಡುತ್ತಾರೆ. ಅವರು ಎಚ್ಚರಗೊಳ್ಳುವುದೇ ಇಲ್ಲ.” ಸರ್ವಶಕ್ತನಾದ ಯೆಹೋವನೆಂಬ ನಾಮಧೇಯದ ರಾಜಾಧಿರಾಜನ ನುಡಿಯಿದು.


ಹಾಯ್ಗಡಗಳನ್ನು ವಶಪಡಿಸಿಕೊಂಡಿದ್ದಾರೆ; ಜವುಗು ನೆಲವು ಉರಿಯುತ್ತಿದೆ. ಬಾಬಿಲೋನಿನ ಎಲ್ಲಾ ಸೈನಿಕರು ಅಂಜಿಕೊಂಡಿದ್ದಾರೆ.”


ಜೆರುಸಲೇಮೇ, ದೇವರು ನಿನ್ನ ಬಾಗಿಲುಗಳ ಸರಳುಗಳನ್ನು ಬಲಪಡಿಸುವನು; ನಿನ್ನ ನಗರದಲ್ಲಿರುವ ಜನರನ್ನು ಆಶೀರ್ವದಿಸುವನು.


ನಮ್ಮ ಶತ್ರುಗಳನ್ನು ಸೋಲಿಸಲು ದೇವರು ನಮಗೆ ಸಹಾಯಮಾಡುವನು. ಅವರ ತಾಮ್ರದ ಬಾಗಿಲುಗಳನ್ನು ಆತನು ಮುರಿದುಹಾಕಬಲ್ಲನು. ಅವರ ಬಾಗಿಲುಗಳ ಮೇಲಿರುವ ಕಬ್ಬಿಣದ ಸರಳುಗಳನ್ನು ಆತನು ನುಚ್ಚುನೂರು ಮಾಡಬಲ್ಲನು.


ಆದರೆ ಆ ಮನುಷ್ಯರಿಗೆ ತಮ್ಮನ್ನೇ ರಕ್ಷಿಸಲು ಅಸಾಧ್ಯವಾಗುವದು. ಅವರು ಹುಲ್ಲಿನಂತೆ ಸುಟ್ಟುಹೋಗುವರು. ರೊಟ್ಟಿಸುಡಲು ಕೆಂಡಗಳು ಕಾಣಿಸದಂತೆಯೂ ಚಳಿ ಕಾಯಿಸಿಕೊಳ್ಳಲು ಬೆಂಕಿ ಇರದಂತೆಯೂ ಅವರು ಕ್ಷಣಕಾಲದಲ್ಲಿ ಸುಟ್ಟುಹೋಗುವರು.


ಬಾಬಿಲೋನಿನ ಸುತ್ತಲೂ ಇರುವ ಸೈನಿಕರೇ, ಜಯಘೋಷಮಾಡಿರಿ. ಈಗ ಬಾಬಿಲೋನ್ ಶರಣಾಗತವಾಗಿದೆ. ಅದರ ಪೌಳಿಗೋಡೆಗಳನ್ನು ಮತ್ತು ಕೊತ್ತಲಗಳನ್ನು ಬೀಳಿಸಲಾಗಿದೆ. ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿದ್ದಾನೆ. ಎಲ್ಲಾ ಜನಾಂಗಗಳವರು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು