Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:36 - ಪರಿಶುದ್ದ ಬೈಬಲ್‌

36 ಯೆಹೋವನು ಹೀಗೆನ್ನುವನು: “ಯೆಹೂದವೇ, ನಾನು ನಿನ್ನನ್ನು ರಕ್ಷಿಸುವೆನು. ನಿಶ್ಚಿತವಾಗಿ ಬಾಬಿಲೋನಿಗೆ ಶಿಕ್ಷೆ ಆಗುವಂತೆ ನಾನು ನೋಡಿಕೊಳ್ಳುತ್ತೇನೆ. ನಾನು ಬಾಬಿಲೋನಿನ ಸಮುದ್ರವನ್ನು ಒಣಗಿಸಿಬಿಡುವೆನು. ಅದರ ನೀರಿನ ಚಿಲುಮೆಗಳು ಬತ್ತುವಂತೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ನಿನ್ನ ಪರವಾಗಿ ವ್ಯಾಜ್ಯಮಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು. ಅದರ ಸರೋವರ ಬತ್ತಿಹೋಗುವಂತೆಯೂ ಅದರ ಪ್ರವಾಹ ಒಣಗಿಹೋಗುವಂತೆಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆದದರಿಂದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನ್ನ ಪಕ್ಷವಾಗಿ ವ್ಯಾಜ್ಯವಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ. “ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ. ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ. ಅದರ ಸಮುದ್ರವನ್ನು ಒಣಗಿಸುತ್ತೇನೆ. ಅದರ ಬುಗ್ಗೆಯನ್ನು ಬತ್ತಿಹೋಗುವಂತೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:36
24 ತಿಳಿವುಗಳ ಹೋಲಿಕೆ  

ನನ್ನ ಸ್ನೇಹಿತರೇ, ನಿಮಗೆ ಕೇಡುಮಾಡುವ ಜನರನ್ನು ದಂಡಿಸಲು ಪ್ರಯತ್ನಿಸಬೇಡಿ. ದೇವರು ತನ್ನ ಕೋಪದಿಂದ ಅವರನ್ನು ದಂಡಿಸುವವರೆಗೆ ಕಾದುಕೊಂಡಿರಿ. “ನಾನೇ ದಂಡಿಸುವವನು; ನಾನೇ ಜನರಿಗೆ ಮುಯ್ಯಿತೀರಿಸುವವನು ಎಂದು ಪ್ರಭುವು ಹೇಳುತ್ತಾನೆ” ಎಂಬುದಾಗಿ ಬರೆಯಲ್ಪಟ್ಟಿದೆ.


ಬಾಬಿಲೋನಿನ ನೀರಿನ ಮೇಲೆ ಒಂದು ಖಡ್ಗ ಬೀಳಲಿ. ಆ ನೀರು ಬತ್ತಿಹೋಗುವದು. ಬಾಬಿಲೋನ್ ದೇಶದಲ್ಲಿ ಅನೇಕಾನೇಕ ವಿಗ್ರಹಗಳಿವೆ. ಬಾಬಿಲೋನಿನ ಜನರು ಮೂರ್ಖರೆಂಬುದನ್ನು ಆ ವಿಗ್ರಹಗಳು ತೋರಿಸುತ್ತವೆ. ಆ ಜನರಿಗೆ ದುರ್ಗತಿ ಬರುತ್ತದೆ.


ಯೆಹೋವನು ದೀನರಿಗೆ ನ್ಯಾಯವಾದ ತೀರ್ಪನ್ನು ಪಾಲಿಸುತ್ತಾನೆಂದು ನನಗೆ ಗೊತ್ತಿದೆ. ದೇವರು ಅಸಹಾಯಕರಿಗೆ ಸಹಾಯಮಾಡುವನು.


ಆಳವಾದ ನೀರಿಗೆ, “ಒಣಗಿಹೋಗು, ನಿನ್ನ ಬುಗ್ಗೆಗಳನ್ನು ನಾನು ಬತ್ತಿಸುವೆನು” ಎಂದು ಯೆಹೋವನು ಅನ್ನುತ್ತಾನೆ.


“ಭೂಲೋಕವೆಲ್ಲಾ ದೇವಜನರಿಗಾಗಿ ಸಂತೋಷಿಸುವದು; ಯಾಕೆಂದರೆ ಆತನು ಅವರನ್ನು ಸಾಯಿಸುವನು; ತನ್ನ ಸೇವಕರನ್ನು ಸಂಹರಿಸುವವರನ್ನು ಶಿಕ್ಷಿಸುವನು; ತನ್ನ ವೈರಿಗಳಿಗೆ ತಕ್ಕ ದಂಡನೆ ಕೊಡುವನು. ತನ್ನ ದೇಶವನ್ನೂ ತನ್ನ ಜನರನ್ನೂ ಶುದ್ಧಿ ಮಾಡುವನು.”


ಅವರ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರು ಜಾರಿ ಕೆಟ್ಟಕಾರ್ಯಗಳನ್ನು ಮಾಡಿದಾಗ ನಾನು ಅವರನ್ನು ಶಿಕ್ಷಿಸುವೆನು. ಅವರ ಮಹಾಸಂಕಟ ಕಾಲವು ಹತ್ತಿರವೇ ಇದೆ. ಅವರಿಗೋಸ್ಕರ ಸಿದ್ಧವಾಗಿರುವ ಶಿಕ್ಷೆಯು ಬೇಗನೆ ಬರುತ್ತದೆ.’


ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರಟಿಸ್ ಮಹಾನದಿಯ ಮೇಲೆ ಸುರಿಸಿದನು. ನದಿಯಲ್ಲಿದ್ದ ನೀರು ಬತ್ತಿಹೋಯಿತು. ಇದರಿಂದ ಪೂರ್ವದಲ್ಲಿದ್ದ ರಾಜರುಗಳು ಬರಲು ಮಾರ್ಗವು ಸಿದ್ಧವಾಯಿತು.


ಬಾಬಿಲೋನಿನಿಂದ ದೂರ ಓಡಿಹೋಗಿರಿ. ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕಾಗಿ ಓಡಿಹೋಗಿರಿ. ಇಲ್ಲವಾದರೆ ಬಾಬಿಲೋನಿನ ಪಾಪದಿಂದ ನೀವೂ ಮರಣಕ್ಕೆ ಗುರಿಯಾಗುವಿರಿ. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದೇವರು ಬಾಬಿಲೋನಿನ ಜನರನ್ನು ಶಿಕ್ಷಿಸುವ ಕಾಲವಿದು. ಅದು ತಕ್ಕ ಶಿಕ್ಷೆಯನ್ನು ಪಡೆಯುವುದು.


ಇಸ್ರೇಲರ ಪರಿಶುದ್ಧನೇ, ನಿಮ್ಮನ್ನು ರಕ್ಷಿಸುವಾತನು. ಯೆಹೋವನು ಹೇಳುವುದೇನೆಂದರೆ: “ನಾನು ನಿಮಗೋಸ್ಕರ ಬಾಬಿಲೋನಿಗೆ ಸೈನ್ಯವನ್ನು ಕಳುಹಿಸುವೆನು. ಎಷ್ಟೋ ಮಂದಿ ಸೆರೆಹಿಡಿಯಲ್ಪಡುವರು. ಕಲ್ದೀಯ ಜನರು ಅವರ ಹಡಗುಗಳಿಂದಲೇ ಒಯ್ಯಲ್ಪಡುವರು. (ಅವರು ಆ ಹಡಗುಗಳ ಬಗ್ಗೆ ಬಹು ಹೆಮ್ಮೆಯಿಂದಿದ್ದಾರೆ.)


ಇಲ್ಲವಾದರೆ ಯೆಹೋವನು ನಿನಗೆ ವಿರೋಧವಾಗುವನು; ಯೆಹೋವನು ಬಲಿಷ್ಠನೂ ಅನಾಥರ ಪರವಾಗಿ ವಾದಿಸುವವನೂ ಆಗಿದ್ದಾನೆ.


ಯಾಕೆಂದರೆ ಯೆಹೋವನು ಅವರ ಪರವಾಗಿ ವಾದಿಸುವನು; ಅವರನ್ನು ದರೋಡೆ ಮಾಡಬೇಕೆಂದಿರುವವರ ಪ್ರಾಣಗಳನ್ನು ತೆಗೆದುಹಾಕುವನು.


ಆತನು ನದಿಗಳನ್ನು ಮರಳುಗಾಡನ್ನಾಗಿ ಮಾರ್ಪಡಿಸಿದನು; ಹರಿಯುವ ಒರತೆಗಳನ್ನು ತಡೆದು ನಿಲ್ಲಿಸಿದನು.


ನೈಲ್ ನದಿಯು ಬತ್ತಿಹೋಗುವದು. ಪ್ರವಾಹದ ನೀರು ಇಲ್ಲವಾಗುವದು.


ನಿಮ್ಮ ಬಾಣಗಳನ್ನು ಮಸೆಯಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಯೆಹೋವನು ಮೇದ್ಯರ ರಾಜರನ್ನು ಪ್ರಚೋದಿಸಿದ್ದಾನೆ. ಬಾಬಿಲೋನನ್ನು ನಾಶಪಡಿಸಬೇಕೆಂಬ ಉದ್ದೇಶದಿಂದ ಆತನು ಅವರನ್ನು ಪ್ರಚೋದಿಸಿದ್ದಾನೆ. ಯೆಹೋವನು ಬಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಾನೆ. ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ ಆಲಯವನ್ನು ನಾಶಮಾಡಿತು. ಆದ್ದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುವನು.


ಇಸ್ರೇಲ್ ತನ್ನ ಸಹೋದರರ ಮಧ್ಯದಲ್ಲಿ ಬೆಳೆಯುವನು. ಒಂದು ಬಲವಾದ ಪೂರ್ವದಿಕ್ಕಿನ ಗಾಳಿಯು ಬರುವದು. ಯೆಹೋವನ ಗಾಳಿಯು ಮರುಭೂಮಿಯಿಂದ ಬೀಸುವದು. ಅವನ ನೀರಿನ ಒರತೆಯು ಒಣಗಿಹೋಗುವದು, ಆ ಗಾಳಿಯು ಇಸ್ರೇಲರ ಐಶ್ವರ್ಯವನ್ನೆಲ್ಲಾ ಎತ್ತಿಕೊಂಡು ಹೋಗಿಬಿಡುವದು.


ನಾನು ನನ್ನ ಇಸ್ರೇಲ್ ಜನರನ್ನು ಉಪಯೋಗಿಸಿ ಎದೋಮ್ಯರಿಗೆ ಮುಯ್ಯಿ ತೀರಿಸುವೆನು. ಈ ರೀತಿಯಾಗಿ ಎದೋಮಿನ ಮೇಲಿರುವ ನನ್ನ ಕೋಪವನ್ನು ಇಸ್ರೇಲರು ಅವರಿಗೆ ತೋರಿಸುವರು. ಆಗ ಎದೋಮ್ಯರು ನಾನು ಅವರನ್ನು ಶಿಕ್ಷಿಸಿದ್ದೇನೆಂದು ತಿಳಿದುಕೊಳ್ಳುವರು.” ಇದು ನನ್ನ ಒಡೆಯನಾದ ಯೆಹೋವನ ವಾಕ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು