ಯೆರೆಮೀಯ 51:39 - ಪರಿಶುದ್ದ ಬೈಬಲ್39 ಆ ಜನರು ಬಲಶಾಲಿಗಳಾದ ಸಿಂಹಗಳಂತೆ ವರ್ತಿಸುತ್ತಿದ್ದಾರೆ. ನಾನು ಅವರಿಗೊಂದು ಔತಣವನ್ನೇರ್ಪಡಿಸುವೆನು. ಅವರಿಗೆ ಮತ್ತೇರುವಂತೆ ಕುಡಿಸುವೆನು. ಅವರು ನಗುನಗುತ್ತಾ ಸಂತೋಷದಿಂದ ಕಾಲ ಕಳೆಯುವರು. ಆಮೇಲೆ ಅವರು ಶಾಶ್ವತವಾಗಿ ಮಲಗುವರು. ಅವರು ಮತ್ತೆ ಏಳಲಾರರು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅವರು ಹೊಟ್ಟೆಬಾಕರು, ನಾನು ಅವರಿಗೆ ಔತಣವನ್ನು ಸಿದ್ಧಪಡಿಸುವೇನು, ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರುವ ಮಟ್ಟಿಗೆ ಕುಡಿಸುವೆನು. ಇದು ಯೆಹೋವನ ನುಡಿ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಅವರು ಹೊಟ್ಟೆಬಾಕರೇ ಸರಿ. ಅವರಿಗೆ ಔತಣವನ್ನು ಸಿದ್ಧಮಾಡುವೆನು. ತಿಂದು ಸಂಭ್ರಮಪಡುವಂತೆ ಮಾಡುವೆನು. ತಲೆಗೇರುವತನಕ ಕುಡಿಸಿ ಎಂದಿಗೂ ಎಚ್ಚರಗೊಳ್ಳದೆ ಚಿರನಿದ್ರೆಯಲ್ಲಿರುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಅವರು ಉರಿಗೊಂಡಿರುವಾಗ ನಾನು ಅವರಿಗೆ ಔತಣವನ್ನು ಸಿದ್ಧಪಡಿಸಿ ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರ ಕುಡಿಸುವೆನು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಅವರು ಉರಿಗೊಂಡಿರುವಾಗ, ನಾನು ಅವರಿಗೆ ಔತಣವನ್ನು ಸಿದ್ಧಪಡಿಸಿ, ಅವರು ಅದರಿಂದ ಸಂಭ್ರಮಪಟ್ಟು, ಎಂದಿಗೂ ಎಚ್ಚರಗೊಳ್ಳದೆ, ದೀರ್ಘ ನಿದ್ರೆ ಮಾಡುವಂತೆ ತಲೆಗೇರುವತನಕ ಕುಡಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |