ಯೆರೆಮೀಯ 51:45 - ಪರಿಶುದ್ದ ಬೈಬಲ್45 ನನ್ನ ಜನರೇ, ಬಾಬಿಲೋನ್ ನಗರದಿಂದ ಹೊರಗೆ ಬನ್ನಿ. ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಲು ಓಡಿಹೋಗಿರಿ. ಯೆಹೋವನ ಭಯಂಕರ ಕೋಪದಿಂದ ತಪ್ಪಿಸಿಕೊಳ್ಳಲು ಓಡಿಹೋಗಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ನನ್ನ ಜನರೇ, ನೀವೆಲ್ಲರೂ ಬಾಬೆಲಿನೊಳಗಿಂದ ಹೊರಟು ಯೆಹೋವನ ರೋಷಾಗ್ನಿಯಿಂದ ತಪ್ಪಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ನನ್ನ ಜನರೇ, ಬಾಬಿಲೋನನ್ನು ಬಿಟ್ಟು ಹೊರಡಿ. ನನ್ನ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ನನ್ನ ಜನರೇ, ನೀವೆಲ್ಲರೂ ಬಾಬೆಲಿನೊಳಗಿಂದ ಹೊರಟು ಯೆಹೋವನ ರೋಷಾಗ್ನಿಯಿಂದ ತಪ್ಪಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 “ನನ್ನ ಜನರೇ, ಅದರೊಳಗಿಂದ ಹೊರಡಿರಿ. ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ಯೆಹೋವ ದೇವರ ಕೋಪಕ್ಕೆ ತಪ್ಪಿಸಿರಿ. ಅಧ್ಯಾಯವನ್ನು ನೋಡಿ |
ಬಾಬಿಲೋನಿನ ಜನರು ಓಡಿಹೋಗುತ್ತಿದ್ದಾರೆ. ಅವರು ಆ ದೇಶದಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾರೆ. ಆ ಜನರು ಚೀಯೋನಿಗೆ ಬಂದು ಬಾಬಿಲೋನಿನಲ್ಲಿ ಯೆಹೋವನು ಮಾಡುತ್ತಿದ್ದ ವಿನಾಶದ ಬಗ್ಗೆ ಎಲ್ಲರಿಗೂ ಹೇಳುತ್ತಿದ್ದಾರೆ. ಯೆಹೋವನು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿರುವದರ ಬಗ್ಗೆ ಹೇಳುತ್ತಿದ್ದಾರೆ. ಬಾಬಿಲೋನ್ ಯೆಹೋವನ ಆಲಯವನ್ನು ನಾಶಮಾಡಿತು. ಆದ್ದರಿಂದ ಈಗ ಯೆಹೋವನು ಬಾಬಿಲೋನನ್ನು ನಾಶಮಾಡುತ್ತಿದ್ದಾನೆ ಎಂದು ಹೇಳುತ್ತಿದ್ದಾರೆ.