ಯೆರೆಮೀಯ 51:46 - ಪರಿಶುದ್ದ ಬೈಬಲ್46 “ನನ್ನ ಜನರೇ, ದುಃಖಿಸಬೇಡಿ, ಸುದ್ದಿಗಳು ಹಬ್ಬುತ್ತವೆ. ಆದರೆ ಹೆದರಬೇಡಿ. ಒಂದು ಸುದ್ದಿ ಈ ವರ್ಷ ಬರುವುದು. ಮುಂದಿನ ವರ್ಷ ಮತ್ತೊಂದು ಸುದ್ದಿ ಬರಬಹುದು. ದೇಶದಲ್ಲಿ ಭಯಂಕರವಾದ ಯುದ್ಧದ ಬಗ್ಗೆ ಸುದ್ದಿಗಳು ಕೇಳಿಬರುವವು. ರಾಜರುಗಳು ಬೇರೆ ರಾಜರುಗಳೊಂದಿಗೆ ಯುದ್ಧ ಮಾಡುತ್ತಿರುವ ವದಂತಿಗಳು ಕೇಳಿಬರುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ನಿಮ್ಮ ಎದೆಯು ಕುಂದದಿರಲಿ, ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಯು ನಿಮ್ಮನ್ನು ಹೆದರಿಸದಿರಲಿ; ಒಂದು ವರ್ಷ ಒಂದು ಸುದ್ದಿಯು, ಮತ್ತೊಂದು ವರ್ಷ ಮತ್ತೊಂದು ಸುದ್ದಿಯು ಹರಡುತ್ತಿರುವವು; ಬಲಾತ್ಕಾರವು ದೇಶದಲ್ಲಿ ಪ್ರಬಲವಾಗುವುದು, ಅಧಿಕಾರಿಯು ಅಧಿಕಾರಿಗೆ ವಿರೋಧಿಯಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ನಿಮ್ಮ ಎದೆ ಕುಂದದಿರಲಿ. ನಾಡಿನಲ್ಲಿ ಕಿವಿಗೆ ಬೀಳುವ ಸುದ್ದಿ ನಿಮ್ಮನ್ನು ಹೆದರಿಸದಿರಲಿ. ಒಂದು ವರ್ಷ ಒಂದು ಸುದ್ದಿಯಾದರೆ ಮತ್ತೊಂದು ವರ್ಷ ಮತ್ತೊಂದು ಸುದ್ದಿ. ಹಿಂಸಾಚಾರ ಪ್ರಬಲವಾಗುತ್ತಿದೆ ನಾಡಿನಲ್ಲಿ. ಅಧಿಕಾರಿಗೆ ಅಧಿಕಾರಿಯೇ ವಿರೋಧಿ ಅಲ್ಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ನಿಮ್ಮ ಎದೆಯು ಕುಂದದಿರಲಿ, ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಯು ನಿಮ್ಮನ್ನು ಹೆದರಿಸದಿರಲಿ; ಒಂದು ವರುಷ ಒಂದು ಸುದ್ದಿಯು, ಮತ್ತೊಂದು ವರುಷ ಮತ್ತೊಂದು ಸುದ್ದಿಯು ಹರಡುತ್ತಿರುವವು; ಬಲಾತ್ಕಾರವು ದೇಶದಲ್ಲಿ ಪ್ರಬಲವಾಗುವದು, ಅಧಿಕಾರಿಯು ಅಧಿಕಾರಿಗೆ ವಿರೋಧಿಯಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ನಿಮ್ಮ ಹೃದಯವು ಕುಂದದ ಹಾಗೆ ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಗೆ ನೀವು ಭಯಪಡದ ಹಾಗೆ, ಒಂದು ವರ್ಷದಲ್ಲಿ ಒಂದು ಸುದ್ದಿಯೂ ಇನ್ನೊಂದು ವರ್ಷದಲ್ಲಿ ಇನ್ನೊಂದು ಸುದ್ದಿಯೂ ಬರುವುದು. ದೇಶದಲ್ಲಿ ಬಲಾತ್ಕಾರವಿರುವುದು, ಆಳುವವನು ಆಳುವವನಿಗೆ ವಿರೋಧವಾಗಿರುವನು. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”