ಯೆರೆಮೀಯ 51:49 - ಪರಿಶುದ್ದ ಬೈಬಲ್49 “ಬಾಬಿಲೋನ್ ಇಸ್ರೇಲರನ್ನು ಕೊಂದಿತು. ಬಾಬಿಲೋನ್ ಭೂಮಂಡಲದ ಎಲ್ಲೆಡೆಯ ಜನರನ್ನು ಕೊಂದಿತು. ಅದಕ್ಕಾಗಿ ಬಾಬಿಲೋನ್ ಪತನವಾಗಲೇಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 “ಹತರಾದ ಇಸ್ರಾಯೇಲರೇ, ಬಾಬೆಲಿನ ಹಿತಕ್ಕಾಗಿ ಲೋಕದಲ್ಲೆಲ್ಲಾ ಬಹು ಜನರು ಹೇಗೆ ಹತರಾದರೋ, ಹಾಗೆಯೇ ಬಾಬೆಲೂ ಹತವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಹತರಾದ ಇಸ್ರಯೇಲರೇ, ಬಾಬಿಲೋನಿಯದ ಹಿತಕ್ಕಾಗಿ ಬಹುಜನ ಹತರಾದರು. ಅಂತೆಯೇ ಬಾಬಿಲೋನ್ ಹತವಾಗುವುದು. ಸರ್ವೇಶ್ವರನಾದ ನನ್ನ ನುಡಿ ಇದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಹತರಾದ ಇಸ್ರಾಯೇಲ್ಯರೇ, ಬಾಬೆಲಿನ ಹಿತಕ್ಕಾಗಿ ಲೋಕದಲ್ಲೆಲ್ಲಾ ಬಹುಜನರು ಹೇಗೆ ಹತರಾದರೋ ಹಾಗೆಯೇ ಬಾಬೆಲೂ ಹತವಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 “ಬಾಬಿಲೋನ್‌ನಿಂದಾಗಿ ಭೂಮಿಯಲ್ಲೆಲ್ಲಾ ಹತರಾದಂತೆಯೇ, ಇಸ್ರಾಯೇಲಿನ ಹತ್ಯೆಯಿಂದಾಗಿ ಬಾಬಿಲೋನ್ ಬೀಳಬೇಕು. ಅಧ್ಯಾಯವನ್ನು ನೋಡಿ |
“ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಲು ಬಿಲ್ಲುಗಾರರಿಗೆ ಹೇಳಿರಿ. ಆ ಜನರಿಗೆ ನಗರವನ್ನು ಮುತ್ತಲು ಹೇಳಿರಿ. ಯಾರೂ ತಪ್ಪಿಸಿಕೊಂಡು ಹೋಗದಂತೆ ನೋಡಿಕೊಳ್ಳಿ. ಅದು ಮಾಡಿದ ದುಷ್ಕೃತ್ಯಗಳಿಗಾಗಿ ಮುಯ್ಯಿತೀರಿಸಿರಿ. ಬೇರೆ ಜನಾಂಗಗಳಿಗೆ ಅದು ಮಾಡಿದಂತೆ ಅದಕ್ಕೆ ಮಾಡಿರಿ. ಬಾಬಿಲೋನ್ ಯೆಹೋವನನ್ನು ಗೌರವಿಸಲಿಲ್ಲ. ಪರಿಶುದ್ಧನಿಗೆ ಅವಮಾನ ಮಾಡಿದೆ. ಆದ್ದರಿಂದ ಬಾಬಿಲೋನನ್ನು ಶಿಕ್ಷಿಸಬೇಕು.
ಆಗ ಬೆಜೆಕ್‌ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.