ಯೆರೆಮೀಯ 51:5 - ಪರಿಶುದ್ದ ಬೈಬಲ್5 ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ಮತ್ತು ಯೆಹೂದವನ್ನು ವಿಧವೆಯಾಗಿ ಮಾಡಿಲ್ಲ. ಆತನು ಅವರ ಕೈಬಿಟ್ಟಿಲ್ಲ. ಅವರು ಇಸ್ರೇಲಿನ ಪರಿಶುದ್ಧನನ್ನು ತೊರೆದು ಅಪರಾಧ ಮಾಡಿದರು. ಅವರು ಆತನನ್ನು ತ್ಯಜಿಸಿದರು. ಆದರೆ ಆತನು ಅವರನ್ನು ತ್ಯಜಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇಸ್ರಾಯೇಲರ ಸದಮಲಸ್ವಾಮಿಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ, ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಸ್ರಾಯೇಲನ್ನಾಗಲಿ ಅಥವಾ ಯೆಹೂದವನ್ನಾಗಲಿ ತ್ಯಜಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇಸ್ರಯೇಲರ ಪರಮ ಪಾವನ ಸ್ವಾಮಿಯಾದ ನನಗೆ ನನ್ನ ಜನರು ಮಾಡಿದ ಅಪರಾಧ ತಮ್ಮ ನಾಡಿನಲ್ಲಿ ತುಂಬಿದ್ದರೂ ಸೇನಾಧೀಶ್ವರ ಸರ್ವೇಶ್ವರನೆಂಬ ದೇವರಾದ ನಾನು ಇಸ್ರಯೇಲನ್ನಾಗಲಿ ಜುದೇಯವನ್ನಾಗಲಿ ತ್ಯಜಿಸಿಬಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇಸ್ರಾಯೇಲ್ಯರ ಸದಮಲಸ್ವಾವಿುಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಸ್ರಾಯೇಲನ್ನಾಗಲಿ ಯೆಹೂದವನ್ನಾಗಲಿ ತ್ಯಜಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಏಕೆಂದರೆ ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಸೇನಾಧೀಶ್ವರ ಯೆಹೋವ ದೇವರು ಇಸ್ರಾಯೇಲನ್ನಾಗಲಿ, ಯೆಹೂದವನ್ನಾಗಲಿ ಕೈಬಿಡಲಿಲ್ಲ. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”
ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ, “ನಾನು ಆ ಪ್ರವಾದಿಗಳನ್ನು ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಧಿಯನ್ನು ಪ್ರಾರಂಭಿಸಿದರು. ಆ ವ್ಯಾಧಿಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದ್ದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. ಆ ವ್ಯಾಧಿಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಬಂದಿತು.”
ಯೆಹೂದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಬಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು.
ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”
ಹೌದು, ನಾವು ಗುಲಾಮರಾಗಿದ್ದೆವು. ಆದರೆ ಸದಾಕಾಲ ಗುಲಾಮರಾಗಲು ನೀನು ನಮ್ಮನ್ನು ಬಿಡಲಿಲ್ಲ. ನಮ್ಮ ಮೇಲೆ ನೀನು ದಯೆ ತೋರಿಸಿರುವೆ. ಪರ್ಶಿಯ ರಾಜರು ನಮಗೆ ಕರುಣೆತೋರುವಂತೆ ಮಾಡಿದೆ. ನಿನ್ನ ಆಲಯವು ಹಾಳಾಗಿತ್ತು. ನಿನ್ನ ಆ ಆಲಯವನ್ನು ಮತ್ತೆ ಹೊಸದಾಗಿ ಕಟ್ಟಲು ನೀನು ನಮಗೆ ಹೊಸ ಜೀವವನ್ನು ಕೊಟ್ಟಿರುವೆ. ದೇವರೇ, ಯೆಹೂದ ಮತ್ತು ಜೆರುಸಲೇಮ್‌ಗಳ ಸಂರಕ್ಷಣೆಗಾಗಿ ಗೋಡೆಯನ್ನು ಕಟ್ಟಲು ನೀನು ನಮಗೆ ಸಹಾಯಮಾಡಿದೆ.
ಯೆಹೋವನೇ, ನೀನು ಯೆಹೂದ ಜನಾಂಗವನ್ನು ಸಂಪೂರ್ಣವಾಗಿ ತಿರಸ್ಕರಿಸಿರುವೆಯಾ? ಯೆಹೋವನೇ, ನೀನು ಚೀಯೋನನ್ನು ದ್ವೇಷಿಸುವೆಯಾ? ನಾವು ಪುನಃ ಗುಣಹೊಂದಲಾರದ ಹಾಗೆ ನಮ್ಮನ್ನು ಹೊಡೆದು ಗಾಯಗೊಳಿಸಿರುವೆಯಲ್ಲ. ನೀನು ಹೀಗೇಕೆ ಮಾಡಿದೆ? ನಾವು ನೆಮ್ಮದಿಯನ್ನು ನಿರೀಕ್ಷಿಸಿದೆವು, ಆದರೆ ಒಳ್ಳೆಯದೇನೂ ಆಗಲಿಲ್ಲ. ನಾವು ಕ್ಷೇಮವನ್ನು ಎದುರುನೋಡುತ್ತಿದ್ದೆವು. ಆದರೆ ಕೇವಲ ಭಯ ನಮ್ಮೆದುರಿಗೆ ಬಂದಿತು.