Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:53 - ಪರಿಶುದ್ದ ಬೈಬಲ್‌

53 ಬಾಬಿಲೋನ್ ನಗರವು ಗಗನ ಚುಂಬಿಯಾಗಿ ಬೆಳೆಯಬಹುದು. ಅದು ತನ್ನ ಕೋಟೆಗಳನ್ನು ಭದ್ರಪಡಿಸಿಕೊಳ್ಳಬಹುದು. ಆದರೆ ಆ ನಗರದ ವಿರುದ್ಧ ಯುದ್ಧಮಾಡಲು ನಾನು ಜನರನ್ನು ಕಳುಹಿಸುತ್ತೇನೆ. ಆ ಜನರು ಅದನ್ನು ನಾಶಮಾಡುವರು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಬಾಬೆಲ್ ಆಕಾಶದ ತನಕ ಬೆಳೆದು ಎತ್ತರವಾಗಿಯೂ ಮತ್ತು ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ, ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು.’ ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ಬಾಬಿಲೋನ್ ಆಕಾಶದ ತನಕ ಬೆಳೆದರೂ ಎತ್ತರವಾದ, ಬಲವಾದ ಕೋಟೆಕಟ್ಟಿ ಭದ್ರಪಡಿಸಿಕೊಂಡರೂ ನನ್ನ ಅಪ್ಪಣೆಯ ಮೇರೆಗೆ ಜನರು ಹಾಳುಮಾಡುವರು; ಅದರ ಮೇಲೆ ಬೀಳುವರು. ಸರ್ವೇಶ್ವರನಾದ ನನ್ನ ನುಡಿ ಇದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಬಾಬೆಲು ಆಕಾಶದ ತನಕ ಬೆಳೆದು ಎತ್ತರವಾಗಿಯೂ ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಬಾಬಿಲೋನ್ ಆಕಾಶಕ್ಕೆ ಏರಿದರೂ, ಅದರ ಬಲದ ಉನ್ನತಸ್ಥಾನವನ್ನು ಭದ್ರಮಾಡಿದರೂ, ಸೂರೆಮಾಡುವವರು ನನ್ನಿಂದ ಅವಳಿಗೆ ವಿರೋಧವಾಗಿ ಬರುವರು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:53
29 ತಿಳಿವುಗಳ ಹೋಲಿಕೆ  

ಎದೋಮೇ, ನೀನು ಬೇರೆ ಜನಾಂಗಗಳನ್ನು ಹೆದರಿಸಿದೆ. ಆದ್ದರಿಂದ ನೀನು ನಿನ್ನನ್ನೇ ಪ್ರಮುಖನೆಂದು ಭಾವಿಸಿಕೊಂಡೆ. ಆದರೆ ಅದು ನಿನ್ನ ಮೂರ್ಖತನ. ನಿನ್ನ ಅಹಂಭಾವ ನಿನಗೆ ಮೋಸಮಾಡಿದೆ. ಎದೋಮೇ, ನೀನು ಎತ್ತರದ ಬೆಟ್ಟಗಳಲ್ಲಿರುವೆ. ಬೆಟ್ಟಗುಡ್ಡಗಳಿಂದ ರಕ್ಷಿತವಾದ ಸ್ಥಳಗಳಲ್ಲಿ ನೀನು ವಾಸಿಸುವೆ. ಆದರೆ ರಣಹದ್ದು ಗೂಡುಕಟ್ಟುವಷ್ಟು ಎತ್ತರದ ಸ್ಥಳದಲ್ಲಿ ನೀನು ಮನೆಕಟ್ಟಿದರೂ ನಾನು ನಿನ್ನನ್ನು ಹಿಡಿಯುತ್ತೇನೆ. ಅಲ್ಲಿಂದ ನಿನ್ನನ್ನು ಕೆಳಗೆ ತರುತ್ತೇನೆ.” ಇದು ಯೆಹೋವನ ನುಡಿ.


ಬಳಿಕ ಅವರು, “ನಾವು ನಮಗಾಗಿ ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವಂಥ ಗೋಪುರವನ್ನೂ ಕಟ್ಟಿದರೆ ನಾವು ಪ್ರಸಿದ್ಧರಾಗುತ್ತೇವೆ. ಆಗ ನಾವು ಭೂಮಿಯಲ್ಲೆಲ್ಲಾ ಚದರಿಹೋಗದೆ ಒಂದೇ ಸ್ಥಳದಲ್ಲಿ ವಾಸಿಸಲು ಸಾಧ್ಯವಾಗುತ್ತದೆ” ಎಂದು ಮಾತಾಡಿಕೊಂಡರು.


ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನೇ, ನೀನು ಇಡೀ ದೇಶವನ್ನು ನಾಶಪಡಿಸುವ ಜ್ವಾಲಾಮುಖಿಯಂತಿರುವೆ. ಆದರೆ ನಾನು ನಿನಗೆ ವಿರುದ್ಧವಾಗಿ ತಿರುಗಿದ್ದೇನೆ. ನಾನು ನಿನ್ನನ್ನು ಸುಟ್ಟುಹೋದ ಪರ್ವತವನ್ನಾಗಿ ಮಾಡುವೆನು.


ಶತ್ರುಗಳು ಅವರನ್ನು ಸೆರೆಹಿಡಿದರೆ ನಾನು ಅವರನ್ನು ಕೊಂದುಹಾಕಲು ಕತ್ತಿಗೆ ಆಜ್ಞಾಪಿಸುವೆನು. ಹೌದು ನಾನು ಅವರನ್ನು ಗಮನಿಸುತ್ತಾ ಕಾಯುವೆನು. ಅವರಿಗೆ ಒಳ್ಳೆಯದು ಮಾಡುವುದಕ್ಕಾಗಿ ಅಲ್ಲ. ಅವರಿಗೆ ಸಂಕಟ ಕೊಡುವುದಕ್ಕಾಗಿ ಅವರನ್ನು ಕಾಯುತ್ತೇನೆ.”


ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ಅಗಲವಾದ ಮತ್ತು ಸುಭದ್ರವಾದ ಗೋಡೆಯನ್ನು ಬೀಳಿಸಲಾಗುವುದು. ಅದರ ಎತ್ತರವಾದ ಬಾಗಿಲುಗಳನ್ನು ಸುಟ್ಟುಹಾಕಲಾಗುವುದು. ಬಾಬಿಲೋನಿನ ಜನರು ನಗರವನ್ನು ರಕ್ಷಿಸಲು ಬಹಳ ಕಷ್ಟಪಡುವರು. ಆದರೆ ಅದು ನಿಷ್ಪ್ರಯೋಜಕವಾಗುವುದು. ನಗರವನ್ನು ರಕ್ಷಿಸುವ ಪ್ರಯತ್ನದಲ್ಲಿ ಅವರು ತುಂಬಾ ಶ್ರಮವಹಿಸುವರು. ಆದರೆ ಅವರು ಕೇವಲ ಅಗ್ನಿಗೆ ಆಹುತಿಯಾಗುವರು.”


ಆಗ ಭೂಮ್ಯಾಕಾಶಗಳು ಮತ್ತು ಅವುಗಳಲ್ಲಿರುವ ಸಮಸ್ತ ವಸ್ತುಗಳು ಬಾಬಿಲೋನಿನ ಬಗ್ಗೆ ಹರ್ಷಧ್ವನಿ ಮಾಡುವವು. ಏಕೆಂದರೆ ಸೈನ್ಯವು ಉತ್ತರದಿಂದ ಬಂದಿತು, ಬಾಬಿಲೋನಿನ ವಿರುದ್ಧ ಯುದ್ಧಮಾಡಿತು” ಇದು ಯೆಹೋವನ ನುಡಿ.


ನಿಮ್ಮ ಬಾಣಗಳನ್ನು ಮಸೆಯಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಯೆಹೋವನು ಮೇದ್ಯರ ರಾಜರನ್ನು ಪ್ರಚೋದಿಸಿದ್ದಾನೆ. ಬಾಬಿಲೋನನ್ನು ನಾಶಪಡಿಸಬೇಕೆಂಬ ಉದ್ದೇಶದಿಂದ ಆತನು ಅವರನ್ನು ಪ್ರಚೋದಿಸಿದ್ದಾನೆ. ಯೆಹೋವನು ಬಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಾನೆ. ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ ಆಲಯವನ್ನು ನಾಶಮಾಡಿತು. ಆದ್ದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುವನು.


ಯೆಹೋವನು ಬಾಬಿಲೋನಿನ ವಿರುದ್ಧ ಮಾಡಬೇಕೆಂದಿರುವುದನ್ನು ಕೇಳಿರಿ. “ಬಾಬಿಲೋನಿನ ಜನರ ವಿರುದ್ಧ ಯೆಹೋವನು ನಿಶ್ಚಯಿಸಿರುವುದನ್ನು ಕೇಳಿರಿ. ಶತ್ರುವು ಬಾಬಿಲೋನಿನ ಕುರಿಮರಿಗಳನ್ನು (ಜನರನ್ನು) ಕೊಂಡೊಯ್ಯುವನು. ಬಾಬಿಲೋನಿನ ಹುಲ್ಲುಗಾವಲುಗಳು ಸಂಭವಿಸಿದ ನಾಶನಕ್ಕೆ ಬೆದರುವವು.


ಯೆಹೋವನು ತನ್ನ ಆಯುಧಶಾಲೆಯನ್ನು ತೆರೆದಿದ್ದಾನೆ. ಆತನು ತನ್ನ ಆಯುಧಶಾಲೆಯಿಂದ ತನ್ನ ರೋಷದ ಶಸ್ತ್ರಾಸ್ತ್ರಗಳನ್ನು ಹೊರತೆಗೆದಿದ್ದಾನೆ. ತಾನು ಮಾಡಬೇಕಾದ ಕಾರ್ಯಕ್ಕಾಗಿ ಸರ್ವಶಕ್ತನಾದ ಆತನು ಆ ಶಸ್ತ್ರಾಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ. ಕಸ್ದೀಯರ ದೇಶದಲ್ಲಿ ಆತನು ಮಾಡಬೇಕಾದ ಕಾರ್ಯವೊಂದಿದೆ.


ಯೆಹೋವನು ಹೀಗೆನ್ನುತ್ತಾನೆ: “ಮೆರಾಥಯಿಮ್ ದೇಶದ ಮೇಲೆ ಧಾಳಿ ಮಾಡಿರಿ. ಪೆಕೋದ ಪ್ರದೇಶದಲ್ಲಿ ವಾಸಮಾಡುವ ಜನಗಳ ಮೇಲೆ ಧಾಳಿ ಮಾಡಿರಿ. ಅವರ ಮೇಲೆ ಧಾಳಿ ಮಾಡಿ ಅವರನ್ನು ಕೊಂದು ಸಂಪೂರ್ಣವಾಗಿ ನಾಶಮಾಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಿರಿ.


‘ನಾನು ನಿತ್ಯಕಾಲಕ್ಕೂ ವಾಸಿಸುತ್ತೇನೆ. ನಾನು ಯಾವಾಗಲೂ ರಾಣಿಯಾಗಿಯೇ ಇರುವೆನು’ ಎಂದು ನೀನು ಹೇಳುವೆ. ಅವರಿಗೆ ನೀನು ಮಾಡಿದ ದುಷ್ಟಕ್ರಿಯೆಗಳನ್ನು ನೀನು ಗಮನಿಸಲೇ ಇಲ್ಲ. ಅದರ ಪರಿಣಾಮವನ್ನು ನೀನು ಆಲೋಚಿಸಲೇ ಇಲ್ಲ.


“ಆದ್ದರಿಂದ ಬಾಬಿಲೋನೇ, ಅಲ್ಲಿ ಸುಮ್ಮನೆ ಕುಳಿತಿರು. ಕಸ್ದೀಯರ ಕುಮಾರಿಯೇ ಕತ್ತಲೆಯೊಳಗೆ ಹೋಗಿ ಇರು, ಯಾಕೆಂದರೆ ನೀನು ‘ಜನಾಂಗಗಳ ರಾಣಿ’ ಎಂದು ಇನ್ನು ಮುಂದೆ ಕರೆಯಲ್ಪಡುವದಿಲ್ಲ.


“ಉತ್ತರದಿಕ್ಕಿನಲ್ಲಿರುವ ಒಬ್ಬ ಮನುಷ್ಯನನ್ನು ನಾನು ಎಚ್ಚರಪಡಿಸಿದೆನು. ಅವನು ಪೂರ್ವದಿಕ್ಕಿನಿಂದ ಬರುವನು. ನನ್ನ ನಾಮವನ್ನು ಅವನು ಆರಾಧಿಸುವನು. ಕುಂಬಾರನು ಜೇಡಿಮಣ್ಣನ್ನು ತುಳಿದು ಹದಗೊಳಿಸುವಂತೆ ಅವನು ಅರಸರುಗಳ ಮೇಲೆ ತುಳಿದಾಡುವನು.


ದೇವರು ಹೇಳುವುದೇನೆಂದರೆ: “ಮೇದ್ಯರ ಸೈನ್ಯವು ಬಾಬಿಲೋನನ್ನು ಮುತ್ತುವಂತೆ ಮಾಡುವೆನು. ಮೇದ್ಯರ ಸೈನ್ಯಕ್ಕೆ ಬೆಳ್ಳಿಬಂಗಾರ ಸುರಿಸಿದರೂ ಅವರು ಬಾಬಿಲೋನಿನ ಮೇಲೆ ಧಾಳಿ ಮಾಡುವದನ್ನು ನಿಲ್ಲಿಸುವದಿಲ್ಲ.


ದುಷ್ಟನ ಅಹಂಕಾರವು ಆಕಾಶವನ್ನು ತಲುಪಬಹುದು; ಅವನ ತಲೆಯು ಮೋಡಗಳಿಗೆ ತಗುಲಬಹುದು.


ಸೈನ್ಯವು ಬಂದು ಬಾಬಿಲೋನನ್ನು ನಾಶಮಾಡುವುದು. ಬಾಬಿಲೋನಿನ ಸೈನಿಕರನ್ನು ವಶಪಡಿಸಿಕೊಳ್ಳಲಾಗುವುದು. ಅವರ ಬಿಲ್ಲುಗಳನ್ನು ಮುರಿಯಲಾಗುವುದು. ಏಕೆಂದರೆ ಯೆಹೋವನು ಜನರನ್ನು ಅವರು ಮಾಡುವ ದುಷ್ಕೃತ್ಯಗಳಿಗಾಗಿ ಶಿಕ್ಷಿಸುತ್ತಾನೆ. ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಸಂಪೂರ್ಣವಾಗಿ ಕೊಡುತ್ತಾನೆ.


ಭೂಮಿಯನ್ನು ಅವರು ಅಗೆದು ಅದರೊಳಗೆ ಅವಿತುಕೊಂಡರೆ ಅದರೊಳಗಿಂದ ಅವರನ್ನು ಎಳೆದುಹಾಕುವೆನು. ಆಕಾಶದೊಳಗೆ ಹಾರಿ ತಪ್ಪಸಿಕೊಂಡರೆ ಅಲ್ಲಿಂದಲೂ ನಾನು ಅವರನ್ನು ಎಳೆದುಹಾಕುವೆನು.


“ಹೌದು, ಕೆಟ್ಟದ್ದನ್ನು ಮಾಡಿ ಧನಿಕನಾದವನಿಗೆ ಬಹಳ ಕೇಡಾಗುವುದು. ಆ ಮನುಷ್ಯನು ಒಂದು ಸುರಕ್ಷಿತವಾದ ಸ್ಥಳದಲ್ಲಿ ವಾಸಿಸಲು ಇದನ್ನೆಲ್ಲಾ ಮಾಡುತ್ತಾನೆ. ಹಾಗೆ ಮಾಡುವದರಿಂದ ಬೇರೆ ಜನರು ಅವನಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲವೆಂದು ಅವನು ತಿಳಿಯುತ್ತಾನೆ. ಆದರೆ ಕೆಟ್ಟ ಸಂಗತಿಗಳು ಅವನಿಗೆ ಸಂಭವಿಸುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು