ಯೆರೆಮೀಯ 51:54 - ಪರಿಶುದ್ದ ಬೈಬಲ್54 “ಬಾಬಿಲೋನಿನಲ್ಲಿ ಜನರು ರೋಧಿಸುವದನ್ನು ನಾವು ಕೇಳುವೆವು. ಬಾಬಿಲೋನ್ ಪ್ರದೇಶದಲ್ಲಿ ವಸ್ತುಗಳನ್ನು ನಾಶಮಾಡುವ ಜನರ ಧ್ವನಿಯನ್ನು ನಾವು ಕೇಳುವೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 “ಆಹಾ, ಬಾಬೆಲಿನಿಂದ ಮೊರೆಯೂ, ಕಸ್ದೀಯರ ದೇಶದಿಂದ ಮಹಾನಾಶದ ಶಬ್ದವೂ ಕೇಳಿ ಬರುತ್ತದೆ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 “ಇಗೋ ಕೇಳಿಬರುತ್ತಿದೆ ಬಾಬಿಲೋನಿನಿಂದ ಕೂಗಾಟ! ಆ ಬಾಬಿಲೋನಿಯರ ದೇಶದಿಂದ ಮಹಾ ವಿನಾಶದ ಕಿರುಚಾಟ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ಆಹಾ, ಬಾಬೆಲಿನಿಂದ ಮೊರೆಯೂ ಕಸ್ದೀಯರ ದೇಶದಿಂದ ಮಹಾನಾಶನದ ಶಬ್ದವೂ ಕೇಳ ಬರುತ್ತವೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 “ಬಾಬಿಲೋನಿನಿಂದ ಕೂಗುವ ಶಬ್ದವು! ಕಸ್ದೀಯರ ದೇಶದಿಂದ ದೊಡ್ಡ ನಾಶದ ಶಬ್ದವೂ ಬರುವುದು. ಅಧ್ಯಾಯವನ್ನು ನೋಡಿ |
ವೈರಿಯು ಆರ್ಭಟಿಸುತ್ತಾ ಗದ್ದಲ ಮಾಡುತ್ತಾನೆ. ಆ ಭಯಂಕರ ಶತ್ರುವು ಯುದ್ಧಕ್ಕೆ ಬಾ ಎಂದು ಸವಾಲು ಹಾಕುತ್ತಾನೆ. ಆದರೆ ದೇವರೇ, ನೀನು ಅವನನ್ನು ತಡೆಯುವೆ. ಬೇಸಿಗೆ ಕಾಲದಲ್ಲಿ ಮರುಭೂಮಿಯಲ್ಲಿರುವ ಸಸಿಗಳು ಬಾಡಿಹೋಗಿ ನೆಲದ ಮೇಲೆ ಬಿದ್ದುಹೋಗುವವು. ಅದೇ ರೀತಿಯಲ್ಲಿ ನೀನು ವೈರಿಯನ್ನು ಸೋಲಿಸಿ ಅವನು ಮೊಣಕಾಲೂರುವಂತೆ ಮಾಡುವೆ. ಕಾರ್ಮುಗಿಲು ಬೇಸಿಗೆಯ ತಾಪವನ್ನು ನಿವಾರಿಸುವದು. ಅದೇ ರೀತಿಯಲ್ಲಿ ನೀನು ಶತ್ರುವಿನ ಆರ್ಭಟವನ್ನು ನಿಲ್ಲಿಸುವೆ.