ಯೆರೆಮೀಯ 51:56 - ಪರಿಶುದ್ದ ಬೈಬಲ್56 ಸೈನ್ಯವು ಬಂದು ಬಾಬಿಲೋನನ್ನು ನಾಶಮಾಡುವುದು. ಬಾಬಿಲೋನಿನ ಸೈನಿಕರನ್ನು ವಶಪಡಿಸಿಕೊಳ್ಳಲಾಗುವುದು. ಅವರ ಬಿಲ್ಲುಗಳನ್ನು ಮುರಿಯಲಾಗುವುದು. ಏಕೆಂದರೆ ಯೆಹೋವನು ಜನರನ್ನು ಅವರು ಮಾಡುವ ದುಷ್ಕೃತ್ಯಗಳಿಗಾಗಿ ಶಿಕ್ಷಿಸುತ್ತಾನೆ. ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಸಂಪೂರ್ಣವಾಗಿ ಕೊಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ, ಅವರ ಬಿಲ್ಲುಗಳು ಮುರಿದುಹೋಗಿವೆ; ಏಕೆಂದರೆ ಯೆಹೋವನು ಮುಯ್ಯಿತೀರಿಸುವ ದೇವರು, ಆತನು ಪ್ರತಿಕ್ರಿಯಿಸದೆ ಬಿಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)56 ವಿನಾಶಕಾರನು ಬಂದೆರಗಿದ್ದಾನೆ ಬಾಬಿಲೋನಿನ ಮೇಲೆ ಅದರ ಶೂರರೋ ಸೆರೆಯಾಗಿಬಿಟ್ಟಿದ್ದಾರೆ ಅವರ ಬಿಲ್ಲುಗಳೋ ಮುರಿದುಹೋಗಿವೆ. ಸರ್ವೇಶ್ವರನು ಮುಯ್ಯಿತೀರಿಸುವ ದೇವರು ಆತ ಪ್ರತಿಕ್ರಿಯೆ ವ್ಯಕ್ತಪಡಿಸದೆ ಇರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)56 ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ, ಅದರ ಬಿಲ್ಲುಗಳು ಮುರಿದುಹೋಗಿವೆ; ಏಕಂದರೆ ಯೆಹೋವನು ಮುಯ್ಯಿತೀರಿಸುವ ದೇವರು, ಆತನು ಪ್ರತಿಕ್ರಿಯೆಮಾಡದೆ ಬಿಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ56 ಏಕೆಂದರೆ ವಿನಾಶ ಮಾಡುವವನು ಅದರ ಮೇಲೆ ಅಂದರೆ ಬಾಬಿಲೋನಿನ ಮೇಲೆಯೇ ಬಂದಿದ್ದಾನೆ. ಅದರ ಪರಾಕ್ರಮಶಾಲಿಗಳು ಸೆರೆಯಾಗಿಬಿಟ್ಟಿದ್ದಾರೆ. ಅವಳ ಬಿಲ್ಲುಗಳು ಮುರಿದುಹೋಗಿವೆ. ಏಕೆಂದರೆ ಪ್ರತಿದಂಡನೆಗಳ ದೇವರಾದ ಯೆಹೋವ ದೇವರು ನಿಶ್ಚಯವಾಗಿ ಮುಯ್ಯಿಗೆ ಮುಯ್ಯಿ ತೀರಿಸುವರು. ಅಧ್ಯಾಯವನ್ನು ನೋಡಿ |