ಯೆರೆಮೀಯ 51:57 - ಪರಿಶುದ್ದ ಬೈಬಲ್57 ಬಾಬಿಲೋನಿನ ಮುಖ್ಯ ಅಧಿಕಾರಿಗಳಿಗೂ ಪಂಡಿತರಿಗೂ ದ್ರಾಕ್ಷಾರಸ ಕುಡಿಯುವಂತೆ ಮಾಡುತ್ತೇನೆ. ಅಲ್ಲಿಯ ಅಧಿಪತಿಗಳಿಗೂ ಅಧಿಕಾರಿಗಳಿಗೂ ಸೈನಿಕರಿಗೂ ದ್ರಾಕ್ಷಾರಸ ಕುಡಿಸುತ್ತೇನೆ. ಆಮೇಲೆ ಅವರು ಶಾಶ್ವತವಾಗಿ ಮಲಗಿಬಿಡುತ್ತಾರೆ. ಅವರು ಎಚ್ಚರಗೊಳ್ಳುವುದೇ ಇಲ್ಲ.” ಸರ್ವಶಕ್ತನಾದ ಯೆಹೋವನೆಂಬ ನಾಮಧೇಯದ ರಾಜಾಧಿರಾಜನ ನುಡಿಯಿದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201957 ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)57 ಬಾಬಿಲೋನಿನ ರಾಜ್ಯಪಾಲರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಯೋಧರು, ಇವರೆಲ್ಲರಿಗೆ ತಲೆಗೇರುವ ತನಕ ಕುಡಿಸುವೆನು. ಅವರು ಎಂದೆಂದಿಗೂ ಎಚ್ಚರಗೊಳ್ಳದೆ ಚಿರನಿದ್ರೆ ಮಾಡುವರು ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರನೆಂಬ ರಾಜಾಧಿರಾಜರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)57 ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನಾಮಧೇಯದ ರಾಜಾಧಿರಾಜನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ57 ಇದಲ್ಲದೆ ನಾನು ಅವಳ ಪ್ರಧಾನರನ್ನೂ, ಅವಳ ಜ್ಞಾನಿಗಳನ್ನೂ, ಅವಳ ಅಧಿಪತಿಗಳನ್ನೂ, ಅವಳ ಅಧಿಕಾರಿಗಳನ್ನೂ, ಅವಳ ಪರಾಕ್ರಮಶಾಲಿಗಳನ್ನೂ ಮತ್ತರಾಗಿ ಮಾಡುತ್ತೇನೆ. ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಎಂಬ ಹೆಸರುಳ್ಳ ರಾಜಾಧಿರಾಜರು ಸಾರುತ್ತಾರೆ. ಅಧ್ಯಾಯವನ್ನು ನೋಡಿ |
ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.