Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:61 - ಪರಿಶುದ್ದ ಬೈಬಲ್‌

61 ಯೆರೆಮೀಯನು ಸೆರಾಯನಿಗೆ ಹೀಗೆ ಹೇಳಿದನು: “ಸೆರಾಯನೇ, ಬಾಬಿಲೋನಿಗೆ ಹೋಗು. ಎಲ್ಲರಿಗೂ ಕೇಳಿಸುವಂತೆ ಈ ಸಂದೇಶವನ್ನು ಖಂಡಿತವಾಗಿ ಓದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

61 ಅವನು ಸೆರಾಯನಿಗೆ ಹೀಗೆ ಹೇಳಿದನು, “ನೋಡು, ನೀನು ಬಾಬಿಲೋನಿಗೆ ಸೇರಿದ ಮೇಲೆ ಈ ಮಾತುಗಳನ್ನೆಲ್ಲಾ ಓದಿ ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

61 “ನೋಡು, ನೀನು ಬಾಬಿಲೋನನ್ನು ತಲುಪಿದ ಮೇಲೆ ಈ ಮಾತುಗಳನ್ನೆಲ್ಲ ತಕ್ಕವರಿಗೆ ಓದಿ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

61 ಸೆರಾಯನಿಗೆ ಹೀಗೆ ಹೇಳಿದನು - ನೋಡು, ನೀನು ಬಾಬೆಲಿಗೆ ಸೇರಿದ ಮೇಲೆ ಈ ಮಾತುಗಳನ್ನೆಲ್ಲಾ [ತಕ್ಕವರಿಗೆ] ಓದಿ ಹೇಳಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

61 ಯೆರೆಮೀಯನು ಸೆರಾಯನಿಗೆ ಹೇಳಿದ್ದೇನೆಂದರೆ, “ನೀನು ಬಾಬಿಲೋನಿಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:61
9 ತಿಳಿವುಗಳ ಹೋಲಿಕೆ  

ದೇವರಿಂದ ಬಂದ ಈ ಸಂದೇಶದ ವಾಕ್ಯಗಳನ್ನು ಓದುವವರೂ ಈ ಸಂದೇಶವನ್ನು ಕೇಳಿ ಅದನ್ನು ಕೈಕೊಂಡು ನಡೆಯುವವರೂ ಭಾಗ್ಯವಂತರಾಗಿದ್ದಾರೆ. ಏಕೆಂದರೆ ನೆರವೇರುವ ಕಾಲವು ಸಮೀಪವಾಗಿದೆ.


ಈ ಪತ್ರವನ್ನು ಸಹೋದರ ಸಹೋದರಿಯರಿಗೆಲ್ಲಾ ಓದಿ ತಿಳಿಸಬೇಕೆಂದು ನಾನು ನಿಮಗೆ ಪ್ರಭುವಿನ ಅಧಿಕಾರದಿಂದ ಹೇಳುತ್ತಿದ್ದೇನೆ.


ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.


ಈ ಪತ್ರವನ್ನು ಓದಿದ ನಂತರ ಲವೊದಿಕೀಯದ ಸಭೆಯವರಿಗೂ ಓದಲು ಕೊಡಿರಿ. ನಾನು ಲವೊದಿಕೀಯದವರಿಗೆ ಬರೆದಿರುವ ಪತ್ರವನ್ನು ನೀವೂ ಓದಿರಿ.


ಯೇಸು ದೇವಾಲಯದಿಂದ ಹೊರಡುತ್ತಿರಲು ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಗುರುವೇ, ನೋಡು! ಈ ದೇವಾಲಯ ಎಂಥಾ ದೊಡ್ಡ ಕಲ್ಲುಗಳಿಂದ ಮಾಡಿದ ಎಂಥಾ ಸುಂದರ ಕಟ್ಟಡಗಳನ್ನು ಹೊಂದಿದೆ” ಎಂದನು.


ಯೇಸು ದೇವಾಲಯದಿಂದ ಹೋಗುತ್ತಿದ್ದಾಗ ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸಲು ಆತನ ಬಳಿಗೆ ಬಂದರು.


ಬಾಬಿಲೋನಿಗೆ ಉಂಟಾಗುವ ಎಲ್ಲಾ ಕೇಡನ್ನು ಯೆರೆಮೀಯನು ಒಂದು ಸುರಳಿಯಲ್ಲಿ ಬರೆದಿದ್ದನು. ಅವನು ಬಾಬಿಲೋನಿನ ಬಗ್ಗೆ ಈ ವಿಷಯಗಳನ್ನೆಲ್ಲ ಬರೆದಿದ್ದನು.


ಆಮೇಲೆ ಹೀಗೆ ಹೇಳು: ‘ಯೆಹೋವನೇ, ಬಾಬಿಲೋನ್ ನಗರವನ್ನು ನಾಶಮಾಡುವೆನೆಂದು ನೀನು ಹೇಳಿರುವೆ. ಪ್ರಾಣಿಗಳು ಅಥವಾ ಮನುಷ್ಯರು ಯಾರೂ ಇಲ್ಲಿ ವಾಸಮಾಡದಂತೆ, ಇದು ಎಂದೆಂದಿಗೂ ಹಾಳುಬಿದ್ದ ಸ್ಥಳವಾಗಿರುವಂತೆ ಇದನ್ನು ನಾಶಮಾಡುವದಾಗಿ ಹೇಳಿರುವೆ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು